ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ.

ಮೈಸೂರು : ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದವರು.
ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ ರೂ. 25,000/-(ಇಪ್ಪತ್ತೈದು ಸಾವಿರ ರೂಪಾಯಿಗಳು) ಲಂಚದ ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಇಂದು ಆರೋಪಿಗಳಾದ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಅವರು ವ್ಯಕ್ತಿಯಿಂದ ಲಂಚದ ಹಣವನ್ನು ಪಡೆದುಕೊಳ್ಳುವಾಗ ಮೈಸೂರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾರೆ.

ಪೊಲೀಸ್ ಮಹಾನಿರ್ದೇಶಕ ಮನೀಷ್ ಕರ್ಬೀಕರ್ ಮತ್ತು ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣೇಶ್ವರರಾವ್ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಅಧೀಕ್ಷಕ ಉದೇಶ.ಟಿ.ಜೆ, ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಉಮೇಶ್.ಪಿ, ಲೋಕೇಶ್, ರವಿಕುಮಾರ್, ಸಿಬ್ಬಂದಿಯವರುಗಳಾದ ಲೋಕೇಶ್.ಆ‌ರ್.ಎನ್, ಗೋಪಿ.ಹೆಚ್.ಎನ್, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್‌ಗೌಡ, ಮೋಹನ್ ಕುಮಾ‌ರ್, ಲೋಕೇಶ್, ದಿನೇಶ್, ಈ ಕಾರ್ಯಾಚರಣೆ ನಡೆದಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!