ಬೆಂಗಳೂರಿನಲ್ಲಿ ನಾಳೆ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿ ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. IPL 2025ರ 14ನೇ ಇದಾಗಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ.
ಆರ್ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್ ಪಾಟೀದಾರ್ ನೇತೃತ್ವದಲ್ಲಿ ತಂಡಕ್ಕೆ ಹೊಸ ಕಳೆ ಬಂದಿದ್ದು, ಇಲ್ಲಿಯವರೆಗೆ ಆಡಿರುವ ಎರಡೂ ಪಂದ್ಯಗಳನ್ನೂ ಗೆದ್ದುಕೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.





