ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ಸೌಮ್ಯ ರೆಡ್ಡಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು ರಾಜ್ಯದಲ್ಲಿ ಅಭ್ಯರ್ಥಿಯನ್ನು ಹುಡುಕುವ ಪ್ರಕ್ರಿಯೆ ಆರಂಭಿಸಿದ್ದರು. ಚರ್ಚೆಯ ವೇಳೆ ಕೃಪಾ ಅಮರ್ ಆಳ್ವ, ಕಮಲಾಕ್ಷಿ ರಾಜಣ್ಣ, ಐಶ್ವರ್ಯ ಮಹದೇವ್, ನಯನಾ ಮೋಟಮ್ಮ, ವೀಣಾ ಕಾಶಪ್ಪನವರ್ ಮತ್ತು ಕವಿತಾ ರೆಡ್ಡಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಹೈಕಮಾಂಡ್ ಸೌಮ್ಯ ರೆಡ್ಡಿಗೆ ಮಣೆ ಹಾಕಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಚುನಾಯಿತರಾಗಿದ್ದ ಸೌಮ್ಯಾ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದ ಅವರು ಪರಾಭವ ಹೊಂದಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!