ActorDarshan Archives - Good News 24x7 https://www.goodnews24x7.com/tag/actordarshan/ Kannada Thu, 14 May 2026 12:39:30 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg ActorDarshan Archives - Good News 24x7 https://www.goodnews24x7.com/tag/actordarshan/ 32 32 ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! https://www.goodnews24x7.com/is-friday-auspicious-for-actor-darshan-the-future-is-in-the-hands-of-the-supreme-court/ Thu, 14 May 2026 12:39:30 +0000 https://www.goodnews24x7.com/?p=9512 ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ…

The post ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! appeared first on Good News 24x7.

]]>

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ ನಾಳೆ (ಮೇ 15) ಸುಪ್ರೀಂಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.

ಕಾರಾಗೃಹದ ಅವ್ಯವಸ್ಥೆ ಮತ್ತು ಸಹ ಕೈದಿಗಳಿಂದ ಬೆದರಿಕೆ, ಕಿರುಕುಳ ಸೇರಿದಂತೆ ಇನ್ನೂ ಕೆಲವು ಸಮಸ್ಯೆಗಳನ್ನು ದರ್ಶನ್, ಸುಪ್ರೀಂಕೋರ್ಟ್ ಮುಂದೆ ಹೇಳಿಕೊಂಡಿದ್ದರು. ಈ ಸಂಬಂಧ ಕಾರಾಗೃಹ ಇಲಾಖೆಯಿಂದ ವರದಿಯನ್ನು ಸುಪ್ರೀಂಕೋರ್ಟ್ ಕೇಳಿತ್ತು. ಇದೀಗ ಎಸ್​​ಪಿಪಿ ಅವರು ಈ ಕುರಿತು ನ್ಯಾಯಾಲಯಕ್ಕೆ ಕೆಲವು ವಿಡಿಯೋ ಸಾಕ್ಷ್ಯಗಳ ಸಹಿತ ವಾದ ಮಂಡಿಸಿದ್ದು, ದರ್ಶನ್ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ದರ್ಶನ್​​ಗೆ ಇತರೆ ಕೈದಿಗಳೊಟ್ಟಿಗೆ ಸಂಪರ್ಕ ಇಲ್ಲವೆಂದು, ಅವರನ್ನು ಪ್ರತ್ಯೇಕ ಸೆಲ್​​ನಲ್ಲಿ ಇರಿಸಲಾಗಿದೆ ಎಂದಿದ್ದಾರೆ. ನ್ಯಾಯಾಲಯಕ್ಕೆ ಸಿಸಿಟಿವಿ ಮತ್ತು ಬಾಡಿಕ್ಯಾಮ್​​ಗಳ ದೃಶ್ಯಗಳನ್ನು ಸಹ ಸಲ್ಲಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇವುಗಳ ಜೊತೆಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮಾಡುತ್ತಿಲ್ಲ, 270 ಸಾಕ್ಷ್ಯಗಳಲ್ಲಿ 10 ಸಾಕ್ಷ್ಯಗಳ ವಿಚಾರಣೆಯನ್ನೂ ಮಾಡಲಾಗಿಲ್ಲ ವಿಚಾರಣೆ ನಡೆಯುವವರೆಗೆ ತಮಗೆ ಜಾಮೀನು ನೀಡಬೇಕು ಎಂದು ಸಹ ದರ್ಶನ್ ಮನವಿ ಮಾಡಿದ್ದರು. ಈ ಬಗ್ಗೆಯೂ ಸಹ ಸುಪ್ರೀಂಕೋರ್ಟ್ ವರದಿ ಕೇಳಿತ್ತು. ಅದನ್ನೂ ಸಹ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸುಪ್ರೀಂಕೋರ್ಟ್​​ಗೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ, ದರ್ಶನ್ ಸಲ್ಲಿಕೆ ಮಾಡಿದ್ದ ಇತರೆ ಅರ್ಜಿಗಳ ಕಾರಣಕ್ಕೆ ಮುಖ್ಯ ಆರೋಪದ ವಿಚಾರಣೆ ತಡವಾಗಿದೆ ಎಂದು ಎಸ್​​ಪಿಪಿ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದೆ. (ಜೂನ್ 08, 2024) ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಹಲವು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದರು. 2024ರ ಅಕ್ಟೋಬರ್ ತಿಂಗಳಲ್ಲಿ ವೈದ್ಯಕೀಯ ಚಿಕಿತ್ಸೆ ಕಾರಣ ನೀಡಿ ದರ್ಶನ್ ಜಾಮೀನು ಪಡೆದಿದ್ದರು. ಆ ಬಳಿಕ ಪವಿತ್ರಾ ಸೇರಿದಂತೆ ಇತರೆ ಕೆಲವು ಆರೋಪಿಗಳಿಗೂ ಜಾಮೀನು ನೀಡಲಾಯ್ತು. ಬಳಿಕ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡು, ಚಿತ್ರೀಕರಣವನ್ನೂ ಮುಗಿಸಿದರು. ಆದರೆ ಬೆಂಗಳೂರು ಪೊಲೀಸರು ದರ್ಶನ್ ಜಾಮೀನು ರದ್ದು ಮಾಡುವಂತೆ ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳ ಜಾಮೀನನ್ನು 2025ರ ಆಗಸ್ಟ್ ತಿಂಗಳಲ್ಲಿ ರದ್ದು ಮಾಡಿತು. ಆಗಿನಿಂದಲೂ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

The post ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! appeared first on Good News 24x7.

]]>
ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್. https://www.goodnews24x7.com/mp-yaduveer-gives-indirect-taunt-to-actor-darshan-fans/ Mon, 28 Jul 2025 07:26:39 +0000 https://www.goodnews24x7.com/?p=5186 ಮೈಸೂರು : ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ನಾನು…

The post ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್. appeared first on Good News 24x7.

]]>

ಮೈಸೂರು : ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರೋಕ್ಷ ಟಾಂಗ್ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ ಕುಳಿತುಕೊಂಡು ಕಮೆಂಟ್ ಹಾಕುತ್ತಾರೆ. ಅಂತವರಿಗೆ ಏನು ಮಾಡೋಕಾಗತ್ತೆ. ನಾವು ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ. ಕೊನೆಗೆ ತೀರ್ಪುನ್ನು ಕೊಡೊ ತನಕ ನಾವು ಯಾರು ಅದಕ್ಕೆ ಪ್ರತಿಕ್ರಿಯೆ ನೀಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಗಳನ್ನ ನಿರ್ಲಕ್ಷ ಮಾಡಬೇಕಷ್ಟೆ ಎಂದಿದ್ದಾರೆ.

ನಾಯಕತ್ವ ಇರೋದು ಕೆಲಸ ಮಾಡೋಕೆ ಹೋಲಿಕೆ ಮಾಡೋಕಲ್ಲ
ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿಎಂ ಸಿದ್ದರಾಮಯ್ಯ ಹೋಲಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ನಾಯಕತ್ವ ಇರೋದು ಕೆಲಸ ಮಾಡೋಕೆ ಹೋಲಿಕೆ ಮಾಡೋಕಲ್ಲ. ನಾನು ಸಂಸದನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನನ್ನ ಹಿಂದಿನವರು ಏನು ಮಾಡಿದರು ಅದನ್ನು ನಾನು ಹೋಲಿಕೆ ಮಾಡಲ್ಲ. ನನ್ನ ಆಲೋಚನೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಸರ್ಕಾರದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ಆಗ್ತೀವೆ. ಕ್ಷಮೆ ಕೇಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದು. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ಹಿನ್ನಲೆ, ಇದೊಂದು ಒಳ್ಳೆಯ ಕಾರ್ಯಾಚರಣೆ. ಡ್ರಗ್ಸ್ ಅನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ. ಪೊಲೀಸರು ಕೂಡ ಇನ್ನೂ ಹೆಚ್ಚಿನದಾಗಿ ಕೆಲಸ ಮಾಡಬೇಕು. ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಯದುವೀರ್ ತಿಳಿಸಿದರು.

ನರಸಿಂಹ ರಾಜ ಕ್ಷೇತ್ರದಲ್ಲಿ ಇಂತಹ ಅನೇಕ ದೂರುಗಳು ದಿನನಿತ್ಯ ಬರತ್ತದೆ. ಡ್ರಗ್ಸ್ ಮಾರಾಟ ಎಲ್ಲ ಕಡೆ ಆಗುತ್ತಿದೆ ಅನ್ನುವ ಆರೋಪ ಕೇಳಿ ಬಂದಿದೆ. ನರಸಿಂಹರಾಜ ಕ್ಷೇತ್ರದ ಜನಪ್ರತಿನಿಧಿಗಳು ಅಲ್ಲಿನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸವಾಲಾಗಿ ಸ್ವೀಕರಿಸಿ ಜನರ ನಂಬಿಕೆ ಉಳಿಸಿಕೊಳ್ಳಬೇಕು ಸಂಸದ ಯದುವೀರ್ ಒಡೆಯರ್ ಹೇಳಿದರು.

ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಂಸದ ಯದುವೀರ್
ವಸ್ತುಪ್ರದರ್ಶನದ ಆವರಣದಲ್ಲಿ ನೂತನ ಯುನಿಟಿ ಮಾಲ್ ನಿರ್ಮಾಣ ಹಿನ್ನಲೆ, ಸಂಸದ ಯದುವೀರ್ ಅವರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಯೋಜನಯಡಿ 193 ಕೋಟಿ ವೆಚ್ಚದಲ್ಲಿ ಯುನಿಟಿ ಮಾಲ್ ನಿರ್ಮಾಣಗೊಳ್ಳುತ್ತಿದ್ದು, ಸಂಸದ ಯದುವೀರ್ ಒಡೆಯರ್ ಗೆ ಶಾಸಕ ಶ್ರೀವತ್ಸ ಸಾಥ್ ನೀಡಿದರು.
ಬಳಿಕ ಮಾತನಾಡಿದ ಯದುವೀರ್, ಮೈಸೂರಿನ ವಸ್ತುಪ್ರದರ್ಶನದ ಆವರಣದಲ್ಲಿ ಮಾಲ್ ನಲ್ಲಿ 99 ಮಳಿಗೆಗಳು ಇರುತ್ತದೆ. ಮೈಸೂರಿನ ಪರಂಪರೆ ಸಾರುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರಿನ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಎಲ್ಲಾ ರೀತಿಯ ಅಂಗಡಿಗಳನ್ನು ಕೂಡ ಇಲ್ಲಿ ತೆರೆಯಲು ನಿರ್ಧಾರ ಮಾಡಲಾಗಿದೆ. ಲೋಕಲ್ ಪ್ರಾಡಕ್ಟ್ ಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಇದಕ್ಕೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಸರ್ಕಾರ ಸಂಪೂರ್ಣ ಹಣ ನೀಡುತ್ತೆ. ಆರೂವರೆ ಎಕರೆ ಜಾಗದಲ್ಲಿ ಈ ಮಾಲ್ ನಿರ್ಮಾಣ ಆಗತ್ತದೆ. ಪಾರ್ಕಿಂಗ್ ಸೇರಿ ಎಲ್ಲವೂ ಕೂಡ ಇಲ್ಲೇ ಆಗುತ್ತದೆ ಎಂದರು.

ಪ್ರವಾಸೋಧ್ಯಮಕ್ಕೆ ಒತ್ತು ನೀಡುವ ಸಲುವಾಗಿ ಮಾಲ್ ನಿರ್ಮಾಣ ಮಾಡುತ್ತಿದ್ದೇವೆ. ಹೆಚ್ಚಿನ ಜನ ಮುಂದಿನ ದಿನಗಳಲ್ಲಿ ಇಲ್ಲಿ ಬರುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಇಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುತ್ತೇವೆ. ವಾರಾಂತ್ಯದಲ್ಲಿ ಸಂತೆಗಳನ್ನು ಕೂಡ ಆಯೋಜಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಚುನಾವಣೆ ಸಂಧರ್ಭದಲ್ಲಿ ಸಿಎಂ ಮೈಸೂರನ್ನು ತವರು ಜಿಲ್ಲೆ ಅಂತ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಅದೇ ಗಂಭೀರತೆಯನ್ನು ಚುನಾವಣೆ ಇಲ್ಲದಿದ್ದಾಗ ತೋರಿಸಬೇಕು. ಅ ಭಾಗದ ಶಾಸಕರು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಯದುವೀರ್ ಪ್ರತಿಕ್ರಿಯೆ ನೀಡಿದರು.

The post ನಟ ದರ್ಶನ್ ಫ್ಯಾನ್ಸ್ ಗೆ ಪರೋಕ್ಷ ಟಾಂಗ್ ಕೊಟ್ಟ ಸಂಸದ ಯದುವೀರ್. appeared first on Good News 24x7.

]]>
ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. https://www.goodnews24x7.com/a-sea-of-devotees-visit-chamundeshwari-on-the-2nd-friday-of-the-month-of-ashada-dcm-actor-darshan-visit-with-family/ Fri, 04 Jul 2025 09:15:05 +0000 https://www.goodnews24x7.com/?p=4896 ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

The post ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. appeared first on Good News 24x7.

]]>

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.


ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ   


ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.

ನಟ ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ


ನಟ ದರ್ಶನ್ ಆಷಾಡಮಾಸದ ಎರಡನೇ ಶುಕ್ರವಾರದಂದು ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆಗೂಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಮಾಡಿದ್ದಾರೆ. ಇಂದು ಚಾಮುಂಡೇಶ್ವರಿ ತಾಯಿಗೆ ಲಕ್ಷ್ಮೀ ಅಲಂಕಾರ, ಹೂವು, ಬಳೆ, ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಆಗಮಿಸಿದ ವೇಳೆ ಸಾಕಷ್ಟು ಮಂದಿ ಅಭಿಮಾನಿಗಳು ಅವರನ್ನು ಕಾಣಲು ಬಂದ ಕಾರಣ, ದೇವಾಲಯದಲ್ಲಿ ನೂಕು-ನುಗ್ಗಲು ಉಂಟಾಯ್ತು.

The post ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. appeared first on Good News 24x7.

]]>