ರಾಷ್ಟ್ರಪತಿಗಳ ಮೈಸೂರು ಪ್ರವಾಸ.. !

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿದ್ದಾರೆ. ಇವತ್ತು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನ ಆಯುಷ್ (ಎಐಐಎಸ್‌ಹೆಚ್)ನಲ್ಲಿ ಯಾವುದೇ ಚಿಕಿತ್ಸೆಗಳು ಲಭ್ಯ ಇರುವುದಿಲ್ಲ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿರುತ್ತದೆ.

ಅದರಂತೆ ಸಂಜೆ ವೇಳೆಗೆ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಈ ವೇಳೆ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಎಂಟು ಗಂಟೆ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಹೋಗುವವರು ಈ ಬಗ್ಗೆ ಮಾಹಿತಿ ತಿಳಿದಿರಬೇಕು. ರಾಷ್ಟ್ರಪತಿ ಭೇಟಿ ನೀಡುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಸೆಪ್ಟೆಂಬರ್ 2, ಅಂದರೆ ನಾಳೆ ರಾಷ್ಟ್ರಪತಿಗಳು ಐತಿಹಾಸಿಕವಾದ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಭದ್ರತಾ ಹಿತದೃಷ್ಟಿಯಿಂದ ಹಾಗೂ ಶಿಷ್ಟಾಚಾರ ಪಾಲನೆಗಾಗಿ ನಾಳೆ ಪ್ರವಾಸಿಗರಿಗೆ ಅರಮನೆಯ ಪ್ರವೇಶ, ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಇಂದಿನಿಂದ ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಧ್ವನಿ, ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿರುತ್ತದೆ.

Related Posts

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!