ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು : ಸಿಎಂ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು. ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!