accident Archives - Good News 24x7 https://www.goodnews24x7.com/tag/accident/ Kannada Fri, 03 Jul 2026 07:27:42 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg accident Archives - Good News 24x7 https://www.goodnews24x7.com/tag/accident/ 32 32 ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು https://www.goodnews24x7.com/car-runs-over-buddhist-monks-on-pilgrimage-9-dead/ Fri, 03 Jul 2026 07:27:42 +0000 https://www.goodnews24x7.com/?p=9756 ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃ*ತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ…

The post ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು appeared first on Good News 24x7.

]]>

ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃ*ತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಥೈಲ್ಯಾಂಡ್ ದೇಶವನ್ನು ತಲ್ಲಣಗೊಳಿಸಿದ್ದು, ರಸ್ತೆ ಸುರಕ್ಷತೆ ಮತ್ತು ಮಕ್ಕಳ ಮೇಲಿನ ನಿಗಾದ ಮಹತ್ವವನ್ನು ಎತ್ತಿ ತೋರಿಸಿದೆ
.
ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು

ಬ್ಯಾಂಕಾಕ್, ಜುಲೈ 03: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತ(Accident)ವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾ*ವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾ*ವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ ಮೂಲಕ ತೀರ್ಥಯಾತ್ರೆಗಾಗಿ ನಡೆದುಕೊಂಡು ಹೋಗುತ್ತಿತ್ತು. ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಬದುಕುಳಿದ ಫ್ರಾ ಸೋಂಪಾಂಗ್ ಎಂಬ ಸನ್ಯಾಸಿ ಘಟನೆ ಬಗ್ಗೆ ಮಾತನಾಡಿ, ನಾವೆಲ್ಲರೂ ‘ಬುದ್ಧೋ, ಬುದ್ಧೋ’ ಎಂದು ಧ್ಯಾನ ಮಂತ್ರ ಜಪಿಸುತ್ತಾ ಸಾಗುತ್ತಿದ್ದೆವು. ಈ ವೇಳೆ ಬಾಲಕನೊಬ್ಬ ಓಡಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ ವೇಗದಲ್ಲಿ ನಮ್ಮ ಸಾಲಿಗೆ ಡಿಕ್ಕಿ ಹೊಡೆಯಿತು. ಮೊದಲ ಒಂಬತ್ತು ಸನ್ಯಾಸಿಗಳು ಬದುಕುಳಿದರು, ಆದರೆ ಉಳಿದವರು ಕಾರು ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದರು ಎಂದು ಕಣ್ಣೀರಿಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಐವರು ಸನ್ಯಾಸಿಗಳು ಸ್ಥಳದಲ್ಲೇ ಮೃ*ತಪಟ್ಟರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೂವರು ಸನ್ಯಾಸಿಗಳ ಸ್ಥಿತಿ ಗಂಭೀರವಾಗಿದೆ.

ಮನೆಯಲ್ಲಿ ಯಾರೂ ಇಲ್ಲದಾಗ ಕಾರು ತಂದಿದ್ದ ಬಾಲಕ ಪೊಲೀಸ್ ತನಿಖೆಯ ಪ್ರಕಾರ, ಅಪಘಾತದ ಸಮಯದಲ್ಲಿ ಬಾಲಕನ ಮನೆಯಲ್ಲಿ ಯಾರೂ ಇರಲಿಲ್ಲ. ಆತ ಅಸ್ವಸ್ಥನಾಗಿದ್ದ ಕಾರಣ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದ. ಈ ವೇಳೆ ಹೆತ್ತವರಿಗೆ ತಿಳಿಸದೆ ಕಾರಿನ ಕೀ ತಗೆದುಕೊಂಡು ರಸ್ತೆಗಿಳಿದಿದ್ದಾನೆ. ಕಾರು ಕಾಣೆಯಾಗಿರುವುದನ್ನು ಅರಿತ ಪೋಷಕರು ಪೊಲೀಸರಿಗೆ ದೂರು ನೀಡುವಷ್ಟರಲ್ಲೇ ಈ ಭೀಕರ ದುರಂತ ಸಂಭವಿಸಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ ಆತ ವಿಶೇಷ ಅಗತ್ಯವಿರುವ ಬಾಲಕ ಎಂದು ತಿಳಿದುಬಂದಿದ್ದು, ವೈದ್ಯರು ಮತ್ತು ಪೋಷಕರ ತಂಡ ಆತನನ್ನು ನೋಡಿಕೊಳ್ಳುತ್ತಿದೆ.

 

ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಅತ್ಯಂತ ಪವಿತ್ರವಾಗಿ ಮತ್ತು ಗೌರವದಿಂದ ಕಾಣಲಾಗುತ್ತದೆ. ಹೀಗಾಗಿ ಈ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಗಾಯಗೊಂಡ ಸನ್ಯಾಸಿಗಳ ಪ್ರಾಣ ಉಳಿಸಲು ಮುಕ್ದಹಾನ್ ಆಸ್ಪತ್ರೆಯು ಸಾರ್ವಜನಿಕರಲ್ಲಿ ತುರ್ತು ರಕ್ತದಾನ ಮಾಡುವಂತೆ ಮನವಿ ಮಾಡಿದೆ.

ಮುಕ್ದಹಾನ್ ಪ್ರಾಂತ್ಯದ ಗವರ್ನರ್ ವೊರಾಯನ್ ಬುನ್ನಾರತ್ ಈ ಕುರಿತು ಮಾತನಾಡಿ, ಈ ಘಟನೆ ಇಡೀ ದೇಶದ ರಸ್ತೆ ಸುರಕ್ಷತೆಗೆ ಒಂದು ದೊಡ್ಡ ಎಚ್ಚರಿಕೆಯಾಗಬೇಕು. ಅಪಘಾತಗಳನ್ನು ತಡೆಗಟ್ಟುವ ವಿಷಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡುವುದು ಎಷ್ಟು ಮುಖ್ಯ ಎಂಬುದಕ್ಕೆ ಇದೊಂದು ಕಣ್ಣು ತೆರೆಸುವ ಪಾಠ ಎಂದು ಹೇಳಿದ್ದಾರೆ. ವಾಹನವನ್ನು ಸದ್ಯ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ.

The post ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು appeared first on Good News 24x7.

]]>
ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! https://www.goodnews24x7.com/uppara-community-doctor-dies-in-accident/ Wed, 06 May 2026 10:05:46 +0000 https://www.goodnews24x7.com/?p=9497 ಉಪ್ಪಾರ‌ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪೂರ್ತಿಸೆಲೆಯಾಗಿದ್ದ, ಜನರ ನೆಚ್ಚಿನ ಪ್ರಸೂತಿ ವೈದ್ಯರಾಗಿ ಜನಮನ್ನಣೆ ಗಳಿಸಿದ್ದ ಡಾ. ಗೌತಮಿ ಅಪಘಾತದಲ್ಲಿ ನಿಧನರಾಗಿದ್ದು ಸಮುದಾಯಕ್ಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಠ, ದುಃಖ ಉಂಟಾಗಿದೆ.‌ ಮೈಸೂರು ಕೆ.ಆರ್.ಆಸ್ಪತ್ರೆ ಮತ್ತು ಮಂಡ್ಯ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರಾಗಿ ಉತ್ತಮ…

The post ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! appeared first on Good News 24x7.

]]>

ಉಪ್ಪಾರ‌ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪೂರ್ತಿಸೆಲೆಯಾಗಿದ್ದ, ಜನರ ನೆಚ್ಚಿನ ಪ್ರಸೂತಿ ವೈದ್ಯರಾಗಿ ಜನಮನ್ನಣೆ ಗಳಿಸಿದ್ದ ಡಾ. ಗೌತಮಿ ಅಪಘಾತದಲ್ಲಿ ನಿಧನರಾಗಿದ್ದು ಸಮುದಾಯಕ್ಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಠ, ದುಃಖ ಉಂಟಾಗಿದೆ.‌

ಮೈಸೂರು ಕೆ.ಆರ್.ಆಸ್ಪತ್ರೆ ಮತ್ತು ಮಂಡ್ಯ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರಾಗಿ ಉತ್ತಮ ಕಾರ್ಯ ನಿರ್ವಹಣೆಯಿಂದ ಜನಪ್ರಿಯರಾಗಿದ್ದ ಮೈಸೂರಿನ ಮೇಟಗಳ್ಳಿ ಶ್ರೀಮತಿ ಮಂಜುಳಾ ಮತ್ತು‌ ನಾಗರಾಜು ದಂಪತಿ ಪುತ್ರಿ ಡಾ.ಗೌತಮಿ ಅವರು 5 ವರ್ಷದ ವೈದ್ಯಕೀಯ ಸೇವೆ ಬಳಿಕ ಆಂದ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಎಂಎಸ್ ಮುಗಿಸಿ ಒಂದು ತಿಂಗಳ‌ ತರಬೇತಿ ಹಂತದಲ್ಲಿದ್ದರು.

ಕೆಲವೇ ದಿನಗಳಲ್ಲಿ ಎಂಡಿ ಮಾಡಲು ವಿದೇಶಕ್ಕೆ ತೆರಳುವವರಿದ್ದರು.‌ಆದರೆ, ದಿನಾಂಕ 5-5-2026 ಮಂಗಳವಾರ ರಾತ್ರಿ ಸ್ಕೂಟರ್ ನಿಂದ‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಧನರಾಗಿದ್ದಾರೆ. ಡಾ.ಗೌತಮಿ ಅವರ ನಿಧನ ಆರೋಗ್ಯ ಕ್ಷೇತ್ರಕ್ಕೆ, ಸಮುದಾಯಕ್ಕೆ‌ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಕರುಣಿಸಿ, ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತದೆ.

The post ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! appeared first on Good News 24x7.

]]>
ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! https://www.goodnews24x7.com/bride-in-accident-groom-tied-the-knot-in-icu/ Sat, 22 Nov 2025 11:47:39 +0000 https://www.goodnews24x7.com/?p=8242 ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

https://www.facebook.com/reel/3798106020489452

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ.

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>
ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ https://www.goodnews24x7.com/famous-indian-singer-dies-in-scuba-diving-accident-in-singapore/ Fri, 19 Sep 2025 10:59:22 +0000 https://www.goodnews24x7.com/?p=7586 Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.…

The post ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ appeared first on Good News 24x7.

]]>

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

 

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

The post ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ appeared first on Good News 24x7.

]]>
ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? https://www.goodnews24x7.com/truck-driver-had-another-accident-before-the-hassan-tragedy/ Sat, 13 Sep 2025 10:16:58 +0000 https://www.goodnews24x7.com/?p=7506 ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ…

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>

ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿಸಿದ್ದಾನೆ ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಆರೋಪ ಮಾಡಿದ್ದು, ಬೈಪಾಸ್‌ನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆಟೋ ಮತ್ತು ಬೈಕ್‌ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಿ. ಆಗ ಸತ್ಯ ಗೊತ್ತಾಗಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿರುವುದು ಕೂಡ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

 

 

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>
ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ https://www.goodnews24x7.com/woman-falls-on-road-to-avoid-pothole-lorry-runs-over-her/ Wed, 10 Sep 2025 10:27:44 +0000 https://www.goodnews24x7.com/?p=7462 ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.…

The post ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ appeared first on Good News 24x7.

]]>

ರಸ್ತೆಯ ತುಂಬೆಲ್ಲಾ ಗುಂಡಿಗಳು ಇದ್ದರೆ ಅದುವೇ ಮೃತ್ಯು ಕೂಪಗಳಾಗುತ್ತಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಮಂಗಳೂರಿನ ಕೂಳೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು, ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.
ಮಂಗಳೂರು: ಕೆಲವರು ವಾಹನ ಕೈಗೆ ಸಿಕ್ಕೊಡನೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ವೇಗವಾಗಿ ವಾಹನ ಓಡಿಸುತ್ತಾರೆ. ಅದಲ್ಲದೇ, ಅತೀ ವೇಗವಾಗಿ ವಾಹನ ಓಡಿಸಿ ಅಪಘಾತಗಳಾಗಿರುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಆದರೆ ಕಳಪೆ ಕಾಮಗಾರಿಯಿಂದ ರಸ್ತೆ ತುಂಬೆಲ್ಲಾ ಗುಂಡಿಗಳು ಬೀಳುತ್ತಿದ್ದು, ಇದುವೇ ಮೃತ್ಯು ಕೂಪಗಳಾಗುತ್ತಿದೆ. ಮಂಗಳೂರಿನ ಕೂಳೂರಿನಲ್ಲಿ ನಡೆದ ಈ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದೆ. ಈ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಅಪಘಾತದ ದೃಶ್ಯವನ್ನು ಕಾಣಬಹುದು. ದ್ವಿಚಕ್ರ ವಾಹನ ಓಡಿಸುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವಾಹನದೊಂದಿಗೆ ರಸ್ತೆಗೆ ಉರುಳಿ ಬೀಳುವುದನ್ನು ಕಾಣಬಹುದು. ಈ ವೇಳೆಯಲ್ಲಿ ಲಾರಿಯೊಂದು ಅತಿ ವೇಗದಿಂದ ಬಂದು ರಸ್ತೆಯ ಮೇಲೆ ಬಿದ್ದಿದ್ದ ಮಹಿಳೆಯ ಮೇಲಿನಿಂದ ಸಾಗಿರುವುದನ್ನು ಕಾಣಬಹುದು. ಸೆಪ್ಟೆಂಬರ್ 9ರ ಬೆಳಗ್ಗೆ 8-30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೃತ ಪಟ್ಟ ಮಹಿಳೆಯನ್ನು ಮಾಧವಿ (44) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕ ಮೊಹಮ್ಮದ್ ಫಾರೂಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ಈ ಅಪಘಾತಕ್ಕೆ ರಸ್ತೆಯ ದುಸ್ಥಿತಿಯೇ ಕಾರಣ ಎಂದು ರಾಜಕಾರಣಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟ್ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ಹೆದ್ದಾರಿಗಳ ನಿರಂತರ ನಿರ್ಲಕ್ಷ್ಯ ಹಾಗೂ ಕಳಪೆ ನಿರ್ವಹಣೆ, ಇತ್ತೀಚೆಗಿನ ದಿನಗಳಲ್ಲಿ ಪುನರಾವರ್ತಿತ ಅಪಘಾತಗಳು ನಡೆಯುವುದಕ್ಕೆ ಕಾರಣವಾಗುತ್ತಿದೆ. ಈ ನಿರ್ಲಕ್ಷ್ಯಕ್ಕಾಗಿ NHAI ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಇಂತಹ ಹೃದಯವಿದ್ರಾವಕ ಜೀವಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಗುಂಡಿಯಿಂದ ಮತ್ತೊಂದು ಬಲಿ ದುರಂತ ನಷ್ಟ ಎಂದಿದ್ದಾರೆ. ಮತ್ತೊಬ್ಬರು, ಎಂತಹ ನಾಚಿಕೆಗೇಡು ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

The post ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ appeared first on Good News 24x7.

]]>
15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! https://www.goodnews24x7.com/he-killed-his-pregnant-wife-by-giving-her-a-betel-nut-for-15-lakhs-infatuation-with-a-senior-wife-was-shocked/ Wed, 10 Sep 2025 06:31:10 +0000 https://www.goodnews24x7.com/?p=7449 ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.

ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಪ್ರಕರಣ ಸಂಬಂಧ ಪ್ರದೀಪ್ ಸೇರಿ, ಸಾಥ್ ನೀಡಿದ್ದ ಇನ್ನಿಬ್ಬರು ಆರೋಪಿಗಳನ್ನು ಕಾಗವಾಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪತಿ ಪ್ರದೀಪ್ ಹಾಗೂ ಮೃತ ಚೈತಾಲಿ ಉಗಾರ್ ಬಿ.ಕೆ.ಗ್ರಾಮದವರು. ಒಂದೇ ಗ್ರಾಮದವರಾದ ಇವರು ಪ್ರೀತಿಸಿ ಎರಡು ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ಸಾಕ್ಷಿಯಾಗಿ ಆರು ತಿಂಗಳ ಗರ್ಭಿಣಿ ಕೂಡ ಆಗಿದ್ದಳು ಎಂದು ತಿಳಿದುಬಂದಿದೆ.

ಆಗಿದ್ದೇನು..? ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್‌ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್​​ಗೆ ಲವ್ ಶುರುವಾಗಿತ್ತಂತೆ. ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್​, ಪ್ರೀತಿಯ ಬಲೆಗೆ ಬಿದ್ದಿದ್ದಳು. ಯಾವಾಗ ಸೀನಿಯರ್ ಮೇಲೆ ಮೋಹ ಹೆಚ್ಚಾಯಿತೋ ಆಗಲೇ ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಅನ್ನೋದು ತನಿಖೆಯಿಂದ ತಿಳಿದುಬಂದಿದೆ.

ಮಾಡಿದ್ದೇನು..? ಪ್ರದೀಪ್ ತನ್ನ ಹೆಂಡತಿಯನ್ನ ಮುಗಿಸಲು ಸ್ನೇಹಿತನ ಸಹಾಯ ಪಡೆದಿದ್ದಾನೆ. ಸ್ನೇಹಿತ ರಾಜೇಂದ್ರ ಜೊತೆ ಮಾತುಕತೆ ನಡೆಸಿ 15 ಲಕ್ಷ ರೂಪಾಯಿಗೆ ಸೂಪಾರಿ ಕೊಟ್ಟಿದ್ದ ಎನ್ನಲಾಗಿದೆ. ಅಂತೆಯೇ ಚೈತಾಲಿಯನ್ನ ಮುಗಿಸಲು ಎರಡು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅದು ಫೇಲ್ ಆಗಿತ್ತು. ಮೂರನೇ ಬಾರಿಗೆ ಯಶಸ್ವಿಯಾಗಿದ್ದಾರೆ. ಭಾರವಾದ ವಸ್ತುವಿನಿಂದ ತಲೆಗೆ ಹೊಡೆದು ಆರು ತಿಂಗಳ ಗರ್ಭಿಣಿಯ ಜೀವ ತೆಗೆದಿದ್ದರು.

ಮುಂದೆ ಏನಾಯ್ತು..? ಆರೋಪಿಗಳಿಬ್ಬರು ಹಾಗೂ ಪ್ರದೀಪ್ ಸೇರಿ ಪ್ಲಾನ್ ಮಾಡಿದ್ದಾರೆ. ಪ್ಲಾನ್ ಪ್ರಕಾರವೇ ಆಕೆಯನ್ನು ಮುಗಿಸಿ, ಮೃತದೇಹವನ್ನು ಕೆಲ ಹೊತ್ತು ರಸ್ತೆಗೆ ತಂದು ಕಾಲ ಕಳೆದಿದ್ದಾರೆ. ಅದಾದ ನಂತರ ಆರೋಪಿ ಪ್ರದೀಪ್ ಪೊಲೀಸರಿಗೆ ಖುದ್ದು ಕರೆ ಮಾಡಿದ್ದಾನೆ. ಸೆಪ್ಟೆಂಬರ್ 7 ರಂದು ರಾತ್ರಿ 9.30ಕ್ಕೆ ಕರೆ ಮಾಡಿದ ಆತ, ಸರ್​ ರಸ್ತೆಯಲ್ಲಿ ಹೋಗುವಾಗ ಅಪಘಾತ ಆಗಿದೆ. ನನ್ನದೇ ಕಾರಿನಲ್ಲಿ ಹೋಗುವಾಗ ಅಪಘಾತ ಆಗಿದೆ. ಹೆಂಡತಿಗೆ ಗಂಭೀರ ಪೆಟ್ಟು ಬಿದ್ದಿದೆ. ನನಗೂ ಗಾಯವಾಗಿದೆ. ಪತ್ನಿ ಚೈತಾಲಿಯನ್ನು ಕಾಗವಾಡ ತಾಲೂಕು ಆಸ್ಪತ್ರೆಗೆ ದಾಖಲಿಸುತ್ತಿರೋದಾಗಿ ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ತಕ್ಷಣವೇ ಕಾಗವಾಡ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ..? ಪೊಲೀಸರು ಆಸ್ಪತ್ರೆಗೆ ಹೋದಾಗ ಚೈತ್ರಾಲಿ ಅನ್ನೋರು ಯಾರೂ ಇರಲಿಲ್ಲ. ಕೂಡಲೇ ಪೊಲೀಸರು ಪ್ರದೀಪ್​ಗೆ ಕರೆ ಮಾಡಿದ್ದಾರೆ. ಆಗ ಕಾಗವಾಡ ಬದಲು ಮಹಾರಾಷ್ಟ್ರದ ಮೀರಜ್‌‌ ಆಸ್ಪತ್ರೆಗೆ ಚೈತ್ರಾಣಿ ‌ಕರೆತಂದಿರುವುದಾಗಿ ಪೊಲೀಸರಿಗೆ ಪ್ರದೀಪ್ ಮಾಹಿತಿ ನೀಡಿದ್ದಾನೆ. ತಕ್ಷಣವೇ ‌ಪ್ರದೀಪ್ ನಿವಾಸಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿದ್ದಾರೆ. ಆಗ ಪ್ರದೀಪ್ ನಿವಾಸದ ಎದುರು ಕಾರು ನಿಂತಿತ್ತು. ಇದರಿಂದ ಪ್ರದೀಪ್ ನಡೆ ಮೇಲೆ ಪೊಲೀಸರಿಗೆ ಅನುಮಾನ ಬಂದಿದೆ. ಇದರ ನಡುವೆ ಪ್ರದೀಪ್ ಮೀರಜ್ ಪೊಲೀಸರನ್ನ ಭೇಟಿಯಾಗಿ, ಪತ್ನಿ ಅಪಘಾತದಿಂದ ಮೃತರಾಗಿದ್ದು ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾನೆ. ಆಗ ಮೀರಜ್ ಪೊಲೀಸರು ‌ಕಾಗವಾಡ ಠಾಣೆಯ ‌ಪೊಲೀಸರನ್ನ ಸಂಪರ್ಕಿಸುತ್ತಾರೆ. ಆಗ ನಾವು ಮೀರಜ್‌ಗೆ ಬರ್ತಿದ್ದೇವೆ, ಯಾವುದೇ ‌ದೂರು ದಾಖಲಿಸಿಕೊಳ್ಳದಂತೆ ಮನವಿ ಮಾಡುತ್ತಾರೆ.

ಮೀರಜ್‌ಗೆ ಬರುತ್ತಿದ್ದಂತೆಯೇ ಪೊಲೀಸರು ಪ್ರದೀಪ್​ನ ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಪ್ರದೀಪ್​​ಗೆ ಅಪಘಾತದಿಂದ ಯಾವುದೇ ಗಾಯ ಆಗದಿರೋದು ಗೊತ್ತಾಗಿದೆ. ಚೈತಾಲಿ ‌ಮೃತದೇಹ ನೋಡಿದ ಪೊಲೀಸರು ಇದು ಅಪಘಾತವಲ್ಲ, ಕೊ*ಲೆ ಎಂಬುದನ್ನ ಮೇಲ್ನೋಟಕ್ಕೆ ಪತ್ತೆಹಚ್ಚಿಕೊಳ್ತಾರೆ. ತಕ್ಷಣವೇ ಪ್ರದೀಪ್​ನನ್ನ ‌ತೀವ್ರ ವಿಚಾರಣೆ ಮಾಡಿದಾಗ ಕೊ*ಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಾತ್ರವಲ್ಲ, ಸ್ಥಳ ಮಹಜರು ವೇಳೆ ಪ್ರಕರಣಕ್ಕೆ ಸಾಥ್ ನೀಡಿದವರ ಹೆಸರನ್ನೂ ಹೇಳಿದ್ದಾನೆ. ಪ್ರಕರಣದಲ್ಲಿ ಐವರು ಆರೋಪಿಗಳು ಬಾಗಿಯಾಗಿರುವ ಶಂಕೆಯಿದ್ದ, ಮೂವರ ಬಂಧನವಾಗಿದೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>
KSRTC ಬಸ್ಸಿನಿಂದಾಗಿ ಒಂದು ಮಗು ಸೇರಿ ಐವರ ಜೀವ ಬ*ಲಿ…! https://www.goodnews24x7.com/five-people-including-a-child-lost-their-lives-due-to-a-ksrtc-bus/ Thu, 28 Aug 2025 11:34:35 +0000 https://www.goodnews24x7.com/?p=6902 ಬ್ರೇಕ್ ಫೇಲ್.. ಒಂದು ಮಗು ಸೇರಿ ಐವರ ಜೀವ ತೆಗೆದ KSRTC ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿಯಂತ್ರಣ ತಪ್ಪಿದ KSRTC ಬಸ್ ನಿಲ್ದಾಣ ಮತ್ತು ಆಟೋ ರಿಕ್ಷಾಗಳಿಗೆ…

The post KSRTC ಬಸ್ಸಿನಿಂದಾಗಿ ಒಂದು ಮಗು ಸೇರಿ ಐವರ ಜೀವ ಬ*ಲಿ…! appeared first on Good News 24x7.

]]>

ಬ್ರೇಕ್ ಫೇಲ್.. ಒಂದು ಮಗು ಸೇರಿ ಐವರ ಜೀವ ತೆಗೆದ KSRTC
ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿಯಂತ್ರಣ ತಪ್ಪಿದ KSRTC ಬಸ್ ನಿಲ್ದಾಣ ಮತ್ತು ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ.
ಮಂಗಳೂರು: ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಬಸ್ ನಿಲ್ದಾಣಕ್ಕೆ ಬಂದು ನುಗ್ಗಿದ್ದರಿಂದ ಅಲ್ಲಿ ನಿಂತಿದ್ದವರ ಮೇಲೂ ಹರಿದಿದೆ. ಅಲ್ಲದೇ ಪಕ್ಕದಲ್ಲಿದ್ದ ಆಟೋಗೂ ಬಂದು ಗುದ್ದಿದೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಮೃತಪಟ್ಟಿದ್ದಾರೆ. ಮೃತರೆಲ್ಲ ಒಂದೇ ಕುಟುಂಬದವರು ಎನ್ನಲಾಗಿದೆ. ಇದಲ್ಲದೇ ಒಂದು ಮಗು ಕೂಡ ಪ್ರಾಣ ಕಳೆದುಕೊಂಡಿದೆ.

The post KSRTC ಬಸ್ಸಿನಿಂದಾಗಿ ಒಂದು ಮಗು ಸೇರಿ ಐವರ ಜೀವ ಬ*ಲಿ…! appeared first on Good News 24x7.

]]>
ಬೈಲಹೊಂಗಲ: ಸಾರಿಗೆ ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ – 20ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಗಾಯ. https://www.goodnews24x7.com/bailhangala-head-on-accident-between-a-transport-bus-and-a-mini-lorry-more-than-20-passengers-injured/ Sun, 24 Aug 2025 09:01:56 +0000 https://www.goodnews24x7.com/?p=6664 ಬೆಳಗಾವಿ : ಬೈಲಹೊಂಗಲ ತಾಲೂಕಿನ ತಿಗಡಿ–ತಿಗಡಿ ಕ್ರಾಸ್ ನಡುವಿನ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪ್ರಾಣ ಹಾನಿಯಾಗಿಲ್ಲ ಎನ್ನುವುದು ಅದೃಷ್ಟಕರ ಸಂಗತಿ. ಘಟನೆ ರವಿವಾರದಂದು…

The post ಬೈಲಹೊಂಗಲ: ಸಾರಿಗೆ ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ – 20ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಗಾಯ. appeared first on Good News 24x7.

]]>

ಬೆಳಗಾವಿ : ಬೈಲಹೊಂಗಲ ತಾಲೂಕಿನ ತಿಗಡಿ–ತಿಗಡಿ ಕ್ರಾಸ್ ನಡುವಿನ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪ್ರಾಣ ಹಾನಿಯಾಗಿಲ್ಲ ಎನ್ನುವುದು ಅದೃಷ್ಟಕರ ಸಂಗತಿ.

ಘಟನೆ ರವಿವಾರದಂದು ಬೆಳಗ್ಗೆ ಸಂಭವಿಸಿದ್ದು, ತಿಗಡಿ ಕಡೆಯಿಂದ ಬೈಲಹೊಂಗಲ ಕಡೆಗೆ ಪ್ರಯಾಣಿಕರನ್ನು ಹೊತ್ತಸರಿಗೆ ಬಸ್ ಸಂಚರಿಸುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಇಟ್ಟಿಗೆ ತುಂಬಿದ ಮಿನಿ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿಯು ಗಂಭೀರವಾಗಿ ಜಖಂ ಆಗಿದ್ದು, ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿದಂತೆ ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಾಹನಗಳು ನಡುರಸ್ತೆಯಲ್ಲೇ ನಿಂತಿದ್ದ ಕಾರಣ, ಸಂಚಾರದಲ್ಲಿ ಕೆಲಕಾಲ ಅಡಚಣೆ ಉಂಟಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬೈಲಹೊಂಗಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

The post ಬೈಲಹೊಂಗಲ: ಸಾರಿಗೆ ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ – 20ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಗಾಯ. appeared first on Good News 24x7.

]]>
ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. https://www.goodnews24x7.com/hit-and-run-tragedy-on-devanahalli-flyover-woman-dies/ Sun, 24 Aug 2025 08:09:34 +0000 https://www.goodnews24x7.com/?p=6646 ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…

The post ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. appeared first on Good News 24x7.

]]>

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಬೆಂಗಳೂರು ಬಾಣಸವಾಡಿಗೆ ಸೇರಿರುವ 31 ವರ್ಷದ ನೇತ್ರಾವತಿ ಎಂದು ಗುರುತಿಸಲಾಗಿದೆ. ಅವರು ಪತಿಯೊಂದಿಗೆ ಬೈಕ್‌ನಲ್ಲಿ ಚಿಕ್ಕಬಳ್ಳಾಪುರದತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮಾಹಿತಿಯಂತೆ, ಕಾರು ಹಿಂದಿನಿಂದ ಬಂದು ಬೈಕ್‌ಗೆ ಗುದ್ದಿದೆ. ಪರಿಣಾಮವಾಗಿ ನೇತ್ರಾವತಿ ಸಮತೋಲನ ತಪ್ಪಿ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ತೀವ್ರವಾಗಿ ತಲೆಗೆ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಅಲ್ಲಿ ನಿಂತು ಸಹಾಯ ಮಾಡದೆ ಕಾರು ಸಮೇತ ಪರಾರಿಯಾಗಿದ್ದಾನೆ. ಈ ಕುರಿತು ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಮತ್ತು ಚಾಲಕನ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯ ಹಾಗೂ ಸಾಕ್ಷ್ಯಗಳ ಆಧಾರದ ಮೇಲೆ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆ ದೇವನಹಳ್ಳಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ

The post ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. appeared first on Good News 24x7.

]]>