ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025 ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ರಜತ್ ಪಾಟಿದಾರ್ಗೆ ವಹಿಸಲಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.