Adikavi Sri Maharshi Valmiki University Archives - Good News 24x7 https://www.goodnews24x7.com/tag/adikavi-sri-maharshi-valmiki-university/ Kannada Wed, 05 Feb 2025 10:46:58 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Adikavi Sri Maharshi Valmiki University Archives - Good News 24x7 https://www.goodnews24x7.com/tag/adikavi-sri-maharshi-valmiki-university/ 32 32 ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! https://www.goodnews24x7.com/%e0%b2%b0%e0%b2%be%e0%b2%af%e0%b2%9a%e0%b3%82%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b2%e0%b2%af-%e0%b2%87%e0%b2%a8/ Wed, 05 Feb 2025 10:46:58 +0000 https://www.goodnews24x7.com/?p=2257 ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ…

The post ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! appeared first on Good News 24x7.

]]>

ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ.
ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು.
ಇದೀಗ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ರಾಯಚೂರು ವಿಶ್ವವಿದ್ಯಾಲಯಗೆ “ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ” ಮರುನಾಮಕಾರಣ ಮಾಡಲು ತೀರ್ಮಾನಿಸಲಾಗಿತ್ತು.
ಈ ಮರುನಾಮಕಾರಣಕ್ಕೆ ಮುಖ್ಯ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಯ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ಅವರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣಗೊಳಿಸಲಾಗಿದ್ದು, ಇದಕ್ಕೆ ಮುಖ್ಯ ಕಾರಣಕರ್ತರಾದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಾಹೇಬರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

The post ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! appeared first on Good News 24x7.

]]>