ಶ್ರೀ ಕೃಷ್ಣ ಜನ್ಮಾಷ್ಟಮಿ 48 ದಿನಗಳ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ.

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿಯಲ್ಲಿ ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ 48 ದಿನಗಳ ಕಾಲ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳ ಕಾರ್ಯದರ್ಶಿ ರತೀಶ್ ತಂತ್ರಿ ಮತ್ತು ಬೆಂಗಳೂರು ಶಾಖಾ ಮಠದ ಎ ಬಿ ಕುಂಜಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಶ್ರೀ ಕೃಷ್ಣ ಮಠದಿಂದ ಹಲವು ದಶಕಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕೃಷ್ಣಮಠದಿಂದ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿತ್ತು. ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡಿದಾಗಲೂ, ಕೃಷ್ಣ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ಆದರೆ, ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಸಿದ್ದರಾಮಯ್ಯ ತೆರಳುತ್ತಾರಾ? ಕಾದು ನೋಡಬೇಕಿದೆ.
ದಶಕಗಳ ಹಿಂದೆ ಶ್ರೀಕೃಷ್ಣ ಮಠದಲ್ಲಿ ಕನಕ ಗೋಪುರ ವಿವಾದಕ್ಕೆ ಕಾರಣವಾಗಿತ್ತ್ತು. ಮಠದ ವಿರುದ್ಧದ ಪ್ರತಿಭಟನೆಯ ನೇತೃತ್ವವನ್ನು ಸಿದ್ದರಾಮಯ್ಯ ಅವರೇ ವಹಿಸಿಕೊಂಡಿದ್ದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಶಕಗಳಿಂದಲೂ ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ ಎಂದು ತಿಳಿದುಬಂದಿದೆ.

ಏನಿದು ಕನಕ ಗೋಪುರ ವಿವಾದ?
ದಶಕಗಳ ಹಿಂದೆ ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಹಳೆಯ ಕನಕ ಗೋಪುರ ಶಿಥಿಲಗೊಂಡಿತ್ತು. ಹೀಗಾಗಿ, ಕನಕ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಉಡಪಿ ಶ್ರೀ ಕೃಷ್ಣ ಮಠದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದರು.
ಬಳಿಕ, ವಿಶ್ವೇಶತೀರ್ಥ ಶ್ರೀಪಾದರು ಪ್ರತಿಭಟನಾಕಾರರನ್ನು ಕರೆಸಿ ಮಾತನಾಡಿ, ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!