acting Archives - Good News 24x7 https://www.goodnews24x7.com/tag/acting/ Kannada Wed, 12 Nov 2025 08:24:43 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg acting Archives - Good News 24x7 https://www.goodnews24x7.com/tag/acting/ 32 32 ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ https://www.goodnews24x7.com/gaddappa-nina-of-thithi-movie-fame/ Wed, 12 Nov 2025 08:24:43 +0000 https://www.goodnews24x7.com/?p=8135 ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು…

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>

ಗಡ್ಡಪ್ಪ ಚನ್ನೇ ಗೌಡ ನಿ*ನ: ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಈ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದ ಚನ್ನೇಗೌಡ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

 

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

The post ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿ*ನ appeared first on Good News 24x7.

]]>