#ACP Chandan Archives - Good News 24x7 https://www.goodnews24x7.com/tag/acp-chandan/ Kannada Tue, 17 Mar 2026 13:01:44 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #ACP Chandan Archives - Good News 24x7 https://www.goodnews24x7.com/tag/acp-chandan/ 32 32 ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! https://www.goodnews24x7.com/renuka-swamy-case-fine-for-accused-pawans-lawyerrenuka-swamy-case-fine-for-accused-pawans-lawyer/ Tue, 17 Mar 2026 12:59:51 +0000 https://www.goodnews24x7.com/?p=8933   ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ…

The post ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! appeared first on Good News 24x7.

]]>

 

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ ಅರ್ಜಿ ಕುರಿತು ಆದೇಶ ನೀಡಿರುವ ನ್ಯಾಯಾಲಯವು, ಪವನ್ ಪರ ವಕೀಲರಿಗೆ ದಂಡ ವಿಧಿಸಿದೆ. ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆಯುವಾಗ ಪೊಲೀಸರು ಫೋಟೋ ತೆಗೆದಿದ್ದರು. ಆ ಫೋಟೊನಲ್ಲಿರುವ ಟೈಲ್ಸ್​​ನ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ಸಾಕ್ಷ್ಯ ತಿದ್ದಿದ ಆರೋಪಗಳನ್ನು ಪವನ್ ಪರ ವಕೀಲರು ಮಾಡಿದ್ದರು. ಆದರೆ ನ್ಯಾಯಾಲವು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ್ದಕ್ಕೆ ವಕೀಲರಿಗೆ ಐದು ಸಾವಿರ ರೂಪಾಯಿ ದಂಡ ಸಹ ಹೇರಿದೆ. ಈ ಹಣವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಲು ಸೂಚನೆ ನೀಡಿದೆ.

ಕುಟುಂಬ ಸದಸ್ಯರ ಭೇಟಿ ಮಾಡಲು ಕೋರಿ ಆರೋಪಿ ದರ್ಶನ್ ಅರ್ಜಿ ಸಲ್ಲಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಕುಟುಂಬ ಸದಸ್ಯರು, ಸ್ನೇಹಿತರ ಭೇಟಿಗೆ ಕೋರ್ಟ್ ಅನುಮತಿ ನೀಡಿದೆ. ಜೈಲು ಕೈಪಿಡಿಗನುಗುಣವಾಗಿ ಭೇಟಿಗೆ ಅವಕಾಶ ನೀಡಲು ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯವು ನಿರ್ದೇಶನವನ್ನು ನೀಡಿದೆ. ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ಆರೋಪಿಯ ಭೇಟಿಯ ಕುರಿತು ಕೆಲವು ನಿಯಮಗಳನ್ನು ಜೈಲು ಅಧಿಕಾರಿಗಳು ಹೇರಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಎರಡು ವರ್ಷವಾಗುತ್ತಾ ಬಂದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್, ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಸುಪ್ರೀಂಕೋರ್ಟ್ ಮತ್ತೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದಂತೆ ಇತರೆ ಕೆಲವು ಜೈಲುಗಳಲ್ಲಿ ಇದ್ದಾರೆ. ದರ್ಶನ್ ಪರ ವಕೀಲರು ಮತ್ತೆ ಜಾಮೀನಿಗೆ ಅರ್ಜಿ ಹಾಕಿಲ್ಲ ಆದರೆ ವಿಚಾರಣೆಯನ್ನು ಬೇಗನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆ. ಆದರೆ ಎಸ್​​ಪಿಪಿ ಅವರು ಸತತ ವಿಚಾರಣೆ ಅಥವಾ ತ್ವರಿತ ವಿಚಾರಣೆಗೆ ಒಪ್ಪಿಲ್ಲ.

The post ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! appeared first on Good News 24x7.

]]>