ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅ*ಚಾರ ಪ್ರಕರಣ ಸಂಬಂಧ ಮಹತ್ವದ ತೀರ್ಪು!

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ: ಪ್ರಕರಣದಲ್ಲಿ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಪರಿಗಣಿಸಿದ್ದು, ನಾಳೆ (ಶನಿವಾರ) ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.
ಪ್ರಕರಣದ ವಿವರ: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376(2) (ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.

 

 

 

 

 

ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆ ನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ತಂದೆ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ಮರಳುತ್ತಿದ್ದಂತೆ 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದರು.
ಇಂದು ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.  14 ತಿಂಗಳಿಂದ ಜೈಲುವಾಸ: ಕಳೆದ 14 ತಿಂಗಳಿನಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!