ChamundiHills Archives - Good News 24x7 https://www.goodnews24x7.com/tag/chamundihills/ Kannada Tue, 26 May 2026 12:10:10 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg ChamundiHills Archives - Good News 24x7 https://www.goodnews24x7.com/tag/chamundihills/ 32 32 ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್! https://www.goodnews24x7.com/bollywood-star-ranveer-singh-apologizes-to-his-mother-chamundi/ Tue, 26 May 2026 12:10:10 +0000 https://www.goodnews24x7.com/?p=9540 ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

The post ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್! appeared first on Good News 24x7.

]]>

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿರುವ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ.
ʼಗೋವಾ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ರಣವೀರ್‌ ಸಿಂಗ್‌ ನಟ ರಿಷಬ್‌ ಶೆಟ್ಟಿ ಮುಂದೆಯೇ ಮಾತನಾಡಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು.

The post ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್! appeared first on Good News 24x7.

]]>
ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ. https://www.goodnews24x7.com/installation-of-a-water-tank-to-quench-the-thirst-of-monkeys-in-chamundi-hills/ Sat, 11 Apr 2026 09:12:39 +0000 https://www.goodnews24x7.com/?p=9190 ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್ ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ…

The post ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ. appeared first on Good News 24x7.

]]>

ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್

ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ
ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ ಪ್ರತಿನಿತ್ಯ ನೀರಿನ ತೊಟ್ಟಿಗೆ ನೀರನ್ನು ಹಾಕುವಂತೆ ಮನವಿ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಎಲ್ಲಾ ಜೀವಿಗಳಿಗೂ ಮನುಷ್ಯರಂತೆ ಭಾವನೆಗಳಿವೆ.

ಅವುಗಳ ಕ್ರಿಯೆ ಪ್ರತಿಕ್ರಿಯೆಯನ್ನು ಸೂಕ್ಷ್ಮತೆಯಿಂದ ಹರಿಯುವ ಮನಸ್ಸು ಇಂದಿನ ಪೀಳಿಗೆಗೆ ಅವಶ್ಯಕತೆ, ಪರಿಸರದಲ್ಲಿ ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಮನುಷ್ಯರ ಆಧ್ಯ ಕರ್ತವ್ಯವಾಗಿದೆ ಆದರೆ ಮೊಬೈಲ್ ತರಂಗಗಳಿಂದ ಹಾಗೂ ಪರಿಸರ ಅರಣ್ಯ ನಾಶದಿಂದ ಪಕ್ಷಿಗಳೇ ಮಾಯವಾಗಿರುವುದು
ದುರಂತದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್,ನಜರ್ಬಾದ್ ನಟರಾಜ್,
ಕಡಕೋಳ ಗ್ರಾಮ ಪಂಚಾಯಿತಿ ಆರೋಗ್ಯ ಅಧಿಕಾರಿ ಮಂಜುನಾಥ್,ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ,
ಲೋಕೇಶ್ ,ನಿತೇಶ್,ಕಡಕೋಳ ಶಿವು,ಎಸ್‌ ಎನ್ ರಾಜೇಶ್ ಹರೀಶ್ ನಾಯ್ಡು ಹಾಗೂ ಇನ್ನಿತರರು ಹಾಜರಿದ್ದರು

The post ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ. appeared first on Good News 24x7.

]]>
ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ https://www.goodnews24x7.com/government-green-signal-for-construction-of-sl-bhyrappa-memorial/ Thu, 25 Sep 2025 09:32:35 +0000 https://www.goodnews24x7.com/?p=7631 ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ…

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>

ಖ್ಯಾತ ಕಾದಂಬರಿಕಾರ, ಬುಧವಾರ ನಿಧನರಾದ ಎಸ್​​ಎಲ್​ ಭೈರಪ್ಪ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಘೋಷಣೆ ಮಾಡಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿದರು.

ಬೆಂಗಳೂರು: ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್​ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭೈರಪ್ಪ ಅವರ ಪತ್ನಿ ಹಾಗೂ ಮಕ್ಕಳ ಜತೆ ಕುಳಿತುಕೊಂಡು ಮಾತನಾಡಿ ಅವರಿಗೆ ಸಾಂತ್ವನ ಹೇಳಿದರು.

ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

The post ಎಸ್​ಎಲ್ ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ appeared first on Good News 24x7.

]]>
ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್! https://www.goodnews24x7.com/finally-the-results-of-dasanas-puja-did-not-bear-fruit-darshans-temple-run-did-not-even-work-out/ Thu, 14 Aug 2025 09:37:19 +0000 https://www.goodnews24x7.com/?p=6122 ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ…

The post ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್! appeared first on Good News 24x7.

]]>

ಕನ್ನಡದ ಖ್ಯಾತ ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದರು. ನಂತರ ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ಮಧ್ಯಂತರ ಜಾಮೀನು ಸಹ ಪಡೆದು ಹೊರಬಂದಿದ್ರು. ದರ್ಶನ್ ಹೊರಬಂದವರೇ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಟೆಂಪಲ್ ರನ್ ಸಹ ಮಾಡಿದ್ರು

ಚಾಮುಂಡಿ ಬೆಟ್ಟ, ಕೇರಳದ ಕೊಟ್ಟಿಯೂರು ಅಷ್ಟೇ ಅಲ್ಲದೆ ನಿನ್ನೆ ಸಹ ಬನ್ನಾರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ . ಆದರೆ ಎಷ್ಟೇ ದೇವಸ್ಥಾನ ಸುತ್ತಿದ್ರು ಸಹ ಫಲಿಸಲಿಲ್ಲ ದರ್ಶನ್ ಪೂಜಾ ಫಲ, ಕೊನೆಗೂ ಜಾಮೀನು ಅರ್ಜಿ ರದ್ದು ಮಾಡೇ ಬಿಡ್ತು ಸುಪ್ರೀಂ ಕೋರ್ಟ್ .

ಹೌದು ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಬಂದ ನಂತರ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಶತ್ರು ಸಂಹಾರ ಯಾಗ ಸಹ ಮಾಡ್ಸಿದ್ರು , ಆದ್ರೆ ಯಾವುದೇ ಶತ್ರು ಸಂಹಾರ ಯಾಗವಾಗಲಿ ವಿಶೇಷ ಪೂಜೆಯಾಗಲಿ ದರ್ಶನ್ ಕೈ ಹಿಡಿದಿಲ್ಲ. ಕೊಲೆ ಪ್ರಕರಣದಿಂದ ಪಾರಾಗಲು ದರ್ಶನ್ ಮಾಡಿದಂತಹ ಟೆಂಪಲ್ ರನ್ ವರ್ಕ್ ಔಟ್ ಆಗ್ಲೇ ಇಲ್ಲ.
ಯಾವುದೇ ಮುಲಾಜಿಲ್ಲದೆ ದರ್ಶನ್ ಅವರ ಜಾಮೀನು ಅರ್ಜಿಯನ್ನು ರದ್ದು ಮಾಡಿದೆ ಸುಪ್ರೀಂ ಕೋರ್ಟ್ . ಈ ಹಿನ್ನಲೆ ಮತ್ತೆ ಜೈಲು ಪಾಲಾಗಿದ್ದಾರೆ ದಾಸ. ದರ್ಶನ್ ಅವರ ದೈವಭಕ್ತಿ ಫಲ ನೀಡದೆ ಕಾನೂನು ಎಂಬ ದೇವರ ಮುಂದೆ ಕೊನೆಗೂ ತಲೆಬಾಗಲೇಬೇಕಿದೆ ಡಿ ಬಾಸ್…

The post ಕೊನೆಗೂ ಫಲಿಸಲಿಲ್ಲ ದಾಸನ ಪೂಜಾ ಫಲ! ವರ್ಕೌಟ್ ಆಗಲೇ ಇಲ್ಲ ದರ್ಶನ್ ಮಾಡಿದ ಟೆಂಪಲ್ ರನ್! appeared first on Good News 24x7.

]]>
ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. https://www.goodnews24x7.com/a-sea-of-devotees-visit-chamundeshwari-on-the-2nd-friday-of-the-month-of-ashada-dcm-actor-darshan-visit-with-family/ Fri, 04 Jul 2025 09:15:05 +0000 https://www.goodnews24x7.com/?p=4896 ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

The post ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. appeared first on Good News 24x7.

]]>

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.


ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ   


ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.

ನಟ ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ


ನಟ ದರ್ಶನ್ ಆಷಾಡಮಾಸದ ಎರಡನೇ ಶುಕ್ರವಾರದಂದು ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆಗೂಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಮಾಡಿದ್ದಾರೆ. ಇಂದು ಚಾಮುಂಡೇಶ್ವರಿ ತಾಯಿಗೆ ಲಕ್ಷ್ಮೀ ಅಲಂಕಾರ, ಹೂವು, ಬಳೆ, ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಆಗಮಿಸಿದ ವೇಳೆ ಸಾಕಷ್ಟು ಮಂದಿ ಅಭಿಮಾನಿಗಳು ಅವರನ್ನು ಕಾಣಲು ಬಂದ ಕಾರಣ, ದೇವಾಲಯದಲ್ಲಿ ನೂಕು-ನುಗ್ಗಲು ಉಂಟಾಯ್ತು.

The post ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ. appeared first on Good News 24x7.

]]>
ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್. https://www.goodnews24x7.com/mp-yaduveer-personally-inspected-the-ashada-system-of-chamundi-hills/ Thu, 03 Jul 2025 09:04:58 +0000 https://www.goodnews24x7.com/?p=4869 ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ…

The post ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್. appeared first on Good News 24x7.

]]>

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಆಷಾಢ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನಲೆಯನ್ನ ಸಂಸದ ಯದುವೀರ್ ಭೇಟಿ ನೀಡಿದ್ದು, 2000 ಟಿಕೆಟ್, 300 ರೂ ಟಿಕೆಟ್, ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ಉಪಸ್ಥಿತರಿದ್ದು ಅವ್ಯವಸ್ಥೆ ಸರಿಪಡಿಸುವಂತೆ ಸೂಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಬೆಟ್ಟದಲ್ಲಿ ಭಕ್ತಾಧಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ಇಂದು ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನು ವೀಕ್ಷಣೆ ಮಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೋಡಿದ್ದೇನೆ. ದರ್ಶನ ಸಂದರ್ಭದಲ್ಲಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ, ಧರ್ಮ ದರ್ಶನ, ಟಿಕೆಟ್ ಪಡೆದು ಹೋಗುವವರು ಎಲ್ಲರಿಗೂ ಒಂದು ಕಡೆ ಬಂದು ಸೇರಿ ಸಾಕಷ್ಟು ಗೊಂದಲ ಉಂಟಾಗುತ್ತಿದೆ ಮತ್ತು ಪ್ರಸಾದ ವಿತರಣೆಯಲ್ಲೂ ಸರಿಯಾಗಿ ವಿತರಣೆ ಮಾಡಿತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಸ್ವಯಂ ನಿವೃತ್ತಿಗೆ ಪೊಲೀಸ್ ಅಧಿಕಾರಿ: ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ

ಸಿಎಂ ಸಿದ್ದರಾಮಯ್ಯ ಪೋಲಿಸ್ ಅಧಿಕಾರಿಗೆ ಗದರಿದ್ದ ವಿಚಾರ, ಸಿಎಂ ಬಹಿರಂಗವಾಗಿ ಬೈದ ಕಾರಣ ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಮೈಸೂರಿನ ಸಂಸದ ಯದುವೀರ್ ಒಡೆಯರ್, ಅವರು ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು ಅಧಿಕಾರಿಗಳು ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು. ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿ ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನ್ನ ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತೊಲ್ಲದೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದರು.

 

The post ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್. appeared first on Good News 24x7.

]]>
ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. https://www.goodnews24x7.com/devotees-who-climb-the-steps-in-the-darshan-queue-will-be-allowed-to-have-darshan/ Thu, 03 Jul 2025 07:59:49 +0000 https://www.goodnews24x7.com/?p=4860 ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು,…

The post ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. appeared first on Good News 24x7.

]]>

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ.

ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಆಷಾಢ ಮಾಸದಲ್ಲಿ ಚಾಮುಂಡಿ‌ಬೆಟ್ಟಕ್ಕೆ ಮೆಟ್ಟಿಲು ಮೂಲಕ ಹತ್ತಿ ಬರುವ ಭಕ್ತರ ದರ್ಶನಕ್ಕೆ ಸಂಬಂಧಿಸಿದಂತೆ ಮೊದಲ ಆಷಾಡ ಶುಕ್ರವಾರ ಮೆಟ್ಟಿಲುಗಳ ಮೂಲಕ ನಿರೀಕ್ಷೆಗೂ ಮೀರಿ ಹೆಚ್ಚು ಜನರ ಬಂದ ಕಾರಣ ಜನಸಂದಣಿಯಿಂದಾಗಿ ದೇವರ ದರ್ಶನ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ತಡವಾಗಿತ್ತು. ಆದರೆ ಧರ್ಮದರ್ಶನ ಅಥವಾ ಟಿಕೆಟ್ ಪಡೆದು ದರ್ಶನ ಪಡೆದವರು ತ್ವರಿತಗತಿಯಲ್ಲಿ ದೇವಿಯ ದರ್ಶನ ಪಡೆದು ವಾಪಸ್ಸಾದರು.

ಈ ಹಿನ್ನೆಲೆಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಆಗಬಹುದಾದ ಅನಾನೂಕೂಲವನ್ನು ತಪ್ಪಿಸಲು ಜಿಲ್ಲಾಡಳಿತ ಚಾಮುಂಡಿ ಬೆಟ್ಟದಲ್ಲಿ ಸಾಕಷ್ಟು ಸುಧಾರಿತ ಕ್ರಮಗಳನ್ನು ತೆಗೆದುಕೊಂಡಿದೆ. ಮುಂದಿನ ಎರಡನೇ ಆಷಾಢ ಹಾಗೂ ಉಳಿದ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೆಟ್ಟಿಲು ಹತ್ತಿ ಬಂದ ಭಕ್ತರು ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಬಹುದಾಗಿದೆ.

ಭಕ್ತರಿಗೆ ನಾಡದೇವಿಯ ಸುಗಮ ದರ್ಶನಕ್ಕಾಗಿ ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾಧಿಗಳು ಉಚಿತ ಬಸ್ ಸೇವೆ ಪಡೆದು ಕಡಿಮೆ ಸಮಯದಲ್ಲಿ ಸುಗಮವಾಗಿ ದೇವರ ದರ್ಶನ ಪಡೆದುಕೊಳ್ಳಬಹುದಾಗಿದೆ. ಆದುದರಿಂದ ಭಕ್ತಾಧಿಗಳು ಉಚಿತ ಬಸ್ ಸೇವೆಯ ಸದುಪಯೋಗವನ್ನು ಮಾಡಿಕೊಂಡು ದೇವರ ದರ್ಶನ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

The post ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. appeared first on Good News 24x7.

]]>
ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ! https://www.goodnews24x7.com/a-sea-of-devotees-flocked-to-chamundi-hills-on-the-occasion-of-ashada-friday/ Fri, 27 Jun 2025 06:28:18 +0000 https://www.goodnews24x7.com/?p=4705 ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,…

The post ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ! appeared first on Good News 24x7.

]]>

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ.

ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ, ದೀಪಾಲಂಕಾರ ಭಕ್ತರನ್ನ ಸ್ವಾಗತಿಸುತ್ತಿದ್ದು, ನಾಡ ಅಧಿದೇವಿ ಚಾಮುಂಡೇಶ್ವರಿ ತಾಯಿಗೆ ಮುಂಜಾನೆ ತಾಯಿಗೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿ ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಭಕ್ತರಿಗೆ ದರ್ಶನ ನೀಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


ಪ್ರತಿ ವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ನಾಡದೇವಿಯ ದರ್ಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ 300ರೂ , 2 ಸಾವಿರ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೆಟ್ ಪಡೆದವರಿಗೆ ಲಲಿತ ಮಹಲ್ ನಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್ ,ಒಂದು ಬ್ಯಾಗ್ ವಿತರಿಸಲಾಗುತ್ತಿದೆ.


ಚಾಮುಂಡೇಶ್ವರಿ ದೇವಸ್ಥಾನದಲ್ಲಿ2025ನೇ ಸಾಲಿನಲ್ಲಿ ನಡೆಯುವ ನಾಲ್ಕು ಆಷಾಢ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.
ಜೂ.27ರಂದು ಮೊದಲನೇ ಆಷಾಢ ಶುಕ್ರವಾರ, ಜು.4ರಂದು ಎರಡನೇ ಆಷಾಢ ಶುಕ್ರವಾರ, 11ರಂದು ಮೂರನೇ ಆಷಾಢ ಶುಕ್ರವಾರ ಹಾಗೂ 17ರಂದು ಅಮ್ಮನವರ ಜನ್ಮೋತ್ಸವ ಮತ್ತು ಜು.18ರಂದು ನಾಲ್ಕನೇ ಆಷಾಢ ಶುಕ್ರವಾರಗಳಂದು ದೇವಸ್ಥಾನಕ್ಕೆ ಲಕ್ಷಾಂತರ ಭಧಿಕ್ತರು ಆಗಮಿಸುವುದರಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಭಕ್ತರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿಯಿಂದ 49 ವ್ಯವಸ್ಥೆ
ಆಷಾಢ ಶುಕ್ರವಾರದ ನಿಮಿತ್ತ ಕೆಎಸ್ಆರ್ಟಿಸಿ ನಗರ ಘಟಕವು ಭಕ್ತರ ಅನುಕೂಲಕ್ಕಾಗಿ 49 ಬಸ್ಗಳನ್ನು ಬಿಡಲು ನಿರ್ಧರಿಸಿದೆ.
ಆಷಾಢ ಶುಕ್ರವಾರ ಸೇರಿದಂತೆ ಶನಿವಾರ, ಭಾನುವಾರವೂ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ. ಭಕ್ತರು ಲಲಿಮಹಲ್ ಪ್ಯಾಲೇಸ್ ಹೋಟೆಲ್ ಬಳಿಯಿಂದ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ. ಭಕ್ತರು ತಮ್ಮ ಸ್ವಂತ ವಾಹನಗಳನ್ನು ಇಲ್ಲಿ ನಿಲ್ಲಿಸಿ ಕೆಎಸ್ಆರ್ಟಿಸಿ ಬಸ್ಗಳನ್ನು ಬಳಸಿಕೊಂಡು ಬೆಟ್ಟಕ್ಕೆ ಹೋಗಿ ತಾಯಿ ಚಾಮುಂಡೇಶ್ವರಿ ದರ್ಶನವನ್ನು ಪಡೆಯಬಹುದು.

ಶನಿವಾರ, ಭಾನುವಾರ ಟಿಕೆಟ್ ಕಡ್ಡಾಯ
ಪ್ರತಿ ಆಷಾಢ ಶುಕ್ರವಾರದಂದು ಪುರುಷರು ಹಾಗೂ ಮಹಿಳೆಯರಿಗೆ ಲಲಿತಮಹಲ್ನಿಂದ ಚಾಮುಂಡಿಬೆಟ್ಟದವರೆಗೆ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಒದಗಿಸಲಾಗಿದೆ. ಆದರೆ, ಶನಿವಾರ, ಭಾನುವಾರ ಪುರುಷರು ಬಸ್ ಟಿಕೆಟ್ ಕಡ್ಡಾಯವಾಗಿ ಪಡೆಯಬೇಕು.
ಮಹಿಳೆಯರಿಗೆ ‘ಶಕ್ತಿ’ ಯೋಜನೆಯಡಿ ಉಚಿತ ಪ್ರಯಾಣ ಅನ್ವಯವಾಗಲಿದೆ. 2 ಸಾವಿರ ಟಿಕೆಟ್ ಖರೀದಿಸುವ ಭಕ್ತರಿಗೆ ಬಸ್ ಟಿಕೆಟ್ ಇರುವುದಿಲ್ಲ. ಧರ್ಮದರ್ಶನ ಬಸ್ನಲ್ಲಿಹೋಗುವವರನ್ನು ಬೆಟ್ಟದ ಮೇಲಿರುವ ಮಲ್ಟಿಲೆವೆಲ್ ಪಾರ್ಕಿಂಗ್ನಲ್ಲಿಇಳಿಸಲಾಗುತ್ತದೆ. 300 ರೂ. ಟಿಕೆಟ್ ಖರೀದಿಸಿದವರನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿ ಇಳಿಸಲಾಗುತ್ತದೆ. 2 ಸಾವಿರ ರೂ. ಟಿಕೆಟ್ ಪಡೆದವರನ್ನು ಮಹಿಷಾಸುರ ಪ್ರತಿಮೆ ಬಳಿ ನಿಲುಗಡೆ ಮಾಡಲಾಗುತ್ತದೆ. ಮೂವರು ಇಲ್ಲಿಂದ ತೆರಳಲು ಪ್ರತ್ಯೇಕ ಸರದಿ ಸಾಲು ವ್ಯವಸ್ಥೆ ಮಾಡಲಾಗಿದೆ.

ಸೇವಾ ಶುಲ್ಕ ಏರಿಕೆ ವಿರುದ್ಧ ಪ್ರತಿಭಟನೆ
ಚಾಮುಂಡೇಶ್ವರಿ ದೇವಾಲಯದಲ್ಲಿ ಸೇವಾ ಶುಲ್ಕಗಳ ಏಕಾಏಕಿ ಏರಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಜತೆಗೆ ಚಾಮುಂಡಿ ಬೆಟ್ಟದಲ್ಲಿಸ್ಥಳೀಯ ನಿವಾಸಿಗಳಿಗೆ ಕುಡಿಯುವ ನೀರು, ಆಷಾಢದಲ್ಲಿಆಗಮಿಸುವ ಭಕ್ತಾದಿಗಳಿಗೆ ಸಮರ್ಪಕ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಲಾಯಿತು.

‘‘ನಾಡದೇವತೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಸರಿಯಾಗಿ ಕುಡಿಯುವ ನೀರೇ ಇಲ್ಲ. ಐದಾರು ದಿನಗಳಿಗೊಮ್ಮೆ ಚಾಮುಂಡಿ ಬೆಟ್ಟಕ್ಕೆ ನೀರನ್ನು ಬಿಡಲಾಗುತ್ತಿದೆ. ದಿನಾಲೂ ಕುಡಿವ ನೀರಿಲ್ಲದೆ, ಅಲ್ಲಿನ ಸ್ಥಳೀಯ ನಿವಾಸಿಗಳು ಪರದಾಡುತ್ತಿದ್ದಾರೆ. ಬಹಳ ವರ್ಷಗಳ ಹಿಂದೆಯೇ ಕುಡಿಯುವ ನೀರಿಗಾಗಿ ಬೆಟ್ಟಕ್ಕೆ ಹೊಸ ಪೈಪ್ ಲೈನ್ ಅನ್ನು ಹಾಕಲು ಕಾಮಗಾರಿ ಶುರು ಮಾಡಲಾಗಿತ್ತು. ಆದರೆ, ಇನ್ನೂ ಪೂರ್ಣವಾಗಿ ಕೆಲಸ ಮುಗಿದಿಲ್ಲದ ಪರಿಣಾಮ ಬೆಟ್ಟದಲ್ಲಿನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಉತ್ತ ಆದಾಯ ಗಳಿಸುವ ಬೆಟ್ಟದಲ್ಲಿ ಬೆಟ್ಟಕ್ಕೆ ಸಮರ್ಪಕವಾಗಿ ಪ್ರತಿ ನಿತ್ಯ ನೀರು ಒದಗಿಸಬೇಕು,’’ ಎಂದು ಒತ್ತಾಯಿಸಿದರು.

‘‘ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಸರಿಯಾದ ಮೂಲ ಸೌಕರ್ಯಗಳೇ ಇಲ್ಲ. ಕುಡಿಯಲು ಶುಚಿಯಾದ ಉಚಿತ ನೀರಿನ ವ್ಯವಸ್ಥೆಯಾಗಲಿ, ಸುಸಜ್ಜಿತ ಶೌಚಾಲಯಗಳಾಗಲಿ, ಹೊರಗಿನಿಂದ ಬರುವವರಿಗೆ ಮಡಿಯಾಗಿ ದೇವರ ದರ್ಶನ ಮಾಡಲು ಸ್ನಾನದ ಗೃಹಗಳಾಗಲಿ ಇಲ್ಲವೇ ಇಲ್ಲ. ಈಗಿರುವ ಒಂದೇ ಶೌಚಾಲಯದಲ್ಲಿ ವಸೂಲಿ ಮಾಡಲಾಗುತ್ತಿದೆ. ಇದು ಉಚಿತ ಒದಗಿಸಬೇಕು,’’ ಎಂದು ಆಗ್ರಹಿಸಿದರು.

The post ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ! appeared first on Good News 24x7.

]]>
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! https://www.goodnews24x7.com/special-package-for-ashada-friday-at-chamundi-hills-in-mysore-devotees-outrage/ Sun, 15 Jun 2025 09:10:35 +0000 https://www.goodnews24x7.com/?p=4420 ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…

The post ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! appeared first on Good News 24x7.

]]>

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ ವಾಹನಗಳಿಗೆ ನಿರ್ಬಂಧ ಸೇರಿದಂತೆ ಹಲವಾರು ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.


ಜೂನ್ ತಿಂಗಳ ಆಷಾಢ ಶುಕ್ರವಾರದ ಹಿನ್ನೆಲೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯುವ ಭಕ್ತರಿಗೆ ಈ ಬಾರಿ ಮೊದಲ ಬಾರಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.
ಜೂನ್ 27ರಂದು ಆಷಾಢ ಶುಕ್ರವಾರ ಆರಂಭವಾಗಲಿದ್ದು, ಜುಲೈ 4, 11 ಮತ್ತು 18 ಆಷಾಢ ಶುಕ್ರವಾರವಾಗಿದೆ. ದೇವಿಗೆ ವಿಶೇಷ ಪೂಜೆ ಜೊತೆಗೆ ಜುಲೈ 17ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯೋತ್ಸವ ನಡೆಯಲಿದೆ.
ಆಷಾಢ ವಿಶೇಷ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸಕಲ ಸಿದ್ಧತೆ ಕೈಗೊಂಡಿದೆ. ಯಾವುದೇ ಗೊಂದಲ, ಅಡಚಣೆಯಾಗದಂತೆ ಶಾಂತಿಯುತವಾಗಿ ದೇವಿಯ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಹಾಗೂ ನೂಕುನುಗ್ಗಲು ತಡೆಗಟ್ಟಲು 2000 ರೂ. ವೆಚ್ಚದ ವಿಶೇಷ ದರ್ಶನದ ಟಿಕೆಟ್ ನೀಡಲು ಮುಂದಾಗಿದೆ.
ಈ ಬಾರಿ ವಿಶೇಷ ದಶರ್ನಕ್ಕೆ 2 ಸಾವಿರ ರೂ ನಿಗದಿ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. “ಇದು ಹಗಲು ದರೋಡೆ” ಎನ್ನುತ್ತಾರೆ
“ತಮಿಳುನಾಡಿನ ದೇವಾಲಯಗಳಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸುವ ದೃಷ್ಟಿಯಿಂದ ಯಾವುದೇ ತಾರತಮ್ಯವಿಲ್ಲದೆ ದೇವಾಲಯಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಚಾಮುಂಡೇಶ್ವರಿ ದರ್ಶನಕ್ಕೂ ಅವಕಾಶ ಕಲ್ಪಿಸಿ, ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು” ಎಂದು ಭಕ್ತರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಅವರು ಕೂಡ ವಿಶೇಷ ದರ್ಶನಕ್ಕೆ ಹಣ ನಿಗದಿ ಮಾಡಿರುವುದು ಬೇಕಿಲ್ಲ. ದೇವರನ್ನು ದುಡ್ಡು ಕೊಟ್ಟು ನೋಡಬೇಕಾ? ಎರಡು ಸಾವಿರ ದುಬಾರಿಯಾಯಿತು” ಎನ್ನುತ್ತಾರೆ.

ಸಂಸದ ಯದುವೀರ್ ಒಡೆಯರ್,

“ಆಷಾಢ ಮಾಸದಂದು ದೇವಿಯ ವಿಶೇಷ ದರ್ಶನಕ್ಕೆ ಎರಡು ಸಾವಿರ ನಿಗದಿ ಮಾಡಿರುವುದು ಸರಿಯಲ್ಲ. ದೇವರ ದರ್ಶನಕ್ಕೆ ಏಕೆ ಇಷ್ಟು ದುಬಾರಿ ಹಣ ವಸೂಲಿ? ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

 

The post ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! appeared first on Good News 24x7.

]]>