ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ರೋಹನ್ ವಿ. ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದಲ್ಲಿ ನಡೆಯುವ ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ಮೈಸೂರಿನ ಕಾನೂನು ವಿದ್ಯಾರ್ಥಿ ರೋಹನ್ ವಿ ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಒಟ್ಟು 737 ಸೀಟುಗಳಿದ್ದು ರೋಹನ್ 36ನೇ ರ‌್ಯಾಂಕ್ ಗಳಿಸಿದ್ದಾರೆ. ಜತೆಗೆ ರಾಜ್ಯ ಮಟ್ಟದಲ್ಲಿ 10 ಸೀಟುಗಳಿದ್ದು 2ನೇ ರ‌್ಯಾಂಕ್ ಪಡೆದಿದ್ದಾರೆ. ಈ ಪರೀಕ್ಷೆಯಲ್ಲಿ ವಿವಿಧ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.‌

ರೋಹನ್ ವಿ ಗಂಗಡ್ಕರ್ ಹಿರಿಯ ವಕೀಲರು ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್ ಎನ್ ವೆಂಕಟೇಶ್ ಹಾಗೂ ಕೆ ಎ‌ ಎಸ್ ಅಧಿಕಾರಿ ಮಂಜುಳಾ ಅವರ ಪುತ್ರ. ರೋಹನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ್ದರು. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.

ಸದ್ಯ ಮೈಸೂರು ಜೆ ಎಸ್ ಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿರುವ ರೋಹನ್ ಹಲವು ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ರಾಜ್ಯ ಹಾಗೂ ಮೈಸೂರು ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಹೈಕೋರ್ಟ್ ಸುಪ್ರೀಂ ಕೋರ್ಟ್ ಜಿಲ್ಲಾ ಹಾಗೂ ರಾಜ್ಯ ಪೊಲೀಸ್ ಸೈಬರ್ ಕಚೇರಿಯಲ್ಲಿ ಯಶಸ್ವಿಯಾಗಿ ಇಂಟೆನ್‌ಶಿಪ್ ಪೂರ್ಣಗೊಳಿಸಿದ್ದಾರೆ.

ರೋಹನ್ ವಿ ಗಂಗಡ್ಕರ್ ತಂದೆ ಎಚ್. ಎನ್. ವೆಂಕಟೇಶ್ ಅವರ ಲಾಗೈಡ್ ಪತ್ರಿಕೆ ಆನ್‌ಲೈನ್ ಸ್ವರೂಪದಲ್ಲಿ ಹೊರಬರಲು ಹಾಗೂ ಅದರಲ್ಲಿ ಜನ ಸಾಮಾನ್ಯರಿಗೆ ಬೇಕಾದ ಲೇಖನಗಳು ಹಾಗೂ ಮಹತ್ವದ ತೀರ್ಪುಗಳ ಲೇಖನ ಹೊರತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

  • Related Posts

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!