SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್ 18ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871
1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್ಎಲ್ಎಲ್ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ




