‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.

ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್​ sacnilk ಅಲ್ಲಿರೋ ಅಂಕಿ-ಅಂಶ ಈ ವಿಚಾರವನ್ನು ಸ್ಪಷ್ಟಪಡಿಸಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಸು ಫ್ರಮ್ ಸೋ’ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತದೆ ಎಂದು ತಂಡದವರೇ ಭಾವಿಸಿರಲಿಲ್ಲ. 20ನೇ ದಿನ (ಆಗಸ್ಟ್ 13) ಸಿನಿಮಾ 1.24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಕನ್ನಡ ಒಂದರಲ್ಲೇ ಸಿನಿಮಾ 63 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ವಿಶ್ವ ಮಟ್ಟದಲ್ಲಿ ಚಿತ್ರ 90 ಕೋಟಿ ರೂಪಾಯಿ ಗಳಿಸಿದೆ. ಇದರಲ್ಲಿ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಗ್ರಾಸ್ ಕಲೆಕ್ಷನ್ 80 ಕೋಟಿ ರೂಪಾಯಿ ಆಗಿದೆ. ಹೊರ ದೇಶಗಳಿಂದ 10 ಕೋಟಿ ರೂಪಾಯಿ ಹರಿದು ಬಂದಿದೆ.

ಮಲಯಾಳಂ ಭಾಷೆಯಲ್ಲಿ ‘ಸು ಫ್ರಮ್ ಸೋ’ ಸಿನಿಮಾ 4.75 ಕೋಟಿ ರೂಪಾಯಿ ಕಲೆ ಹಾಕಿದೆ. ತೆಲುಗಿನಿಂದ ಚಿತ್ರಕ್ಕೆ 1.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಒಟ್ಟಾರೆ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಇದು ದರ್ಶನ್ ಅಭಿನಯದ ‘ಕಾಟೇರ’ ದಾಖಲೆಯನ್ನೂ ಉಡೀಸ್ ಮಾಡಿದೆ.

‘ಕಾಟೇರ’ ಸಿನಿಮಾ ಭಾರತದಲ್ಲಿ 68.1 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ‘ಸು ಫ್ರಮ್ ಸೋ’ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಈ ಮೂಲಕ ದರ್ಶನ್ ಮಾಡಿದ ದಾಖಲೆಯನ್ನು ರಾಜ್ ಬಿ. ಶೆಟ್ಟಿ ಅವರು ಮುರಿದು ಹಾಕಿದ್ದಾರೆ. ಅಂದಹಾಗೆ ಈ ಬಗ್ಗೆ ತಂಡದವರು ಯಾವುದೇ ಅಧಿಕೃತ ಲೆಕ್ಕ ಬಿಡುಗಡೆ ಮಾಡಿಲ್ಲ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!