ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆದ್ಯತೆ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ವಿಶೇಷ ಸಚಿವ ಸಂಪುಟ ನಡೆಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಯುಕೆಪಿ ಹಂತ-3: ರೈತರ ಜೀವನಮಟ್ಟ ಸುಧಾರಣೆ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಈ ಜಮೀನಿಗೆ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಕ್ಕೂ ಭೂಮಿಯ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಣೆಯಾಗಲಿದೆ ಎಂದರು.

ನೀರಾವರಿ ಜಮೀನಿಗೆ 40 ಲಕ್ಷ: ಒಣಭೂಮಿಗೆ 30 ಲಕ್ಷ ಪರಿಹಾರ

ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದರು.

ಕಾಲುವೆ ನಿರ್ಮಾಣ: ನೀರಾವರಿ ಜಮೀನಿಗೆ 30 ಲಕ್ಷ: ಒಣಭೂಮಿಗೆ 25 ಲಕ್ಷ ಪರಿಹಾರ

ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದರು.

ಬಿಜೆಪಿ ಅವಧಿಯಲ್ಲಿ ಯುಕೆಪಿ ಹಂತ 3 ಯೋಜನೆ ನೆನೆಗುದಿಗೆ ಬಿದ್ದಿತ್ತು

ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ , ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು ಎಂದರು.

ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಒತ್ತಾಯ

ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ Consent award ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗಧಿಯಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನಿಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರದವರನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ ಎಂದರು.

ಯೋಜನೆಗೆ ಸುಮಾರು 70 ಸಾವಿರ ಕೋಟಿ ವೆಚ್ಚವಾಗಲಿದೆ

ರೈತರಿಗೆ ಪರಿಹಾರ ಧನ ಕೊಡುವ ನಿರ್ಣಯದಿಂದ ಸರ್ಕಾರದ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು , ಕೆಲವು ಪಟ್ಟಣ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗುವ ಅಂದಾಜು ಇದೆ ಎಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ವಿವರಿಸಿದರು.

ಕೇಂದ್ರದ ಅಧಿಸೂಚನೆ ಬರುವ ಮುಂಚೆಯೇ , ಕಾಮಗಾರಿ ಪ್ರಾರಂಭಿಸಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕಾಲುವೆ ನಿರ್ಮಾಣದ ಕೆಲಸ ಈಗಾಗಲೇ ಪ್ರಾರಂಭಿಸಲಾಗಿದ್ದು, ಅಧಿಸೂಚನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!