ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ

ಸಾಧಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜೈಲು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಶುಕ್ರವಾರ ಮಧ್ಯರಾತ್ರಿ ಸಾಧಿಕ್ ಸಾವನ್ನಪ್ಪಿದ್ದಾರೆ.

6 ವರ್ಷಗಳ ಹಿಂದೆ ಜೈಲು ಪಾಲಾಗಿದ್ದ ಶಂಕಿತ ಉಗ್ರ
2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿಯೇ ಬಂಧಿಯಾಗಿದ್ದ. ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!