ಹಿಂದಿ ಪ್ರಚಾರ ಸಮಿತಿಗೆ ರಮೇಶ್ ಪಾಟೀಲ್ ಸೊಲಪೂರ ಆಯ್ಕೆ: ಗ್ರಾಮಸ್ಥರಿಂದ ಸನ್ಮಾನ.

ಬೀದರ್ ಜಿಲ್ಲೆಯ ಸೊಲಪೂರ ಗ್ರಾಮದವರೂ ಹಾಗೂ ಪ್ರಸ್ತುತ ಜೆಡಿಎಸ್ ಜಿಲ್ಲಾಧ್ಯಕ್ಷರೂ ಆಗಿರುವ ರಮೇಶ್ ಪಾಟೀಲ್ ಸೊಲಪೂರ ಅವರು ಕೇಂದ್ರ ಸರ್ಕಾರದ ಉಕ್ಕು ಮಂತ್ರಾಲಯದ ವತಿಯಿಂದ ರಚಿಸಲಾಗಿರುವ ಹಿಂದಿ ಪ್ರಚಾರ ಹಾಗೂ ಪ್ರಸಾರ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಗೌರವಕ್ಕೆ ಪಾತ್ರರಾದ ಅವರನ್ನು ಗ್ರಾಮದ ‘ಪುಣ್ಯಕೋಟಿ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು. ರಮೇಶ್ ಪಾಟೀಲ್ ಅವರು ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲದಂತೆ ಪ್ರಾಮಾಣಿಕ ಮತ್ತು ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಅವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಾಂತ ಸ್ವಾಮಿ ಅವರು, “ಒಂದು ಸಣ್ಣ ಹಳ್ಳಿಯಾದ ಸೊಲಪೂರಕ್ಕೆ ರಮೇಶ್ ಪಾಟೀಲ್ ಅವರ ಶ್ರಮದಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡುವಂತಾಗಿದ್ದು ನಮ್ಮ ಗ್ರಾಮಕ್ಕೆ ಹೆಮ್ಮೆಯ ವಿಷಯ. ಈಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇವರಿಗೆ ಹೊಸ ಜವಾಬ್ದಾರಿ ದೊರೆತಿರುವುದು ಸಂತೋಷ ತಂದಿದೆ. ಇವರ ಸಾಧನೆಯು ಗ್ರಾಮದ ಯುವಕರಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯಲು ದೊಡ್ಡ ಪ್ರೇರಣೆಯಾಗಲಿದೆ,” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘಶೆಟ್ಟಿ ಖೆಳಗೆ, ಸಿದ್ದಪ್ಪಾ ಖೆಳಗೆ, ರಾಜಕುಮಾರ್ ಮಡಿವಾಳ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!