ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್.

ಐಪಿಎಲ್ 2025 ಫೈನಲ್‌ಗೆ ಮುನ್ನ ತಮ್ಮ ಮಗುವಿನ ಜನನದಿಂದಾಗಿ ತಾಯ್ನಾಡಿಗೆ ಹೋಗಿದ್ದ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಅವರು ಅಹಮದಾಬಾದ್‌ಗೆ ಮರಳಿದ್ದಾರೆ. ತಂಡದೊಂದಿಗೆ ಸೇರಿಕೊಂಡಿರುವ ಸಾಲ್ಟ್, ಫೈನಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅವರ ಆಗಮನವು ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದೆ. ಸಾಲ್ಟ್ ಅವರ ಪ್ರಮುಖ ಇನ್ನಿಂಗ್ಸ್‌ಗಳು ಈ ಸೀಸನ್‌ನಲ್ಲಿ ಆರ್‌ಸಿಬಿಗೆ ಬಹಳಷ್ಟು ನೆರವಾಗಿದೆ.

9 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2025 ಫೈನಲ್ ಆಡಲು ಸಿದ್ಧವಾಗಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ ಆರ್ಸಿಬಿಗೆ ಫೈನಲ್ ಪಂದ್ಯಕ್ಕೂ ಮುನ್ನ ಕಾಡುತ್ತಿದ್ದ ಅದೊಂದು ಭಯಕ್ಕೆ ಮುಕ್ತಿ ಸಿಕ್ಕಿದೆ. ಅದೆನೆಂದರೆ ಫೈನಲ್ ಪಂದ್ಯಕ್ಕೂ ಮುನ್ನ ತಂದೆಯಾದ ಖುಷಿಯಲ್ಲಿದ್ದ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಅವರು ಫೈನಲ್ ಆಡುತ್ತಾರೋ? ಇಲ್ಲವೋ ಎಂಬ ಆತಂಕ ಶುರುವಾಗಿತ್ತು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಮಡದಿ ಹಾಗೂ ಮಗುವಿನ ಮುಖ ನೋಡಿ ಫಿಲ್ ಸಾಲ್ಟ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಅಲ್ಲದೆ ಅಹಮದಾಬಾದ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ಆರ್ಸಿಬಿ ಪರ ಸಾಲ್ಟ್ ಪ್ರದರ್ಶನ

 

 

 

 

 

 

 

 

 

ಈ ಸೀಸನ್‌ನಲ್ಲಿ ಆರ್ಸಿಬಿ ಪರ ಹಲವು ಪ್ರಮುಖ ಇನ್ನಿಂಗ್ಸ್ಗಳನ್ನು ಆಡಿರುವ ಫಿಲ್ ಸಾಲ್ಟ್ ಆಡಿರುವ 12 ಪಂದ್ಯಗಳಲ್ಲಿ 387 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಸ್ಟ್ರೈಕ್ ರೇಟ್ 175.90 ಮತ್ತು ಸರಾಸರಿ 35.18 ಆಗಿದೆ. ಅದೇ ಸಮಯದಲ್ಲಿ, ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸಾಲ್ಟ್ 27 ಎಸೆತಗಳಲ್ಲಿ 56 ಅಜೇಯ ರನ್ ಗಳಿಸುವ ಮೂಲಕ ಆರ್‌ಸಿಬಿ 10 ಓವರ್‌ಗಳಲ್ಲಿ 102 ರನ್‌ಗಳ ಗುರಿ ತಲುಪುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಫೈನಲ್ ಪಂದ್ಯಕ್ಕೆ ಸಾಲ್ಟ್ ಲಭ್ಯತೆ ಅತ್ಯವಶ್ಯಕವಾಗಿತ್ತು.

ಆರ್‌ಸಿಬಿಗೆ ಫಿಲ್ ಸಾಲ್ಟ್ ಅಗತ್ಯ

 

 

 

 

 

 

 

 

 

ಈ ಆವೃತ್ತಿಯಲ್ಲಿ ಸಾಲ್ಟ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಅನೇಕ ಪಂದ್ಯಗಳಲ್ಲಿ ಆರ್‌ಸಿಬಿಗೆ ಬಲವಾದ ಆರಂಭವನ್ನು ನೀಡಿದೆ. ಅವರ ಮತ್ತು ವಿರಾಟ್ ಕೊಹ್ಲಿಯ ಆರಂಭಿಕ ಜೋಡಿ ಪ್ರತಿ ಓವರ್‌ಗೆ 10.29 ರ ರನ್ ರೇಟ್ನಲ್ಲಿ ರನ್ ಕಲೆಹಾಕಿತ್ತು. ಹೀಗಾಗಿ ಫೈನಲ್ ಪಂದ್ಯದಲ್ಲೂ ಈ ಜೋಡಿ ಇದೇ ರೀತಿಯ ಪ್ರದರ್ಶನ ನೀಡಿದರೆ ಆರ್ಸಿಬಿಗೆ ಗೆಲುವು ಸುಲಭವಾಗಿ ದಕ್ಕಲಿದೆ.

ತಂದೆಯಾದ ಫಿಲ್ ಸಾಲ್ಟ್

 

 

 

 

 

 

ಐಪಿಎಲ್‌ ಫೈನಲ್ ಪಂದ್ಯಕ್ಕೂ ಮುನ್ನ, ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರ ಬದ್ಧತೆ ಮತ್ತು ಕ್ರೀಡಾ ಸ್ಫೂರ್ತಿ ಎಲ್ಲರ ಹೃದಯ ಗೆದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೊ ವರದಿಯ ಪ್ರಕಾರ, ಸಾಲ್ಟ್ ತಮ್ಮ ಮೊದಲ ಮಗುವಿನ ಜನನಕ್ಕಾಗಿ ಇಂಗ್ಲೆಂಡ್‌ಗೆ ಹೋಗಿದ್ದರು. ಹೀಗಾಗಿ ಅವರು ಆರ್ಸಿಬಿ ಪಾಳಯದಿಂದ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಬೆಳಿಗ್ಗೆ ಸಾಲ್ಟ್ ಅಹಮದಾಬಾದ್‌ಗೆ ಬಂದಿಳಿದಿದ್ದು ತಂಡವನ್ನು ಕೂಡಿಕೊಂಡಿದ್ದಾರೆ. ಮೇ 29 ರಂದು ನಡೆದಿದ್ದ ಕ್ವಾಲಿಫೈಯರ್ -1 ರಲ್ಲಿ ತಂಡದ ಪರ ಆಡಿದ್ದ ಸಾಲ್ಟ್, ಪಂದ್ಯ ಮುಗಿದ ನಂತರ ತಮ್ಮ ದೇಶಕ್ಕೆ ಮರಳಿದ್ದರು. ಹೀಗಾಗಿ ಆರ್‌ಸಿಬಿಯ ತರಬೇತಿ ಸೆಷನ್ನಲ್ಲಿ ಅವರ ಅನುಪಸ್ಥಿತಿ ಅಭಿಮಾನಿಗಳಲ್ಲಿ ಕಳವಳವನ್ನು ಉಂಟುಮಾಡಿತ್ತು. ಆದರೆ, ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿರುವ ಸುದ್ದಿ ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!