#Bangladeshi Archives - Good News 24x7 https://www.goodnews24x7.com/tag/bangladeshi/ Kannada Sat, 07 Mar 2026 05:49:22 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Bangladeshi Archives - Good News 24x7 https://www.goodnews24x7.com/tag/bangladeshi/ 32 32 ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು! https://www.goodnews24x7.com/police-are-on-the-lookout-for-illegal-immigrants-in-bengalurupolice-are-on-the-lookout-for-illegal-immigrants-in-bengaluru/ Sat, 07 Mar 2026 05:49:22 +0000 https://www.goodnews24x7.com/?p=8747 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

The post ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು! appeared first on Good News 24x7.

]]>

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ ದಾಖಲೆಗಳಿಲ್ಲದೆ ವಾಸಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ವಶಪಡಿಸಿಕೊಂಡವರನ್ನು FRROಗೆ ಹಸ್ತಾಂತರಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.

ಒಂದೇ ದಿನದಲ್ಲಿ ನೂರಾರು ವಿದೇಶಿ ಪ್ರಜೆಗಳ ಪತ್ತೆ
ಪೊಲೀಸರು ಹೇಳುವಂತೆ ನಗರದಲ್ಲಿ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದ್ದು, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ.

ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.

ತನಿಖೆ ವೇಳೆ ಸಿಕ್ತು ದಾಖಲೆ ಪೊಲೀಸರು ನಡೆಸಿದ ಪರಿಶೀಲನೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡ ಪತ್ತೆಯಾಗಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳ ಅಧಿಕಾರಿಗಳಿಗೆ ರವಾನಿಸಲಾಗುತ್ತಿದ್ದು, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಹಿಂದೆ ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ವೇಳೆ ಫೆಬ್ರವರಿ 26ರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರು ಪತ್ತೆಯಾಗಿದ್ದರು. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಎಂದು ತಿಳಿದು ಬಂದಿತ್ತು.

 

The post ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು! appeared first on Good News 24x7.

]]>