ಸ್ಟಾರ್ ನಟ ವಿಶಾಲ್ ನಿಶ್ಚಿತಾರ್ಥ !

ತಮಿಳು ಸ್ಟಾರ್ ನಟ ವಿಶಾಲ್ ಅವರ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಇಂದು ನಟ ವಿಶಾಲ್​ ಅವರ ಹುಟ್ಟು ಹಬ್ಬ. ಮತ್ತೊಂದು ಹುಟ್ಟು ಹಬ್ಬದ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹೌದು, ನಟ ವಿಶಾಲ್, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನ್ಶಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ಕಬಾಲಿ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಶಾಲ್ ಹಾಗೂ ಸಾಯಿ ಧನ್ಶಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಇದೇ ವಿಚಾರವನ್ನು ವಿಶಾಲ್​ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಭಿಮಾನಿಗಳೆಲ್ಲ ಮದುವೆ ಯಾವಾಗ ಎಂದು ಕೇಳಿ ಕೇಳಿ ಸುಸ್ತಾಗಿದ್ದರು. ಆದರೆ ಇದೀಗ ಬ್ಯಾಚುಲರ್​ ಲೈಫ್​​ಗೆ ಬ್ರೇಕ್​ ಹಾಕಿದ ವಿಶಾಲ್​ ಅವರು ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ಸಜ್ಜಾಗಿದ್ದಾರೆ. ಈ ಹಿಂದೆ ನನ್ನ ಬಹುದಿನಗಳ ಗೆಳತಿಯನ್ನು ವಿವಾಹ ಆಗಲಿದ್ದೇನೆ ಎಂದು ಸ್ವತಹ ವಿಶಾಲ್ ಅವರೇ ಹೇಳಿಕೊಂಡಿದ್ದರು.

ಚೆನ್ನೈನಲ್ಲಿ ನಡೆದ ಯೋಗಿ ದ ಎನ್ನುವ ಸಿನಿಮಾದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಟ ವಿಶಾಲ್ ಅವರು, ನಾನು ಮದುವೆ ಆಗುತ್ತಿದ್ದೇನೆ. ಹುಡುಗಿ ಯಾರು ಅಲ್ಲ. ಹುಡುಗಿ ಹಾಗೂ ಅವರ ತಂದೆ ಕೂಡ ಇಲ್ಲೇ ಇದ್ದಾರೆ. ನಟಿ ಸಾಯಿ ಅವರ ಜೊತೆ ನಾನು ಸಪ್ತಪದಿ ತುಳಿಯಲಿದ್ದೇನೆ. ನಾವಿಬ್ಬರು ಒಳ್ಳೆಯ ಲೈಫ್ ಲೀಡ್​ ಮಾಡಲಿದ್ದೇವೆ ಎಂದು ಹೇಳಿದ್ದರು. ಇದೀಗ ನಟ ವಿಶಾಲ್​, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

lja5nqb73ba7bxod16

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!