Biology Archives - Good News 24x7 https://www.goodnews24x7.com/tag/biology/ Kannada Tue, 17 Feb 2026 12:26:47 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Biology Archives - Good News 24x7 https://www.goodnews24x7.com/tag/biology/ 32 32 SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. https://www.goodnews24x7.com/sslc-puc-exam-schedule-published/ Tue, 17 Feb 2026 12:26:31 +0000 https://www.goodnews24x7.com/?p=8374 ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

The post SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871
1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

The post SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>
ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. https://www.goodnews24x7.com/sslc-and-second-pu-final-exam-schedule-announced/ Thu, 06 Nov 2025 11:17:55 +0000 https://www.goodnews24x7.com/?p=8045 ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>

ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

 

 

 

 

 

 

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ
ಫೆ.28: ಕನ್ನಡ, ಆರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ತೆಲುಗು, ತಮಿಳು, ಮರಾಠಿ. ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ
ಮಾ.5: ಇತಿಹಾಸ
ಮಾ.6: ಭೌತ ವಿಜ್ಞಾನ
ಮಾ.7: ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.೨: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವವಿಜ್ಞಾನ, ಗಣಕ ವಿಜ್ಞಾನ
ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್. ಬ್ಯೂಟಿ ಆಂಡ್ ವೆಲ್‌ನೆಸ್

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿ ಇಆರ್‌ಟಿ), ಸಂಸ್ಕೃತ
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ , ಹಿಂದೂಸ್ತಾನಿ, ಕರ್ನಾಟಕ ಸಂಗೀತ
ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ
ಮಾ.28: ಗಣಿತ, ಸಮಾಜ ಶಾಸ್ತ್ರ
ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿ ಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳು
ಏ.1:ಅರ್ಥಶಾಸ್ತ್ರ ಎಂಜಿನಿಯರಿಂಗ್ ವಿಷಯಗಳು
ಏ.2: ಸಮಾಜ ವಿಜ್ಞಾನ

The post ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>
ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ. https://www.goodnews24x7.com/arjuna-elephant-annual-award-announced-for-two-presented-in-gajapayana/ Mon, 04 Aug 2025 06:20:47 +0000 https://www.goodnews24x7.com/?p=5294 ಬೀದರ್ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ / ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ,…

The post ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ. appeared first on Good News 24x7.

]]>

ಬೀದರ್ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ / ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.

The post ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ. appeared first on Good News 24x7.

]]>