CardiacArrest Archives - Good News 24x7 https://www.goodnews24x7.com/tag/cardiacarrest/ Kannada Mon, 30 Jun 2025 09:06:51 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg CardiacArrest Archives - Good News 24x7 https://www.goodnews24x7.com/tag/cardiacarrest/ 32 32 40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? https://www.goodnews24x7.com/the-number-of-people-who-died-due-to-heart-attacks-in-hassan-in-40-days-has-increased-to-22-what-did-the-doctors-say/ Mon, 30 Jun 2025 09:06:51 +0000 https://www.goodnews24x7.com/?p=4850 ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ.…

The post 40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? appeared first on Good News 24x7.

]]>

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ ಜೆಪಿ. ಲೇಪಾಕ್ಷಿ (50), ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58), ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ದುರದೃಷ್ಟವಶಾತ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.


ನಿಯಂತ್ರಣಕ್ಕೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಾದ ವಿಚಾರವಾಗಿ ಮೈಸೂರಿನಲ್ಲ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಆ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಎರಡು ದಿನ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದ ಆಟೋ ಚಾಲಕ
ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಏತನ್ಮಧ್ಯೆ, ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್ ಮಂಜುನಾಥ್ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.

ಮತ್ತೊಂದೆಡೆ, ಎದೆ ನೋವಿನಿಂದ ಬಳಲಿ ಬರುವವರಿಗೆ ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಈಗಾಗಲೇ ಮನವಿ ಮಾಡಿದ್ದಾರೆ.

ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳೇನು? ಈ ಬಗ್ಗೆ ವೈದ್ಯರು ಹೇಳಿದ್ದೇನು
ಈ ಬಗ್ಗೆ ಅವರನ್ನು ಕೌನ್ಸೆಲಿಂಗ್ಗೂ ಒಳಪಡಿಸಲಾಗಿದೆ. ಈ ವಿದ್ಯಾರ್ಥಿಗಳಲ್ಲಿ ಬೊಜ್ಜು ಹೆಚ್ಚಿರಲು, ದೈಹಿಕ ಚಟುವಟಿಕೆ ಇಲ್ಲದೇ ಇರುವುದು, ಪ್ರತಿನಿತ್ಯ ಶಾಲೆಗೆ ಹೋಗುವುದು ಹಾಗೂ ಮನೆಗೆ ಹೋಗುವುದಷ್ಟನ್ನೇ ಮಾಡುತ್ತಿದ್ದಾರೆ. ಮನೆಯಲ್ಲಾಗಲಿ, ಶಾಲೆಯಲ್ಲಾಗಲಿ ಮಕ್ಕಳು ದೈಹಿಕ ಶ್ರಮದ ಆಟವನ್ನೇ ಆಡುತ್ತಿರಲಿಲ್ಲ. ಪಠ್ಯೇತರ ಚಟುವಟಿಕೆಯಲ್ಲಿಯೂ ಭಾಗಿಯಾಗುತ್ತಿಲ್ಲ ಎಂಬ ಅಂಶಗಳನ್ನು ಪತ್ತೆ ಹಚ್ಚಲಾಗಿದೆ.

The post 40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? appeared first on Good News 24x7.

]]>