arrest Archives - Good News 24x7 https://www.goodnews24x7.com/tag/arrest/ Kannada Sat, 23 Aug 2025 13:18:05 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg arrest Archives - Good News 24x7 https://www.goodnews24x7.com/tag/arrest/ 32 32 ಶ್ರೀ ಕ್ಷೇತ್ರ ಧರ್ಮಸ್ಥಳ ಫೇಸ್​ಬುಕ್​ ಪೇಜ್‌ನಲ್ಲಿ ಹೊಸ ಪೋಸ್ಟ್‌.. https://www.goodnews24x7.com/new-post-on-sri-kshetra-dharmasthala-facebook-page/ Sat, 23 Aug 2025 13:18:05 +0000 https://www.goodnews24x7.com/?p=6595 ಧರ್ಮಸ್ಥಳ ಸುತ್ತಮುತ್ತ ನೂರಾರು ಶ*ವಗಳನ್ನೂ ಹೂತು ಹಾಕಿದ್ದೇನೆ ಎಂದು ಆರೋಪ ಮಾಡಿದ್ದ ಅನಾಮಿಕನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಲ್ಲದೇ ಇಷ್ಟು ದಿನ ಶ*ವಗಳನ್ನು ಅಲ್ಲಿ ಹೂತು ಹಾಕಿದ್ದೇನೆ, ಇಲ್ಲಿ ಹೂತು ಹಾಕಿದ್ದೇನೆ ಅಂತ ಎಸ್​ಐಟಿ ಅಧಿಕಾರಿಗಳ ಮುಂದೆ ಹೇಳಿಕೊಂಡು ಸ್ಥಳಗಳನ್ನು ತೋರಿಸುತ್ತಿದ್ದ…

The post ಶ್ರೀ ಕ್ಷೇತ್ರ ಧರ್ಮಸ್ಥಳ ಫೇಸ್​ಬುಕ್​ ಪೇಜ್‌ನಲ್ಲಿ ಹೊಸ ಪೋಸ್ಟ್‌.. appeared first on Good News 24x7.

]]>

ಧರ್ಮಸ್ಥಳ ಸುತ್ತಮುತ್ತ ನೂರಾರು ಶ*ವಗಳನ್ನೂ ಹೂತು ಹಾಕಿದ್ದೇನೆ ಎಂದು ಆರೋಪ ಮಾಡಿದ್ದ ಅನಾಮಿಕನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಲ್ಲದೇ ಇಷ್ಟು ದಿನ ಶ*ವಗಳನ್ನು ಅಲ್ಲಿ ಹೂತು ಹಾಕಿದ್ದೇನೆ, ಇಲ್ಲಿ ಹೂತು ಹಾಕಿದ್ದೇನೆ ಅಂತ ಎಸ್​ಐಟಿ ಅಧಿಕಾರಿಗಳ ಮುಂದೆ ಹೇಳಿಕೊಂಡು ಸ್ಥಳಗಳನ್ನು ತೋರಿಸುತ್ತಿದ್ದ ಮಾಸ್ಕ್‌ಮ್ಯಾನ್ ನಿಜವಾದ ಹೆಸರು, ಆತನ ಮುಖ ಬಹಿರಂಗಗೊಂಡಿದೆ.

ಅಷ್ಟೇ ಅಲ್ಲದೇ ಅನಾಮಿಕ ಅರೆಸ್ಟ್ ಆಗುತ್ತಿದ್ದಂತೆ ಶ್ರೀಧರ್ಮಸ್ಥಳ ಮಂಜುನಾಥ ದೇವಸ್ಥಾನದ ಟ್ರಸ್ಟ್ ಇದೀಗ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದೆ. ಶಿವತಾಂಡವದ ಫೋಟೋವನ್ನು ಶೇರ್ ಮಾಡಲಾಗಿದೆ. ಆ ಪೋಸ್ಟ್​ ಜೊತೆಗೆ ‘ನಮೋ ಮಂಜುನಾಥ’ ಎಂದು ಬರೆಯಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ..
ಇನ್ನೂ, ಈ ಎಲ್ಲ ಬೆಳವಣಿಗೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಸ್ಐಟಿ ತನಿಖೆಯ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯವನ್ನ ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೆ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಯಾರು ಈ ಮಾಸ್ಕ್​ ಮ್ಯಾನ್​..?

The post ಶ್ರೀ ಕ್ಷೇತ್ರ ಧರ್ಮಸ್ಥಳ ಫೇಸ್​ಬುಕ್​ ಪೇಜ್‌ನಲ್ಲಿ ಹೊಸ ಪೋಸ್ಟ್‌.. appeared first on Good News 24x7.

]]>
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! https://www.goodnews24x7.com/congress-mla-veerendra-puppy-arrested/ Sat, 23 Aug 2025 11:09:39 +0000 https://www.goodnews24x7.com/?p=6585 ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್…

The post ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! appeared first on Good News 24x7.

]]>

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

1 ಕೋಟಿ ಫಾರಿನ್ ಕರೆನ್ಸಿ ಪತ್ತೆ
ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

The post ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! appeared first on Good News 24x7.

]]>
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್. https://www.goodnews24x7.com/congress-files-complaint-with-police-over-derogatory-comments-against-cm-siddaramaiah/ Tue, 08 Jul 2025 07:35:15 +0000 https://www.goodnews24x7.com/?p=4971 ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಬೇಟಿ ನೀಡಿದ ವಿಚಾರವಾಗಿ ಪ್ರಕಟವಾದ ಸುದ್ದಿಯ ಫೇಸ್​​ಬುಕ್​ ಪೋಸ್ಟ್​​ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಸಾವನ್ನು ಬಯಸಿ ಕಮೆಂಟ್ ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ ಕಾಂಗ್ರೆಸ್…

The post ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್. appeared first on Good News 24x7.

]]>

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಬೇಟಿ ನೀಡಿದ ವಿಚಾರವಾಗಿ ಪ್ರಕಟವಾದ ಸುದ್ದಿಯ ಫೇಸ್​​ಬುಕ್​ ಪೋಸ್ಟ್​​ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಸಾವನ್ನು ಬಯಸಿ ಕಮೆಂಟ್ ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪೀಣ್ಯ ಪೊಲೀಸರಿಗೆ ದೂರು ನೀಡಿದೆ.

ಬೆಂಗಳೂರು, ಜುಲೈ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವಿಚಾರವಾಗಿ ಪ್ರಕಟವಾಗಿರುವ ಸುದ್ದಿಗಳಿಗೆ ಕಿಡಿಗೇಡಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ಕಾರಣ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಸಿದ್ದರಾಮಯ್ಯ ಸಾವಿನ ಬಗ್ಗೆ ಪ್ರಸ್ತಾಪಿಸಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದಾರೆ..

The post ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಕಮೆಂಟ್ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್. appeared first on Good News 24x7.

]]>