ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ.

ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕಾಂಕ್ಷಿ ಹೌದಾದರೂ ನಮ್ಮಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಆಡಳಿತ ಮಾಡುವುದಾಗಿ ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ.

ನವದೆಹಲಿ, ಜುಲೈ 10: ಕರ್ನಾಟಕ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಆಡಳಿತ ನಡೆಸಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದರು. ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮುನ್ನೆಲೆಯಲ್ಲಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಇಂದು ಸಂಜೆ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ. ಅದಕ್ಕೂ ಮುನ್ನ ಸಿದ್ದರಾಮಯ್ಯ ಈ ಹೇಳಿಕೆ ನೀಡಿರುವುದು ಮಹತ್ವದ ಪಡೆದಿದೆ. ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದರು.

ಡಿಕೆ ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಹೌದು. ಆದರೆ ನಾನೇ 5 ವರ್ಷ ಅಧಿಕಾರ ಪೂರೈಸುವೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!