bus Archives - Good News 24x7 https://www.goodnews24x7.com/tag/bus/ Kannada Tue, 30 Jun 2026 09:01:18 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg bus Archives - Good News 24x7 https://www.goodnews24x7.com/tag/bus/ 32 32 ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! https://www.goodnews24x7.com/mp-tejaswi-suryas-anger-against-the-state-government/ Tue, 30 Jun 2026 09:01:18 +0000 https://www.goodnews24x7.com/?p=9709 ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸಾಗಿದೆ ಎಂದು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ಕಾಯಬೇಕೋ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.

ಬಿಎಂಟಿಸಿ ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬಿಎಂಟಿಸಿ ಬಸ್‌ಗಳ ಕೊರತೆ ಕುರಿತು ಸಂಸದ ತೇಜಸ್ವಿ ಸೂರ್ಯ ಅಸಮಾಧಾನ.
ಪ್ರಯಾಣಿಕರು ಗಂಟೆಗಟ್ಟಲೆ ಬಸ್‌ಗಾಗಿ ರಸ್ತೆಯಲ್ಲೇ ಕಾಯುವಂತಾಗಿದೆ ಎಂದು ಟೀಕೆ.
ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ನಿಲ್ಲಬೇಕೋ ಎಂದು ಪ್ರಶ್ನೆ.
ಜೂನ್ 30,ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್​ ಸ್ಟ್ಯಾಂಡ್​ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಉತ್ತಮ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಿಲ್ಲದೆ ಯಾವುದೇ ಸಾರಿಗೆ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಬಸ್‌ಗಳ ಸಂಖ್ಯೆಯನ್ನು ಕನಿಷ್ಠ 15,000 ಕ್ಕೆ ಹೆಚ್ಚಿಸಬೇಕು. ನಗರದ ಯಾವುದೇ ಭಾಗದಲ್ಲಾದರೂ ಸರಿ, ಪ್ರತಿ ಪ್ರಜೆಗೆ ಐದು ನಿಮಿಷಗಳಲ್ಲಿ ಬಸ್ ಸಿಗುವಂತಾಗಲು ಖಾಸಗಿ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕು ಎಂದು ತೇಜಸ್ವಿ ಸೂರ್ಯ ಅವರು ಈ ಹಿಂದೆ ಮಾಡಿದ್ದ ಹಳೆಯ ಪೋಸ್ಟ್ ಅನ್ನು ನೆನಪಿಸಿಕೊಂಡಿದ್ದಾರೆ. ಆ ಪೋಸ್ಟ್ ಮಾಡಿ ಎಂಟು ತಿಂಗಳು ಕಳೆದಿದ್ದು, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ, ಹೊಸ ಉಪಮುಖ್ಯಮಂತ್ರಿ ಹಾಗೂ ಹೊಸ ಸಾರಿಗೆ ಸಚಿವರು ಅಧಿಕಾರಕ್ಕೆ ಬಂದಿದ್ದರೂ ಬೆಂಗಳೂರಿನ ಬಿಎಂಟಿಸಿ ಸ್ಥಿತಿ ಮಾತ್ರ ಹಳೇ ಕಥೆಯನ್ನೇ ಮುಂದುವರಿಸಿದೆ ಎಂದು ಅವರು ಟೀಕಿಸಿದ್ದಾರೆ.

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ https://www.goodnews24x7.com/sdpi-urges-government-to-drop-bus-fare-hike-proposal/ Fri, 26 Jun 2026 12:37:53 +0000 https://www.goodnews24x7.com/?p=9678 ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ ರೀತಿ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಕೈಬಿಡಬೇಕು ಹಾಗೂ ಸಾರಿಗೆ ನಿಗಮಗಳ ನಷ್ಟದ ನೆಪದಲ್ಲಿ ಮತ್ತೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಆಗ್ರಹಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನಹಿತಕ್ಕೆ ಸಂಬಂಧಿಸಿದ ಮೂರು ಮಹತ್ವದ ವಿಷಯಗಳ ಕುರಿತು ಎಸ್‌ಡಿಪಿಐ ಪಕ್ಷದ ನಿಲುವನ್ನು ವಿವರಿಸಿದರು.
1. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ
ಭಾರತದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯೇ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನೆ ವೇಳೆ “Logical Discrepancy” ಎಂಬ ಕಾರಣವನ್ನು ಉಲ್ಲೇಖಿಸಿ ಲಕ್ಷಾಂತರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದಂತಹ ಬಹುಭಾಷಾ, ಬಹುಸಂಸ್ಕೃತಿಯ ದೇಶದಲ್ಲಿ ಹೆಸರುಗಳ ಕಾಗುಣಿತ ಅಥವಾ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಸಿಕೊಂಡು ಮತದಾರರನ್ನು ಹೊರಗಿಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಕೃತಕ ಬುದ್ಧಿಮತ್ತೆಯ ತಾಂತ್ರಿಕ ದೋಷ ಅಥವಾ ಆಡಳಿತಾತ್ಮಕ ಲೋಪದಿಂದ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಆದ್ದರಿಂದ ರಾಜ್ಯ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, “Logical Discrepancy”ಯನ್ನು ಮತದಾರರನ್ನು ಕೈಬಿಡುವ ಮಾನದಂಡವಾಗಿ ಬಳಸಬಾರದು ಎಂದು ಒತ್ತಾಯಿಸಬೇಕು. ಯಾವುದೇ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೊದಲು ಮನೆ-ಮನೆಗೆ ಪರಿಶೀಲನೆ, ನೇರ ಭೇಟಿ ಹಾಗೂ ಸಂಬಂಧಪಟ್ಟ ವ್ಯಕ್ತಿಗೆ ಪೂರ್ವ ನೋಟಿಸ್ ನೀಡುವಂತಹ ಮಾನವೀಯ ಮತ್ತು ಪಾರದರ್ಶಕ ಕ್ರಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
2. ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಜನವಿರೋಧಿ ಕ್ರಮ
ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ಸಂಸ್ಥೆಗಳ (ESCOMs) ಕಾರ್ಯಾಚರಣೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಸುತ್ತಿರುವ ವರದಿಗಳು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿವೆ ಎಂದು ಅಬ್ದುಲ್ ಮಜೀದ್ ಹೇಳಿದರು.
ವಿದ್ಯುತ್ ಎಂಬುದು ಸಾಮಾನ್ಯ ವಾಣಿಜ್ಯ ವಸ್ತುವಲ್ಲ; ಅದು ಜನಜೀವನ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಬೆನ್ನೆಲುಬಾಗಿದೆ. ಈ ಸೇವೆಯನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಒಪ್ಪಿಸಿದರೆ ವಿದ್ಯುತ್ ದರ ಏರಿಕೆ, ಗ್ರಾಮೀಣ ಪ್ರದೇಶಗಳ ನಿರ್ಲಕ್ಷ್ಯ ಹಾಗೂ ಸೇವೆಯ ಗುಣಮಟ್ಟ ಕುಸಿಯುವ ಅಪಾಯವಿದೆ.
ಸರ್ಕಾರ ಖಾಸಗೀಕರಣದ ಮೂಲಕ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವ ಬದಲು, ಎಸ್ಕಾಂಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತಂದು, ಸಾರ್ವಜನಿಕ ಸ್ವಾಮ್ಯದಲ್ಲಿಯೇ ಉತ್ತಮ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
3. ಬಸ್ ದರ ಏರಿಕೆ ಪ್ರಸ್ತಾವವನ್ನು ಸರ್ಕಾರ ತಕ್ಷಣ ತಿರಸ್ಕರಿಸಲಿ
ರಾಜ್ಯದ ರಸ್ತೆ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಈಗಾಗಲೇ 2025ರ ಜನವರಿ 5ರಿಂದ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ. ಇದೀಗ ಬಿಎಂಟಿಸಿ ಶೇ.44, ಕೆಎಸ್‌ಆರ್‌ಟಿಸಿ ಶೇ.33 ಹಾಗೂ ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿಗಳೂ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿರುವುದು ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸುವ ಕ್ರಮವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜೀವನೋಪಾಯದ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಮತ್ತೆ ಬಸ್ ದರ ಹೆಚ್ಚಿಸುವುದು ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು, ಉದ್ಯೋಗಿಗಳು ಹಾಗೂ ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಲಕ್ಷಾಂತರ ಜನರಿಗೆ ದೊಡ್ಡ ಹೊಡೆತವಾಗಲಿದೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪ್ರಯಾಣಿಕರು ಕಾರಣರಲ್ಲ. ಸರ್ಕಾರದ ನೀತಿ ವೈಫಲ್ಯ, ಸಮರ್ಪಕ ಅನುದಾನದ ಕೊರತೆ ಮತ್ತು ಆಡಳಿತಾತ್ಮಕ ದೌರ್ಬಲ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ವೈಫಲ್ಯದ ಹೊರೆ ಜನರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರ ದರ ಏರಿಕೆಯನ್ನು ಸುಲಭ ಪರಿಹಾರವಾಗಿ ಪರಿಗಣಿಸದೆ, ನಿಗಮಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಬಸ್ ದರ ಏರಿಕೆ ಪ್ರಸ್ತಾವವನ್ನು ತಕ್ಷಣವೇ ತಿರಸ್ಕರಿಸಿ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.
ಅಂತಿಮವಾಗಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು, ಸಾರ್ವಜನಿಕ ವಿದ್ಯುತ್ ಸೇವೆ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ಇವು ಜನರ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಸರ್ಕಾರವು ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅಬ್ದುಲ್ ಮಜೀದ್ ಕರೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಮೌಲಾನಾ ಅಕ್ರಮ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಫಿವುಲ್ಲಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>
ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ https://www.goodnews24x7.com/6404-2drivers-rashness-kills-man/ Wed, 20 Aug 2025 10:33:27 +0000 https://www.goodnews24x7.com/?p=6404 ಬಿಎಂಟಿಸಿ ಬಸ್ ಚಕ್ರ ಹರಿದು ಪ್ರಯಾಣಿಕನೊಬ್ಬ ಸ್ಥಳದಲ್ಲೇ ಪ್ರಾಣ ಬಿಟ್ಟಿರೋ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಯನಗರ 4th ಬ್ಲಾಕ್​​​ನಲ್ಲಿ ವಾಸವಾಗಿದ್ದ ಸಂಪಂಗಿ ಎಂಬಾತ ಮಾರ್ಕೆಟ್​​​ನಲ್ಲಿ…

The post ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ appeared first on Good News 24x7.

]]>

ಬಿಎಂಟಿಸಿ ಬಸ್ ಚಕ್ರ ಹರಿದು ಪ್ರಯಾಣಿಕನೊಬ್ಬ ಸ್ಥಳದಲ್ಲೇ ಪ್ರಾಣ ಬಿಟ್ಟಿರೋ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಸಂಪಂಗಿ ಮೃತ ವ್ಯಕ್ತಿ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜಯನಗರ 4th ಬ್ಲಾಕ್​​​ನಲ್ಲಿ ವಾಸವಾಗಿದ್ದ ಸಂಪಂಗಿ ಎಂಬಾತ ಮಾರ್ಕೆಟ್​​​ನಲ್ಲಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮಾರ್ಕೆಟ್​​ಗೆ ಹೋಗಲು ಎಂದಿನಂತೆ ಬಸ್ ನಿಲ್ದಾಣಕ್ಕೆ ಬಂದಿದ್ದ.

ಆದ್ರೆ, ಬಸ್ ಹತ್ತುವಾಗಲೇ​ ರೂಟ್ ನಂಬರ್ 25 A ಚಾಲಕ ಹಿಂಬದಿಯ ಡೋರ್ ಹಾಕಿದ್ದಾನಂತೆ. ಪರಿಣಾಮ ಸಂಪಂಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ರಭಸಕ್ಕೆ ಸಂಪಂಗಿ ತಲೆ ಮೇಲೆ ಚಕ್ರ ಹರಿದು ಹೋಗಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಜೀವಬಿಟ್ಟಿದ್ದಾನೆ. ಪತಿಯನ್ನು ಕಳೆದುಕೊಂಡ ಪತ್ನಿ, ಹಾಗೂ ಮಗಳು ಕಣ್ಣೀರು ಹಾಕಿತ್ತಿದ್ದಾರೆ.

ಇನ್ನೂ ಕೆಲವು ದಿನಗಳ ಹಿಂದೆ ಪೀಣ್ಯ 2ನೇ ಹಂತದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯೆಯಲ್ಲಿ ಚಾಲಕನ ಬೇಜಬ್ದಾರಿಯಿಂದ ಅಪಘಾತ ಸಂಭವಿಸಿತ್ತು. ಚಾಲಕ ಬಸ್ ಚಾಲನೆ ಮಾಡಲು ಹೋಗಿ ರಸ್ತೆ ಪಕ್ಕದಲ್ಲೇ ಇದ್ದ ಪೆಟ್ಟಿ ಅಂಗಡಿಗೆ ಗುದಿದ್ದ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇದು ಅಷ್ಟೇ ಅಲ್ಲದೇ ಬಿಎಂಟಿಸಿ ಚಾಲಕ ಎಡವಟ್ಟಿನಿಂದ ಇನ್ನೆಷ್ಟು ಜೀವಗಳು ಬಲಿಯಾಗುತ್ತವೆಯೋ ಗೊತ್ತಿಲ್ಲ.

The post ಚಾಲಕನ ಯಡವಟ್ಟಿಗೆ ವ್ಯಕ್ತಿ ಬಲಿ appeared first on Good News 24x7.

]]>
ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! https://www.goodnews24x7.com/a-man-booked-a-taxi-for-exactly-%e2%82%b912000/ Tue, 05 Aug 2025 08:29:40 +0000 https://www.goodnews24x7.com/?p=5351 ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ. ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು…

The post ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! appeared first on Good News 24x7.

]]>

ಬೆಂಗಳೂರು :- ಬಸ್‌ ಸಂಚಾರ ಬಹುತೇಕ ಸ್ತಬ್ಧವಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಗಳ ಓಡಾಟ ಬಹುತೇಕ ಸ್ತಬ್ಧಗೊಂಡಿದೆ.

ಹೀಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವುದಕ್ಕೆ ಬರೋಬ್ಬರಿ ₹12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್​ ಮಾಡಿದ್ದಾನೆ. ​​ಇಂದು ಸಾರಿಗೆ ನೌಕರರ ಮುಷ್ಕರದ ಹಿನ್ನೆಯಲ್ಲಿ ಯಾವುದೇ ಬಸ್​ಗಳು ರಸ್ತೆಗೆ ಇಳಿದಿಲ್ಲ.

https://youtu.be/S-u-vqsfrpQ?si=hlca96xKfHRg33T0 ನಾನು ದರ್ಶನ್ ಸರ್ ಗೆ ಸಪೋರ್ಟ್ ಮಾಡೋದು!

ಅಲ್ಲದೇ ಮಂಗಳೂರಿಗೆ ಹೋಗಲು ಬಸ್ ಇಲ್ಲದ ಕಾರಣ ವ್ಯಕ್ತಿಯೊಬ್ಬ ರಾತ್ರಿ ತನಕ ಕಾಯೋದಕ್ಕೆ ಆಗಲ್ಲ. ರಾತ್ರಿ ಬಸ್ ಇರುತ್ತೆ ಅನ್ನೋದು ಕನ್ಫರ್ಮ್ ಇಲ್ಲ ಅಂತ 12 ಸಾವಿರ ಕೊಟ್ಟು ಟ್ಯಾಕ್ಸಿ ಬುಕ್ ಮಾಡಿದ್ದಾನೆ. ಈತ ಮೂರು ದಿನ ರಜೆಯ ಕಾರಣಕ್ಕೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ. ಏರ್ಪೋರ್ಟ್​ನಿಂದ ಬಸ್ ವ್ಯವಸ್ಥೆ ಇದ್ದ ಕಾರಣ ಮೆಜೆಸ್ಟಿಕ್​​ಗೆ ಬಂದಿದ್ದಾನೆ. ಆದ್ರೆ, ಮೆಜೆಸ್ಟಿಕ್​ನಿಂದ ಊರಿಗೆ ಹೋಗಲು ಬಸ್ ಇಲ್ಲದೆ ವ್ಯಕ್ತಿ ಕಂಗಾಲಾಗಿದ್ದ ಪರಿಣಾಮ 12 ಸಾವಿರಕ್ಕೆ ಟ್ಯಾಕ್ಸಿ ಮಾಡಿ ಮಂಗಳೂರಿಗೆ ಹೊರಟಿದ್ದಾನೆ.

The post ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.! appeared first on Good News 24x7.

]]>
ಸ್ಟೇರಿಂಗ್ ತುಂಡಾಗಿ ಕೆರೆಗೆ ಉರುಳಿದ KSRTC ಬಸ್ : ತಪ್ಪಿದ ಭಾರೀ ಅನಾಹುತ. https://www.goodnews24x7.com/ksrtc-bus-falls-into-lake-with-steering-wheel-broken-a-major-disaster-averted/ Fri, 11 Jul 2025 11:06:11 +0000 https://www.goodnews24x7.com/?p=5040 ಮೈಸೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿ ಬಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಹೆಚ್.ಡಿ.ಕೋಟೆ ಪಟ್ಟಣದಿಂದ…

The post ಸ್ಟೇರಿಂಗ್ ತುಂಡಾಗಿ ಕೆರೆಗೆ ಉರುಳಿದ KSRTC ಬಸ್ : ತಪ್ಪಿದ ಭಾರೀ ಅನಾಹುತ. appeared first on Good News 24x7.

]]>

ಮೈಸೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿ ಬಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಸಂಭವಿಸಿದೆ. ಗಾಯಗೊಂಡವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ.
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಹೆಚ್.ಡಿ.ಕೋಟೆ ಪಟ್ಟಣದಿಂದ ಹೆಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದಾಗ ಬಸ್ನ ಸ್ಟೇರಿಂಗ್ ತುಂಡಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಂತೇಗಾಲದ ಕೆರೆಗೆ ಬಸ್ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಚಾಲಕ ರವೀಶ್ ಅವರ ಮುಖ, ಗಡ್ಡಕ್ಕೆ ಪೆಟ್ಟು ಬಿದ್ದಿದೆ. ನಿರ್ವಾಹಕ ಗಣೇಶ್ ಅವರ ಬೆನ್ನು ಮೂಳೆಗೆ ಗಂಭೀರ ಪೆಟ್ಟಾಗಿದೆ.

25 ಮಂದಿ ಪ್ರಯಾಣಿಕರಿಂದ ಬಸ್: ಪ್ರಯಾಣಿಕರಲ್ಲಿ ಮಹಿಳೆ ಹಾಗೂ ಮಗುವಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸತ್ರೆಗೆ ಕಳುಹಿಸಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗಳಾದವರಿಗೆ ಆಸತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್.ಡಿ.ಕೋಟೆಯಿಂದ ಸರಗೂರು ಮಾರ್ಗವಾಗಿ ಕಾಡುಬೇಗೂರು-ಕುರ್ಣೆಗಾಲ ಮೂಲಕ ಸಾಗಿ ಕೇರಳ ಗಡಿಯ ಆಲನಹಳ್ಳಿಗೆ ತೆರಳಬೇಕಿದ್ದ ಕೆಎಸ್ಆರ್ಟಿಸಿ ಬಸ್ 25 ಮಂದಿ ಪ್ರಯಾಣಿಕರನ್ನು ಹೊತ್ತು ರಾತ್ರಿ 7.30ರ ಸುಮಾರಿನಲ್ಲಿ ಹೆಚ್.ಡಿ.ಕೋಟೆ ನಿಲ್ದಾಣದಿಂದ ಹೊರಟಿತ್ತು.

ತಪ್ಪಿದ ಭಾರೀ ಅನಾಹುತ : ಪಟ್ಟಣದಿಂದ ಸುಮಾರು ಒಂದೂವರೆ ಕಿಮೀ ದೂರ ಸಾಗುವುದರೊಳಗೆ ಬಸ್ನ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಎಡಗಡೆ ಕಬಿನಿ ಬಲದಂಡೆ ನಾಲೆ, ಬಲಗಡೆ ಬೊಂತ್ತೇಗಾಲ ಕೆರೆ ಇದ್ದುದರಿಂದ ಬಸ್ ಎತ್ತ ಚಲಿಸಿದರೂ ಪ್ರಯಾಣಿಕರ ಪ್ರಾಣಕ್ಕೆ ಆಪತ್ತು ಎದುರಾಗುವ ಸಂಭವ ಎದುರಾಗಿತ್ತು. ಈ ವೇಳೆ ಚಾಲಕ ಕೆರೆ ಏರಿಗೆ ಅಳವಡಿಸಿದ್ದ ಕಬ್ಬಿಣದ ತಡೆಗೋಡೆಗೆ ಗುದ್ದಿಸಿ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಬಸ್ ಕಬ್ಬಿಣದ ತಡೆಗೋಡೆಯನ್ನು ಮುರಿದುಕೊಂಡು ಕೆರೆಗೆ ಬಿದ್ದಿದೆ.

ಬಸ್ ಕೆರೆಗೆ ಉರುಳಿದ ಜಾಗದಿಂದ ನಾಲೈದು ಅಡಿಗಳ ಅಂತರದಲ್ಲೇ ಕೆರೆಯು ಭಾರಿ ಆಳವಿತ್ತು. ಹೀಗಾಗಿ ಭಾರೀ ಅನಾಹುತ ತಪ್ಪಿದೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಯ ನೆರವಿನಿಂದ ಗಾಯಾಳುಗಳನ್ನು ಬಸ್ನಿಂದ ಹೊರ ತೆಗೆದು ಆಸ್ಪತ್ರೆಗೆ ರವಾನಿಸಲಾಯಿತು. ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್ಐ ಅಶೋಕ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

The post ಸ್ಟೇರಿಂಗ್ ತುಂಡಾಗಿ ಕೆರೆಗೆ ಉರುಳಿದ KSRTC ಬಸ್ : ತಪ್ಪಿದ ಭಾರೀ ಅನಾಹುತ. appeared first on Good News 24x7.

]]>