ಇನ್ಮುಂದೆ ವಿದ್ಯಾರ್ಥಿಗಳನ್ನ ಆಡಿಯನ್ಸ್ ಆಗಿ ಕರೆದುಕೊಂಡು ಹೋಗುವಂತಿಲ್ಲ!

ಬೆಂಗಳೂರು: ಇನ್ನುಮುಂದೆ ಸರ್ಕಾರಿ ಮತ್ತು ರಾಜಕೀಯ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಪ್ರೇಕ್ಷಕರಾಗಿ ಕರೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಶೈಕ್ಷಣಿಕ ಉದ್ದೇಶವಿಲ್ಲದ ಕಾರ್ಯಕ್ರಮಗಳಲ್ಲಿ ಮಕ್ಕಳೆಂದು ಸಭಾಂಗಣ ತುಂಬಿಸುವ ಪದ್ಧತಿಗೆ ಈಗ ಬ್ರೇಕ್ ಬಿದ್ದಿದೆ. ಈ ನಿರ್ಧಾರ ಶಿಕ್ಷಣ ಇಲಾಖೆಯ ಮಹತ್ವದ ಹೆಜ್ಜೆಯಾಗಿದೆ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಾರ್ಯಕ್ರಮಗಳಲ್ಲಿ ಕುರ್ಚಿ ತುಂಬಿಸಲು ಮಕ್ಕಳನ್ನು ಬಳಸುವ ಸಂಪ್ರದಾಯ ಇತ್ತು. ಇದೀಗ ಈ ಪದ್ದತಿಗೆ ಸಂಪೂರ್ಣ ಅಂತ್ಯ ಘೋಷಿಸಲಾಗಿದೆ.

ವಿದ್ಯಾರ್ಥಿಗಳೊಂದಿಗೆ ಶಿಕ್ಷಕರನ್ನು ಕೂಡ ಇಂತಹ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಕಳಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಕ್ಕಳನ್ನು ಅಥವಾ ಶಿಕ್ಷಕರನ್ನು ಅಂಥ ಕಾರ್ಯಕ್ರಮಗಳಿಗೆ ಕರೆದುಕೊಂಡು ಹೋಗುವ ಘಟನೆ ಸಂಭವಿಸಿದರೆ, ಅದಕ್ಕೆ ವಿರುದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಇಲಾಖೆ ನೀಡಿದೆ.

Related Posts

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!