cabinet Archives - Good News 24x7 https://www.goodnews24x7.com/tag/cabinet/ Kannada Tue, 12 Aug 2025 11:12:15 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg cabinet Archives - Good News 24x7 https://www.goodnews24x7.com/tag/cabinet/ 32 32 ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? https://www.goodnews24x7.com/is-randeep-surjewala-the-reason-for-k-n-rajannas-dismissal/ Tue, 12 Aug 2025 11:12:15 +0000 https://www.goodnews24x7.com/?p=5946 ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>

ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕೆಪಿಸಿಸಿ ಅಂಗಳದಲ್ಲಿ ಚರ್ಚೆಯಾಗುತ್ತಿದೆ.

ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ ಹೋಗಿರಲಿಲ್ಲ. ರಣದೀಪ್ ಸುರ್ಜೇವಾಲಾ, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವರ ಜೊತೆ ನಡೆಸುವಾಗ ಕೆ.ಎನ್.ರಾಜಣ್ಣ, ತಮ್ಮ ಕುಟುಂಬದ ಜೊತೆ ಅಮೆರಿಕಾ ಪ್ರವಾಸ ಹೋಗಿದ್ದರು. ನಂತರ ಹೋಗಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗುತ್ತೇನೆ ಎಂದಿದ್ದರು. ಆ ರೀತಿ ರಣದೀಪ್ ಸುರ್ಜೇವಾಲಾರನ್ನು ರಾಜಣ್ಣ ಭೇಟಿಯಾಗಲಿಲ್ಲ ಜೊತೆಗೆ ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ನಾಯಕರು ರಣದೀಪ್ ಸುರ್ಜೇವಾಲಾಗೆ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕರೆದು ಸಭೆ ನಡೆಸುವ ಅಧಿಕಾರ ಇಲ್ಲ. ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದು ಸರಿಯಲ್ಲ ಎಂದೆಲ್ಲಾ ಬಹಿರಂಗವಾಗಿ ರಣದೀಪ್ ಸುರ್ಜೇವಾಲಾ ವಿರುದ್ಧ ಮಾತನಾಡಿದ್ದರು.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಇದು ಸಹಜವಾಗಿಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಪಕ್ಷದ ಬೆಳವಣಿಗೆಗಳ ಬಗ್ಗೆ ಕಣ್ಣಿಟ್ಟಿರುವ ರಣದೀಪ್ ಸುರ್ಜೇವಾಲಾ ಗಮನಕ್ಕೆ ಬಂದಿದೆ. ಹೀಗಾಗಿ ರಣದೀಪ್ ಸುರ್ಜೇವಾಲಾಗೆ ಕೆ.ಎನ್.ರಾಜಣ್ಣ ಬಗ್ಗೆ ಒಳಗೊಳಗೆ ಅಸಮಾಧಾನ ಇತ್ತು. ಹೀಗಾಗಿ ಈಗ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿ ಕ್ಯಾಂಪೇನ್ ಮಾಡುವಾಗ ಅದರ ವಿರುದ್ಧವೂ ರಾಜಣ್ಣ ಹೇಳಿಕೆ ಕೊಟ್ಟಿದ್ದನ್ನೇ ರಣದೀಪ್ ಸುರ್ಜೇವಾಲಾ, ರಾಜಣ್ಣ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿಕೊಂಡಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ, ತಮ್ಮನ್ನು ಪ್ರಶ್ನಿಸಿದ ಕೆ.ಎನ್‌.ರಾಜಣ್ಣರನ್ನು ಹಣಿಯಲು ಅವರ ಹೇಳಿಕೆಯನ್ನೇ ಅವರ ವಿರುದ್ಧ ಅಶಿಸ್ತು ಎಂದು ಅಸ್ತ್ರ ಪ್ರಯೋಗಿಸಿ, ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ. ತಮ್ಮ ಹೋರಾಟವನ್ನು ಪ್ರಶ್ನಿಸಿದ ತಮ್ಮದೇ ಪಕ್ಷದ ಸಚಿವರ ಮಾತು ಅನ್ನು ಒಪ್ಪಿಕೊಳ್ಳಲು ಆಗಲ್ಲ. ಇದು ಅಶಿಸ್ತು ಎಂದು ರಾಹುಲ್ ಗಾಂಧಿ ಪರಿಗಣಿಸಿದ್ದಾರೆ. ಜೊತೆಗೆ ರಾಜಣ್ಣರ ಈ ಹಿಂದಿನ ವಿವಾದಾತ್ಮಕ ಹೇಳಿಕೆಗಳನ್ನು ಆಗಸ್ಟ್ 8 ರಂದು ರಾಹುಲ್ ಗಾಂಧಿ ಬೆೆಂಗಳೂರಿಗೆ ಬಂದಿದ್ದ ವೇಳೆಯೇ ರಣದೀಪ್ ಸುರ್ಜೇವಾಲಾ, ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದರಂತೆ.
ಆಗಲೂ ರಾಹುಲ್ ಗಾಂಧಿ, ಕೆ.ಎನ್.ರಾಜಣ್ಣ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕರ್ನಾಟಕದಲ್ಲಿ ನಾವು 140 ಶಾಸಕರ ಸರ್ಕಾರ ನಡೆಸುತ್ತಿದ್ದೇವೋ, 115 ಮಂದಿಯ ಶಾಸಕರ ಸರ್ಕಾರ ನಡೆಸುತ್ತಿದ್ದೇವೋ? ಬಹುಮತ ಇದ್ದರೂ, ಪದೇ ಪದೇ ಸರ್ಕಾರದಲ್ಲಿ ಗೊಂದಲ ಏಕೆ ಎಂದು ರಾಹುಲ್ ಗಾಂಧಿ ಅವರು ನೇರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರನ್ನು ಪ್ರಶ್ನಿಸಿದ್ದಾರೆ.

ಕೆ.ಎನ್.ರಾಜಣ್ಣ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದರೂ, ಏಕೆ ಯಾವುದೇ ಕ್ರಮ ಆಗಿಲ್ಲವೆಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರಂತೆ. ರಾಜಣ್ಣ ಪದೇ ಪದೇ ಪಕ್ಷ , ಸರ್ಕಾರಕ್ಕೆ ಮುಜುಗರ ಆಗುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ನೇರವಾಗಿ ರಾಹುಲ್ ಗಾಂಧಿಗೆ ಹೇಳಿದ್ದಾರೆ. ಇದರಿಂದಾಗಿಯೇ ರಾಹುಲ್ ಗಾಂಧಿಯೇ ಈಗ ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಫರ್ಮಾನು ಹೊರಡಿಸಿದ್ದರು. ಹೀಗಾಗಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಅದನ್ನು ಅಂಗೀಕರಿಸಿ, ರಾಜ್ಯಪಾಲರಿಗೆ ಕಳಿಸದೇ, ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಶಿಫಾರಸ್ಸು ಅನ್ನು ರಾಜ್ಯಪಾಲರಿಗೆ ಕಳಿಸಿದ್ದಾರೆ. ಬಳಿಕ ರಾಜಭವನದಿಂದ ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಪತ್ರ ಬಿಡುಗಡೆ ಆಗಿದೆ. ಆ ಪತ್ರವನ್ನು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಅವರಿಗೆ ರವಾನೆ ಮಾಡಿದ್ದಾರೆ.
ಹೀಗೆ ಸಚಿವ ಸ್ಥಾನದಿಂದ ಕೆ.ಎನ್‌. ರಾಜಣ್ಣರ ತಲೆದಂಡಕ್ಕೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಅಂಗಳದಲ್ಲಿ ನಿನ್ನೆಯಿಂದ ಚರ್ಚೆಯಾಗುತ್ತಿದೆ. ಕೆ.ಎನ್‌. ರಾಜಣ್ಣ ಕಿಕ್ ಔಟ್ ಎಪಿಸೋಡ್ ನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಣದೀಪ್ ಸುರ್ಜೇವಾಲಾ.

ಬ್ಯಾಕ್ ಟು ಬ್ಯಾಕ್ ರಾಜಣ್ಣರ ಗೊಂದಲದ ಹೇಳಿಕೆಗಳ ಪಟ್ಟಿಯನ್ನೇ ರಣದೀಪ್ ಸುರ್ಜೇವಾಲಾ ಸಂಗ್ರಹಿಸಿಕೊಂಡಿದ್ದರು. ಕೆಲ ರಾಜ್ಯ ನಾಯಕರ ಮೂಲಕ ಸಾಕ್ಷಿ ಸಮೇತ ವರದಿಯನ್ನು ತರಿಸಿಕೊಂಡು ಸೂಕ್ತ ಸಮಯಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಕಾಯುತ್ತಿದ್ದರು. ಡಿಕೆಶಿ ವಿರುದ್ಧ ಸಿಎಂ ಗಾದಿ, ಐದು ಡಿಸಿಎಂ ಹುದ್ದೆ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಕೆ.ಎನ್‌. ರಾಜಣ್ಣ ಬಹಿರಂಗವಾಗಿ ಮಾತನಾಡಿದ್ದರು. ಈ ಬಗ್ಗೆ ಉಸ್ತುವಾರಿ ಸುರ್ಜೇವಾಲಾಗೆ ನಿರಂತರವಾಗಿ ದೂರು ನೀಡುತ್ತಿದ್ದಿದ್ದು ಡಿಸಿಎಂ ಡಿಕೆಶಿ. ರಾಜಣ್ಣರ ಪ್ರತಿಯೊಂದು ಹೇಳಿಕೆಗಳ ಮಾಹಿತಿ ಪಡೆಯುತ್ತಿದ್ದಾಗಲೇ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧವೂ ಹೇಳಿಕೆಯನ್ನು ಕೆ.ಎನ್‌. ರಾಜಣ್ಣ ನೀಡಿದ್ದರು.
ಈಗ ರಾಹುಲ್ ಗಾಂಧಿ ಹೋರಾಟವನ್ನ ಅಣಕಿಸುವಂತೆ ಹೇಳಿಕೆ ನೀಡಿದ್ದನ್ನೆ ರಾಜಣ್ಣ ವಿರುದ್ಧ ಪ್ರಬಲ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಜೊತೆಗೆ ಮತಗಳ್ಳತನ ಸಂಬಂಧ ರಾಜಣ್ಣ ನೀಡಿದ್ದ ಹೇಳಿಕೆಯನ್ನ ರಣದೀಪ್ ಸುರ್ಜೇವಾಲಾ ಬಳಸಿಕೊಂಡಿದ್ದಾರೆ. ಮೊದಲ ಹಂತವಾಗಿ ಕೆ.ಸಿ ವೇಣುಗೋಪಾಲ್ ಗಮನಕ್ಕೆ ರಾಜಣ್ಣರ ವಿವಾದಾತ್ಮಕ ಹೇಳಿಕೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ನೇರವಾಗಿ ರಾಹುಲ್ ಗಾಂಧಿಗೆ ರಾಜಣ್ಣ ಹೇಳಿಕೆ ಬಗ್ಗೆ ಮನವರಿಕೆ ಮಾಡುವಲ್ಲಿ ರಣದೀಪ್ ಸುರ್ಜೇವಾಲಾ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ರಾಜ್ಯ ಕ್ಯಾಬಿನೆಟ್ ನಿಂದ ಕೆ.ಎನ್.ರಾಜಣ್ಣ ವಜಾ ಆದೇಶ ಹೈಕಮ್ಯಾಂಡ್ ನಿಂದ ಸಿಎಂ ಸಿದ್ದರಾಮಯ್ಯಗೆ ರವಾನೆಯಾಗಿದೆ.

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! https://www.goodnews24x7.com/%e0%b2%b8%e0%b2%9a%e0%b2%bf%e0%b2%b5-%e0%b2%b0%e0%b2%be%e0%b2%9c%e0%b2%a3%e0%b3%8d%e0%b2%a3-%e0%b2%b0%e0%b2%be%e0%b2%9c%e0%b3%80%e0%b2%a8%e0%b2%be%e0%b2%ae%e0%b3%86-%e0%b2%b0%e0%b2%b9%e0%b2%b8/ Mon, 11 Aug 2025 13:48:05 +0000 https://www.goodnews24x7.com/?p=5856 ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ…

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>

ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ ಇಷ್ಟೆಲ್ಲ ಬೆಳವಣಿಗೆಗಳು ನಡೆಯಲು ಕಾರಣವೇನು? ಕೆಎನ್ ರಾಜಣ್ಣ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರೇ? ಅಥವಾ ಯಾರದ್ದಾದರೂ ಒತ್ತಡಕ್ಕೆ ಕಟ್ಟುಬಿದ್ದು ಅವರು ಈ ನಿರ್ಧಾರ ತೆಗೆದುಕೊಂಡರೇ? ಎಂಬ ಕುತೂಹಲಗಳಿಗೆ ಉತ್ತರ ಇಲ್ಲಿದೆ.

ಇಂದು ವಿಧಾನಸಭಾ ಕಲಾಪ ಸಲಹಾ ಸಮಿತಿ ಸಭೆ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕಾರ್ಯದರ್ಶಿಗೆ ಕೆಎನ್ ರಾಜಣ್ಣ ರಾಜೀನಾಮೆ ಪತ್ರ ನೀಡಿ ವಿಧಾನಸೌಧದಿಂದ ಹೊರಟಿದ್ದಾರೆ. ಬಳಿಕ ಸಿಎಂ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರು. ಹೀಗೆ ದಿಢೀರೆಂದು ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಹಿಂದೆ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಹೌದು, ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. “ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿದೆ.

ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, “ವೋಟರ್ ಲಿಸ್ಟ್ನ್ನು ನಮ್ಮದೇ ಸರ್ಕಾರ ಇರುವಾಗ ಮಾಡಿರುವುದು. ಆಗ ಕಣ್ಮುಚ್ಚಿ ಕುಳಿತಿದ್ದು ಈಗ ಹೇಳಿದರೆ ಏನು ಪ್ರಯೋಜನ” ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುವ ಮೂಲಕ ತಮ್ಮದೇ ಪಕ್ಷದ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದರು.

The post ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು! appeared first on Good News 24x7.

]]>
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ. https://www.goodnews24x7.com/social-welfare-minister-h-c-mahadevappas-statement-regarding-the-cm-change-issue/ Wed, 11 Jun 2025 09:29:47 +0000 https://www.goodnews24x7.com/?p=4312 ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ…

The post ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ. appeared first on Good News 24x7.

]]>

ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನಲೆ ದಾಳಿಯಾಗಿರತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶವಿರಬಾರದು ಎಂದು ತಿಳಿಸಿದರು.

ಕಾಲ್ತುಳಿತ ವಿಚಾರ ಕುರಿತು ನಾಳೆ ಬಿಜೆಪಿಯಿಂದ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ವಿಪಕ್ಷಗಳು ಇರೋದೇ ವಿರೋಧ ಮಾಡೋಕೆ. ಕಾಲ್ತುಳಿತ ಘಟನೆ ಒಂದು ಹೃದಯವಿದ್ರಾವಕ ಘಟನೆ. ನಿರೀಕ್ಷೆಗಿಂತ ಹೆಚ್ಚಿನ ಜನ ಸೇರಿದ್ದರಿಂದ ದುರಂತ ಆಗಿದೆ. ಇಂತಹ ಘಟನೆಗಳು ಬೇರೆ ಕಡೆ ನಡೆದಾಗ ಯಾರು ರಾಜೀನಾಮೆ ಕೊಟ್ಟಿದ್ರು? ನೈತಿಕ ಹೊಣೆ ಅನ್ನೋದು ಮಹತ್ವದ್ದು. ತನಿಖೆ ನಡೆಯುತ್ತಿದೆ ಬಳಿಕ ಯಾರದು ತಪ್ಪು ಏನು ಎಲ್ಲಾ ತಿಳಿಯತ್ತೆ. ಜಾತಿಗಣತಿ ವಿಚಾರ ಕುರಿತು ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯುತ್ತದೆ. ಅಲ್ಲಿ ತೀರ್ಮಾನ ಆಗತ್ತದೆ ಎಂದರು.

ಇನ್ನು ಸಂಪುಟ ಪುನಾರಚನೆ ವಿಚಾರ, ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಹೈ ಕಮಾಂಡ್ ಪುನಾರಚನೆ ಬಗ್ಗೆ ನನ್ನ ಸಲಹೆ ಕೊಡಿ ಅಂತ ಕೇಳಿದರೇ ಕೊಡುತ್ತೇನೆ ಎಂದು ತಿಳಿಸಿದರು. ಕಳೆದ ವರ್ಷದ ದಸರಾ ಲೆಕ್ಕ ಕೊಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಲೆಕ್ಕ ಕೊಡಿ ಅಂತ ಈಗಾಗಲೇ ಹೇಳಿದ್ದೇನೆ. ಜಿಲ್ಲಾಡಳಿತ ಲೆಕ್ಕ ಕೊಡುತ್ತದೆ. ಅದರಲ್ಲೇನು ಮುಚ್ಚು ಮರೆ ಇಲ್ಲ ಎಂದರು.

The post ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ. appeared first on Good News 24x7.

]]>
ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; https://www.goodnews24x7.com/%e0%b2%b8%e0%b2%9a%e0%b2%bf%e0%b2%b5-%e0%b2%b0%e0%b2%be%e0%b2%9c%e0%b2%a3%e0%b3%8d%e0%b2%a3%e0%b2%b0%e0%b2%a8%e0%b3%8d%e0%b2%a8%e0%b3%81-%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6%e0%b2%bf/ Thu, 06 Mar 2025 06:29:46 +0000 https://www.goodnews24x7.com/?p=2623 ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ…

The post ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; appeared first on Good News 24x7.

]]>

ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ

ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ನಡುವೆ ಬಹಿರಂಗ ಗುದ್ದಾಟ ನಡೆದಿದೆ. ಶಿವಕುಮಾರ ಶಿಫಾರಸು ಮಾಡುವ ಯಾವುದೇ ಅಭ್ಯರ್ಥಿಗಳನ್ನು ನನ್ನ ಇಲಾಖೆಯಡಿ ಬರುವ ಸಂಸ್ಥೆಗಳಿಗೆ ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಸ್ಪಷ್ಟವಾಗಿ ತಿಳಿಸಿರುವುದಲ್ಲದೆ, ತಮ್ಮ ಅಭ್ಯರ್ಥಿ ಗಳ ಪಟ್ಟಿಯನ್ನೂ ನೀಡಿದ್ದಾರೆ. ಇದನ್ನರಿತ ಶಿವಕುಮಾರ್, ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ರಾಜಣ್ಣ ವಿರುದ್ಧ ದೂರು ನೀಡಿರುವು ದಲ್ಲದೆ, ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮನವಿ ಮಾಡಿದ್ದಾರೆ. ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳನ್ನು ಗಮನ ದಲ್ಲಿಟ್ಟುಕೊಂಡು ಸಹಕಾರಿ ಇಲಾಖೆಯಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿ ಆಗಬೇಕಿದೆ, ಈ ವಿಷಯದಲ್ಲಿ ಅವರು ನಮ್ಮನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಆದರೆ, ಖರ್ಗೆ ಅವರು, ರಾಜಣ್ಣ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ, ಈ ವಿಷಯದ ಬಗ್ಗೆ ಚರ್ಚೆ ಮಾಡಿ, ಮುಂದೆ ನೋಡೋಣ ಎಂದು ತಿಳಿ ಹೇಳಿದ್ದಾರೆ. ಖರ್ಗೆ ಅವರ ಸಲಹೆಯಂತೆ ಶಿವಕುಮಾರ್ ನಿನ್ನೆ ಮಧ್ಯಾಹ್ನ ರಾಜಣ್ಣ ಅವರಿಗೆ ಮಾಹಿತಿ ನೀಡಿ, ವಿಧಾನಸೌಧದಲ್ಲಿನ ಅವರ ಕಚೇರಿಗೆ ತೆರಳಿ, ಪಕ್ಷದ ಸಹಕಾರಿ ದಿಗ್ಗಜರ ಜೊತೆ ಸಭೆ ಮಾಡಿದರು. ಆದರೆ, ಈ ಸಭೆಗೆ ರಾಜಣ್ಣ ಬರಲೇ ಇಲ್ಲ, ನಂತರ ಶಿವಕುಮಾರ್ ಅವರೇ ಉಳಿದವರೊಂದಿಗೆ ಚರ್ಚೆ ನಡೆಸಿ ತೆರಳಿದ್ದಾರೆ. ತಮ್ಮನ್ನೇ ಸಂಪುಟದಿಂದ ಕೈಬಿಡುವಂತೆ ವರಿಷ್ಠರಿಗೆ ದೂರು ನೀಡಿರುವ ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ರಾಜಣ್ಣ, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ವಾಲ್ಮೀಕಿ ಸಮುದಾಯದ, ಪಕ್ಷಕ್ಕೆ ಸೇರಿದ 17 ಶಾಸಕರ ಸಭೆ ನಡೆಸಿದ್ದಾರೆ.
ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡಬಾರದೆಂದು ಮುಖ್ಯಮಂತ್ರಿ ಅವರನ್ನು ಸಭೆ ಒತ್ತಾಯಿಸಿರುವುದಲ್ಲದೆ, ಲೋಕೋಪ ಯೋಗಿ ಮತ್ತು ಸಹಕಾರಿ ಇಲಾಖೆಯಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಬಾರದೆಂಬ ಮನವಿ ಮಾಡಲು ತೀರ್ಮಾನ ಕೈಗೊಂಡಿದೆ.


ಶಿವಕುಮಾರ್ ತಮ್ಮ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೂ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಸಂಬಂಧಿ ವಿಧಾನಪರಿಷತ್ ಸದಸ್ಯ ನೇಮನ ಮಾಡಲು ತಡಸ ಹೊಂದಿದ್ದಾನ,ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಪೆಕ್ಸ್ ಬ್ಯಾಂಕ್ನ ಹಾಲಿ ಅಧ್ಯಕ್ಷರು, ಅವ ರನ್ನು ಕೆಳಗಿಳಿಸಿ ರವಿ ಅವರನ್ನು ತರಬೇಕು. ಅದು ಸಾಧ್ಯವಾಗದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಧುರೀಣ ರಾಜೇಂದ್ರ ಕುಮಾರ್, ಇಲ್ಲವೇ ಶಿವಮೊಗ್ಗದ ಮತ್ತೊಬ್ಬ ಸಹಕಾರಿ ಧುರೀಣ ಮಂಜುನಾಥ್ ಗೌಡ ಅವರಲ್ಲಿ ಒಬ್ಬರನ್ನು ಕೂರಿಸಬೇಕೆಂದು ಶಿವಕುಮಾರ್ ತೀರ್ಮಾನಿಸಿದ್ದಾರೆ.
ಶಿವಕುಮಾರ್ ಅವರ ತೀರ್ಮಾನವನ್ನು ರಾಜಣ್ಣ ಸಂಪೂರ್ಣ ತಳ್ಳಿಹಾಕಿ, ಅವರು ಕರೆದ ಸಭೆಗೂ ಹೋಗದೆ, ಬೆಳ್ಳಿ ಪ್ರಕಾಶ್ ಅವರನ್ನೇ ಮುಂದುವರೆಸೋಣ, ಅವರನ್ನು ಕಾಂಗ್ರೆಸ್ಗೆ ಕರೆ ತರೋಣ, ಬೇಡವೆಂದಾ ದರೆ, ಬೇರೆ ಧುರೀಣರನ್ನು ನೇಮಕ ಮಾಡೋಣ ಎಂದು ಪಟ್ಟು ಹಿಡಿದಿದ್ದಾರೆ. ರಾಜಣ್ಣ ಮಾತಿಗೆ ಮುಖ್ಯಮಂತ್ರಿಗಳ ಬೆಂಬಲವೂ ಇದ್ದಂತಿದೆ, ಆದರೆ, ಶಿವಕುಮಾರ್ ಮಾತ್ರ ತಮ್ಮ ಹೋರಾಟ ಮುಂದುವರೆಸಿರುವು ದಲ್ಲದೆ, ಎಐಸಿಸಿ ಬಾಗಿಲನ್ನೂ ತಟ್ಟಿದ್ದಾರೆ. ಈ ಮಧ್ಯೆ, ಸುದ್ದಿಗಾರರೊಂದಿಗೆ ಮಾತ ನಾಡಿದ ರಾಜಣ್ಣ, ಸಮುದಾಯದ ಸಮಸ್ಯೆ ಗಳ ಕುರಿತು ಚರ್ಚಿಸಲು ಸ್ವಾಮೀಜಿಗಳು ಸಭೆ ಕರೆದಿದ್ದರು, ಅದರಲ್ಲಿ ರಾಜಕೀಯ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ಕರೆದಿದ್ದ ಸಭೆಗೆ ಹೊಡಗಲು ಸಾಧ್ಯವಾಗಲಿಲ್ಲ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕಾತಿಗೆ ಅದರ ಮಂಡಳಿ ಸದಸ್ಯರು ತೀರ್ಮಾನ ಕೈಗೊಳ್ಳ ಬೇಕು, ಅಲ್ಲಿ ಯಾರಿಗೆ ಬಹುಮತವಿದೆಯೋ ಅವರು ಅಧಿಕಾರದ ಚುಕ್ಕಾಣಿ ಹಿಡಿಯು ತ್ತಾರೆ. ಹಾಲಿ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರಿಗೆ ಬೆಂಬಲ ಇಲ್ಲ ಎಂದಾದರೆ, ಮತ್ತೊಬ್ಬರು ಅಧಿಕಾರಕ್ಕೆ ಬರುತ್ತಾರೆ ಎಂದರು.

The post ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; appeared first on Good News 24x7.

]]>