ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ.
ಎರಡನೇ ಸೀಸನ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್‌ಸಿಬಿ ತಂಡವು ಈ ಬಾರಿ ಕೂಡ ಭರ್ಜರಿ ಫಾರ್ಮ್‌ನಲ್ಲಿದೆ. ಸ್ಮೃತಿ ಮಂಧಾನ ಮತ್ತು ರಿಚಾ ಘೋಷ್ ಅವರಂತಹ ಆಟಗಾರ್ತಿಯರು ತಂಡದ ಬಲವಾಗಿದ್ದಾರೆ. ಮತ್ತೊಂದೆಡೆ ಮೂರು ಬಾರಿ ಫೈನಲ್ ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬಾರಿಗೆ ಟ್ರೋಫಿ ಗೆಲ್ಲುವ ತವಕದಲ್ಲಿದೆ.
ಒಟ್ಟಿನಲ್ಲಿ ವಡೋದರಾದಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯವು ಕೋಟಿಗಟ್ಟಲೆ ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ಈ ಸಲವೂ ಕಪ್ ನಮ್ದೇ’ ಎನ್ನುತ್ತಿರುವ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡದ ಗೆಲುವಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.




