Cauveryresidence Archives - Good News 24x7 https://www.goodnews24x7.com/tag/cauveryresidence/ Kannada Thu, 16 Oct 2025 12:45:37 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Cauveryresidence Archives - Good News 24x7 https://www.goodnews24x7.com/tag/cauveryresidence/ 32 32 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ https://www.goodnews24x7.com/45-minute-survey-cm-siddaramaiah-calmly-gave-details/ Thu, 16 Oct 2025 12:45:37 +0000 https://www.goodnews24x7.com/?p=7744 ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ…

The post 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ.

The post 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>