ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ…

ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ…

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಭಾರತ್ ಜೋಡೋ ಯಾತ್ರೆ ಹಾಗೂ ನ್ಯಾಯ್ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸಿ ಕಾಂಗ್ರೆಸ್​ ಪಕ್ಷಕ್ಕೆ ಬಲ ತುಂಬಿದ್ದರು. ಈ ಹಿನ್ನೆಲೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್​ 99 ಸೀಟು ಗೆದ್ದು ಹೆಚ್ಚಿನ ಸ್ಥಾನ ಗಳಿಸಿದೆ. ಹೀಗಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಯೇ ಆಗಬೇಕೆಂದು ಕಾಂಗ್ರೆಸ್‌ ನಾಯಕರು ಆಗ್ರಹ ಮಾಡಿದ್ದರು. ಆದರೆ ರಾಹುಲ್‌ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್‌ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!