RCB ತಂಡಕ್ಕೆ ಕೆರಿಬಿಯನ್ ದೈತ್ಯ ರೈನೊ ರೊಮಾರಿಯೊ ಶೆಫರ್ಡ್ ಎಂಟ್ರಿ….

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ 11 ಮ್ಯಾಚ್ಗಳಲ್ಲಿ ಆರ್ಸಿಬಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 16 ಅಂಕಗಳನ್ನು ಹೊಂದಿರುವ ರಾಯಲ್ ಪಡೆಯು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.ಐಪಿಎಲ್ ಸೀಸನ್-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.ಇನ್ನು ಇಂಗ್ಲೆಂಡ್ ಆಟಗಾರರಾದ ಲಿಯಾಮ್ ಲಿವಿಂಗ್ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧ ಆರ್ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!