RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ; ನಾಯಕ ರಜತ್ ಫಿಟ್….

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಆರ್ಸಿಬಿ ಪಡೆ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16 ಅಂಕಗಳನ್ನು ಕಲೆಹಾಕಿದೆ. ಇನ್ನು ಒಂದು ಮ್ಯಾಚ್ ಜಯಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ. ಸೀಸನ್-18ರ ಪುನರಾರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶನಿವಾರದಿಂದ ಆರಂಭವಾಗಲಿರುವ ಐಪಿಎಲ್ನ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ರಜತ್ ಪಾಟಿದಾರ್ ಅವರ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಬ್ಯಾಂಡೇಜ್ ಹಾಕಿಕೊಂಡಿದ್ದ ಪಾಟಿದಾರ್ಗೆ ವೈದ್ಯರು ಕೆಲ ದಿನಗಳವರೆಗೆ ವಿಶ್ರಾಂತಿ ಸೂಚಿಸಿದ್ದರು. ಇದೀಗ ವಿಶ್ರಾಂತಿ ಮುಗಿಸಿ ರಜತ್ ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.ಈ ವೇಳೆ ಅವರ ಕೈಗೆ ಹಾಕಲಾಗಿರುವ ಬ್ಯಾಂಡೇಜ್ ಅನ್ನು ಬಿಚ್ಚಿರುವುದು ಕಂಡು ಬಂದಿದೆ. ಇದೇ ವೇಳೆ ಯಾವುದೇ ಸಮಸ್ಯೆ ಇಲ್ಲದಂತೆ ಭಾಸವಾಗಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಇದಕ್ಕೂ ಮುನ್ನ ಬೆರಳಿಗೆ ಗಾಯವಾಗಿರುವ ಕಾರಣ ರಜತ್ ಪಾಟಿದಾರ್ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಪಾಟಿದಾರ್ ಬದಲಿಗೆ ಆರ್ಸಿಬಿ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಿತೇಶ್ ಶರ್ಮಾಗೆ ವಹಿಸಲಾಗಿತ್ತು. ಆದರೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ಪಾಟಿದಾರ್ ಆರ್ಸಿಬಿ ತಂಡಕ್ಕೆ ಮರಳಿದ್ದು, ಹೀಗಾಗಿ ಉಳಿದ ಪಂದ್ಯಗಳಲ್ಲಿ ಅವರೇ ಆರ್ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ.ಒಟ್ಟಿನಲ್ಲಿ ಐಪಿಎಲ್ ಅನ್ನು ಒಂದು ವಾರದವರೆಗೆ ಮುಂದೂಡಿದ್ದು, ಆರ್ಸಿಬಿ ಪಾಲಿಗೆ ವರವಾಗಿ ಪರಿಣಮಿಸಿದೆ. ಏಕೆಂದರೆ ಈ ಒಂದು ವಾರದ ಅವಧಿಯಲ್ಲಿ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರ ಬೆರಳಿನ ಗಾಯವು ಗುಣವಾಗಿದೆ. ಇದರೊಂದಿಗೆ ಆರ್ಸಿಬಿ ತಂಡದ ಉಳಿದ ಪಂದ್ಯಗಳಲ್ಲೂ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!