arrangement Archives - Good News 24x7 https://www.goodnews24x7.com/tag/arrangement/ Kannada Sun, 17 Aug 2025 12:49:21 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg arrangement Archives - Good News 24x7 https://www.goodnews24x7.com/tag/arrangement/ 32 32 ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ https://www.goodnews24x7.com/%e0%b2%b9%e0%b2%b3%e0%b2%a6%e0%b2%bf-%e0%b2%ae%e0%b2%be%e0%b2%b0%e0%b3%8d%e0%b2%97%e0%b2%a6-%e0%b2%ae%e0%b3%86%e0%b2%9f%e0%b3%8d%e0%b2%b0%e0%b3%8b-%e0%b2%b8%e0%b3%8b%e0%b2%ae%e0%b2%b5%e0%b2%be/ Sun, 17 Aug 2025 12:48:25 +0000 https://www.goodnews24x7.com/?p=6298 ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ನಮ್ಮ ಮೆಟ್ರೋ ಹಳದಿ ಮಾರ್ಗದ…

The post ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ appeared first on Good News 24x7.

]]>

ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳುಬೆಳಿಗ್ಗೆ 5:00 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ. ಈ ವಿಶೇಷ ವ್ಯವಸ್ಥೆ ಕೇವಲ ಸೋಮವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮರುದಿನ ಮಂಗಳವಾರ (ಆ.19) ದಿಂದ ಹಳದಿ ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 6:30 ರಿಂದ ಪ್ರಾರಂಭವಾಗಲಿವೆ.
ಹಿಸುತ್ತವೆ.

ಹಳದಿ ಮಾರ್ಗ ಎಲ್ಲಿಂದ ಎಲ್ಲಿಯವರೆಗೆ ಸಂಚಾರ
ಆರ್​ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೂ ಸಂಪರ್ಕ ಕಲಿಸಲಾಗಿದ್ದು, ಒಟ್ಟು 19.15 ಕಿಲೋ ಮೀಟರ್ ಉದ್ದದ ಮಾರ್ಗವಾಗಿದೆ. ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿಯಿಂದ ಬೆಂಗಳೂರಿನ ಕೇಂದ್ರ ಭಾಗದ ನಡುವೆ ಸಂಪರ್ಕ ಕೊಂಡಿಯಾಗಿದೆ.

ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ಹಳದಿ ಮಾರ್ಗದ ರೈಲು 3 ಮೆಟ್ರೋ ಲೈನ್‌ಗೆ ಕೂಡುತ್ತದೆ. ಹಳದಿ ಮಾರ್ಗವು ಹಸಿರು ಮಾರ್ಗ, ಗುಲಾಬಿ, ನೀಲಿ ಮಾರ್ಗಕ್ಕೆಕ್ಕೆ ಕೂಡುತ್ತದೆ. ಜಯದೇವ ಆಸ್ಪತ್ರೆ ನಿಲ್ದಾಣವು ಅತಿ ಎತ್ತರ ಹಾಗೂ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗದ ವಿಶೇಷತೆಗಳೇನು? ಇಲ್ಲಿದೆ ವಿವರ, ಫೋಟೋಸ್​ ನೋಡಿ

ನಮ್ಮ ಮೆಟ್ರೋ ಹಳದಿ ಮಾರ್ಗದ ನಿಲ್ದಾಣಗಳು: ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರ್ ರಸ್ತೆ, ಇನ್ಫೋಸಿಸ್‌ ಫೌಂಡೇಶನ್ ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಬೆರತೇನ ಅಗ್ರಹಾರ, ಹೊಸ ರೋಡ್, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿ ಗುಡ್ಡ ದೇವಸ್ಥಾನ, ಆರ್‌.ವಿ (ರಾಷ್ಟ್ರೀಯ ವಿದ್ಯಾಲಯ) ರಸ್ತೆ.

The post ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ appeared first on Good News 24x7.

]]>
ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. https://www.goodnews24x7.com/cm-siddaramaiah-to-offer-water-to-krs-on-june-30-minister-n-chaluvarayaswamy/ Fri, 27 Jun 2025 11:07:26 +0000 https://www.goodnews24x7.com/?p=4716 ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಸಾಂದರ್ಭಿಕ ಚಿತ್ರ…

The post ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. appeared first on Good News 24x7.

]]>

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಸಾಂದರ್ಭಿಕ ಚಿತ್ರ

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಯ ನಂತರ ಕೆ‌ಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಸರ್ಕಾರ ಇ- ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಅವಶ್ಯಕವಿರುವ ಲ್ಯಾಪ್ ಟಾಪ್ ಅನ್ನು ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಒದಗಿಸಿದ್ದು, ಸಂಕೇತಿಕವಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಲ್ಯಾಪ್ ಟಾಪ್ ವಿತರಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಲ್ಲಿ ಸರ್ಕಾರಿ ಕೆಲಸಗಳನ್ನು ಇ- ಆಫೀಸ್ ಮೂಲಕ ನಿರ್ವಹಿಸಬೇಕಿದ್ದು, ಕೆಲಸವನ್ನು ಪಾರದರ್ಶಕ ಹಾಗೂ ದಕ್ಷತೆಯಿಂದ ನಿರ್ವಹಿಸಿ ಎಂದರು.
ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳ ಗಣಕೀಕರಣ ಪ್ರಕ್ರಿಯೆ ತಾಲ್ಲೂಕು ಕಚೇರಿಗಳಲ್ಲಿ ನಡೆಯುತ್ತಿದ್ದು, ಮಂಡ್ಯ ತಾಲ್ಲೂಕು ಕಚೇರಿಯಿಂದ ಸಂಕೇತಿಕವಾಗಿ ಗಣಕೀಕೃತ ಪ್ರತಿಯನ್ನು ಸಚಿವ ಚಲುವರಾಯಸ್ವಾಮಿ ವಿತರಿಸಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

The post ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. appeared first on Good News 24x7.

]]>