ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ.

ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನಲೆ ದಾಳಿಯಾಗಿರತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ಎಂದು ತಿಳಿಸಿದರು.

ಕಾಲ್ತುಳಿತ ವಿಚಾರ ಕುರಿತು ನಾಳೆ ಬಿಜೆಪಿಯಿಂದ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ. ಕಾಲ್ತುಳಿತ ಘಟನೆ ಒಂದು ಹೃದಯವಿದ್ರಾವಕ ಘಟನೆ. ನಿರೀಕ್ಷೆಗಿಂತ ಹೆಚ್ಚಿನ ಜನ ಸೇರಿದ್ದರಿಂದ ದುರಂತ ಆಗಿದೆ. ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು? ನೈತಿಕ ಹೊಣೆ ಅನ್ನೋದು ಮಹತ್ವದ್ದು. ತನಿಖೆ ನಡೆಯುತ್ತಿದೆ ಬಳಿಕ ಯಾರದು ತಪ್ಪು ಏನು ಎಲ್ಲಾ ತಿಳಿಯತ್ತೆ. ಜಾತಿಗಣತಿ ವಿಚಾರ ಕುರಿತು ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯುತ್ತದೆ. ಅಲ್ಲಿ ತೀರ್ಮಾನ ಆಗತ್ತದೆ ಎಂದರು.

ಇನ್ನು ಸಂಪುಟ ಪುನಾರಚನೆ ವಿಚಾರ, ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಹೈ ಕಮಾಂಡ್ ಪುನಾರಚನೆ ಬಗ್ಗೆ ನನ್ನ ಸಲಹೆ ಕೊಡಿ ಅಂತ ಕೇಳಿದರೇ ಕೊಡುತ್ತೇನೆ ಎಂದು ತಿಳಿಸಿದರು. ಕಳೆದ ವರ್ಷದ ದಸರಾ ಲೆಕ್ಕ ಕೊಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಲೆಕ್ಕ ಕೊಡಿ ಅಂತ ಈಗಾಗಲೇ ಹೇಳಿದ್ದೇನೆ. ಜಿಲ್ಲಾಡಳಿತ ಲೆಕ್ಕ ಕೊಡುತ್ತದೆ. ಅದರಲ್ಲೇನು ಮುಚ್ಚು ಮರೆ ಇಲ್ಲ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!