ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ.

ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.

​ಬೆಂಗಳೂರು, ಜುಲೈ 15: ತಾವು ಎಸ್​​​ಸಿ ಎಸ್​​ಟಿ (SC ST) ಪರ, ಹಿಂದುಳಿದ ವರ್ಗಗಳ ಹಿತ ಕಾಯುವುದೇ ಆದ್ಯತೆ ಹಾಗೂ ಸಂವಿಧಾನಾತ್ಮಕಾಗಿಯೇ ಆಡಳಿತ ನಡೆಸುವುದು ಎಂದೇ ಸದಾ ಬಿಂಬಿಸಿಕೊಂಡು ಬಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಹಿಂದುಳಿದ ವರ್ಗಗಳ ನೌಕರರಿಗೆ ಸಮಸ್ಯೆಯಾಗುತ್ತಿದೆಯೇ? ಇಂಥದ್ದೊಂದು ಪ್ರಶ್ನೆಗೆ ಈಗ ನಡೆದಿರುವ ಬೆಳವಣಿಗೆ ಕಾರಣವಾಗಿದೆ. ಎಸ್​​​ಸಿ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ. ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಧಾನ ಉಂಟಾಗಿ ಸರ್ಕಾರದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂದು ಖರ್ಗೆ ಅವರು ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!