ಗೆಲುವಿನ ಕಿರೀಟ ಮುಡಿಗೇರಿಸಿಕೊಂಡು ಶ್ರೇಯಸ್ ಅಯ್ಯರ್ನನ್ನ ಕಿಚಾಯಿಸಿದ RCB

ಕೇವಲ ಎರಡನೇ ದಿನಗಳ ಅಂತರದಲ್ಲಿ ಆರ್ಸಿಬಿ ತನ್ನ 7ನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಸೋಲು ಕಂಡಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಮೈದಾನಕ್ಕಿಳಿದಿದ್ದ ಆರ್ಸಿಬಿ ಅರ್ಹ ಗೆಲುವು ದಾಖಲಿಸಿತು. ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಕೊಹ್ಲಿ, ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಅಪರೂಪದ ಸಂಭ್ರಮಾಚರಣೆ ಮಾಡುವ ಮೂಲಕ ಪಂಜಾಬ್ ತಂಡವನ್ನು ಅದರಲ್ಲೂ ನಾಯಕ ಶ್ರೇಯಸ್ ಅಯ್ಯರ್ನನ್ನು ಸರಿಯಾಗಿ ಕಿಚಾಯಿಸಿದರು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ವಾಸ್ತವವಾಗಿ 19ನೇ ಓವರ್ನ ಕೊನೆಯ ಎಸೆತವನ್ನು ಸಿಕ್ಸರ್ಗಟ್ಟುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇತ್ತ ತಂಡ ಗೆಲ್ಲುತ್ತಿದ್ದಂತೆ ಕ್ರೀಸ್ನಲ್ಲಿದ್ದ ಕೊಹ್ಲಿ, ಶ್ರೇಯಸ್ ಅಯ್ಯರ್ ಕಡೆಗೆ ತಿರುಗಿ ತಮಾಷೆಯಾಗಿ ಸಂಭ್ರಮಾಚರಣೆ ಮಾಡಿದರು. ಇದನ್ನು ನೋಡಿದ ಅಯ್ಯರ್ ಕೊಂಚ ಕೋಪಗೊಂಡಂತೆ ಕಂಡುಬಂತು.

ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಹ್ಯಾಂಡ್ಶೇಕ್ ಮಾಡತ್ತಿರುವಾಗ ಅಯ್ಯರ್ ಕೋಪದಲ್ಲಿ ಕೊಹ್ಲಿ ಬಳಿ ಮಾತನಾಡಿದರು. ಆದರೆ ಕೊಹ್ಲಿ ಮಾತ್ರ ನಗುತ್ತಾ, ಆ ಕ್ಷಣವನ್ನು ಹಗುರಗೊಳಿಸಲು ಪ್ರಯತ್ನಿಸಿದರು. ಆದರೆ ಅಯ್ಯರ್ ಮಾತ್ರ ಸಮಾಧಾನಗೊಂಡವರಂತೆ ಕಂಡುಬರಲಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!