ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಹಾಗೂ ಆಷಾಡ ಶುಕ್ರವಾರ ಗಳ ಪೂರ್ವಸಿದ್ಧತಾ ಸಭೆ – ಜಿ ಲಕ್ಷ್ಮೀಕಾಂತ ರೆಡ್ಡಿ.

ಮೈಸೂರು  : ಚಾಮುಂಡೇಶ್ವರಿ ಅಮ್ಮನವರ ಜನ್ಮೋ ತ್ಸವ ಹಾಗೂ ಆಷಾಡ ಶುಕ್ರವಾರ ಗಳ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಆಷಾಡ ಮಾಸದ 4 ಶುಕ್ರವಾರ ಗಳು ಮತ್ತು ಅಮ್ಮನವರ ಜನ್ಮೋತ್ಸವ ಪ್ರಯುಕ್ತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಷಾಡ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ. ವಾಹನಗಳನ್ನು ಲಲಿತಾ ಮಹಲ್ ಹೊಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು. ಭಕ್ತಾದಿಗಳಿಗೆ ಸಾರ್ವಜನಿಕ ವಾಹನ ವ್ಯವಸ್ಥೆ ಮಾಡಲಾಗುವುದು.

ಜೂನ್ 27, ಜುಲೈ 04, ಜುಲೈ 11, ಜುಲೈ 18 ರಂದು ನಾಲ್ಕು ಆಷಾಡ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಬೇಕು. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಚತೆ ಮಾಡಬೇಕು. ಚೆಸ್ಕಾಂ ವತಿಯಿಂದ 1000 ಮೆಟ್ಟಿಲುಗಳ ಬಳಿಯಿರುವ ವಿದ್ಯುತ್ ದೀಪಗಳ ದುರಸ್ಥಿ ಹಾಗೂ ಬೆಟ್ಟದ ದೇವಾಲಯಗಳಿಗೆ ದೀಪಾಲಂಕಾರ ಮಾಡಬೇಕು ಎಂದು ತಿಳಿಸಿದರು.

ಆಷಾಡ ಶುಕ್ರವಾರ ಹಾಗೂ ಆಷಾಡ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿದ್ದು, ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಗಳ ಟಿಕೆಟ್ ನಿಗದಿ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ರಾದ ಶೇಖ್ ತನ್ವೀರ್ ಆಸಿಫ್, ಡಿಸಿಪಿ ಮುತ್ತುರಾಜ್, ಚಾಮುಂಡೇಶ್ವರಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!