ಹೆರಿಗೆ ನೋವಿನ ಬಳಿಕ ಬಾಲಕಿ ಮೇಲಿನ ಅ***ರ ಬೆಳಕಿಗೆ ಬಂದಿದೆ

 ನೇಪಾಳ: 15ರ ಬಾಲಕಿಯ ಗರ್ಭಿಣಿ ಮಾಡಿದ 17ರ ಬಾಲಕ ಅರೆಸ್ಟ್ ತನ್ನ ನೆರೆಮನೆಯ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ 17 ವರ್ಷದ ಕಾನೂನು ಸಂಘರ್ಷಕ್ಕೊಳಗಾಗದ ಬಾಲಕನೊಬ್ಬನನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ನೇಪಾಳ ಮೂಲದ ಸಂತ್ರಸ್ತ ಬಾಲಕಿಗೆ ಗರ್ಭಪಾತವಾದ ಬಳಿಕ ಈ ಲೈಂಗಿಕ ಶೋಷಣೆ ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ಬಾಲಕನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲವು ದಿನದ ಹಿಂದೆ ಉದ್ಯೋಗ ಅರಸಿ ನಗರಕ್ಕೆ ನೇಪಾಳದಿಂದ ಸಂತ್ರಸ್ತ ಕುಟುಂಬದ ಹಾಗೂ ರಾಜಸ್ಥಾನದಿಂದ ಆರೋಪಿತ ಬಾಲಕ ಪರಿವಾರ ಬಂದಿದ್ದರು. ಶಂಕರಪುರವ್ಯಾಪ್ತಿಯಲ್ಲಿ ಎರಡು ಕುಟುಂಬಗಳು ನೆರೆಹೊರೆಯಲ್ಲಿ ನೆಲೆಸಿದ್ದವು. ಮನೆ ಸಮೀಪದ ಶಾಲೆಯಲ್ಲಿ 9ನೇ ತರಗತಿಯಲ್ಲಿ ಸಂತ್ರಸ್ತೆ ಹಾಗೂ ಬಾಲಕ ಪಿಯುಸಿ ಓದುತ್ತಿದ್ದ. ಇನ್ನು ಖಾಸಗಿ ಕಂಪನಿ ಯಲ್ಲಿ ಬಾಲಕಿ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಆರೋಪಿ ಬಾಲಕನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಎರಡು ಕುಟುಂಬಗಳ ನಡುವೆ ಸ್ನೇಹ ಬಾಂಧವ್ಯ ಇತ್ತು.

ಈ ಗೆಳೆತನದಲ್ಲೇ ಬಾಲಕಿ ಮನೆಗೆ ಬಂದು ಹೋಗುವುದನ್ನು ಬಾಲಕ ಮಾಡುತ್ತಿದ್ದ. ಆಗ ಆಕೆಯ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾನೆ. ಅತ್ಯಾಚಾರದಿಂದ ಗರ್ಭಧರಿಸಿದ್ದಳು. 2 ದಿನದಹಿಂದೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡು ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದರು. ಅಷ್ಟರಲ್ಲಿ ಗರ್ಭಪಾತವಾಗಿತ್ತು ಎಂದು ತಿಳಿದು ಬಂದಿದೆ.

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್