Chief Minister Siddaramaiah Archives - Good News 24x7 https://www.goodnews24x7.com/tag/chief-minister-siddaramaiah/ Kannada Sat, 03 May 2025 10:45:24 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Chief Minister Siddaramaiah Archives - Good News 24x7 https://www.goodnews24x7.com/tag/chief-minister-siddaramaiah/ 32 32 ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. https://www.goodnews24x7.com/minister-zameer-ahmed-khans-statement-union-minister-prahlad-joshis-sarcasm/ Sat, 03 May 2025 10:45:24 +0000 https://www.goodnews24x7.com/?p=3576 ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.…

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>

ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

 

 

 

 

 

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ. ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ ಬೇಡ. ನೀವು ಗಡಿಗೆ ಹೋಗೋದು ಬೇಡ ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>
ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : CM ಸಿದ್ದು https://www.goodnews24x7.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf%e0%b2%b0%e0%b3%81%e0%b2%b5-%e0%b2%aa%e0%b2%be/ Sat, 26 Apr 2025 11:23:43 +0000 https://www.goodnews24x7.com/?p=3423 ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ…

The post ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : CM ಸಿದ್ದು appeared first on Good News 24x7.

]]>

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು.ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ನಾವು ಯುದ್ಧದ ಪರ ಇಲ್ಲ….ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ.ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ….ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

 

The post ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : CM ಸಿದ್ದು appeared first on Good News 24x7.

]]>
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ. https://www.goodnews24x7.com/cabinet-meeting-at-male-mahadeshwara-hill-approval-for-works-worth-rs-3647-crores/ Thu, 24 Apr 2025 11:28:29 +0000 https://www.goodnews24x7.com/?p=3386 ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು ಹೀಗಿದೆ. ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ…

The post ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ. appeared first on Good News 24x7.

]]>

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು ಹೀಗಿದೆ.

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿಯನ್ನು ನೀಡಿದರು.

*ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

*3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

*PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ

*1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

*ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ


ಇವು ಪ್ರಮುಖ ಎಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳು

The post ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ; 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ. appeared first on Good News 24x7.

]]>
ಸಿ.ಎಂ ಗೆ ಮತ್ತೆ ಶುರುವಾಯ್ತು ಮುಡಾ ಸಂಕಷ್ಟ !!! https://www.goodnews24x7.com/%e0%b2%b8%e0%b2%bf-%e0%b2%8e%e0%b2%82-%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%86-%e0%b2%b6%e0%b3%81%e0%b2%b0%e0%b3%81%e0%b2%b5%e0%b2%be%e0%b2%af%e0%b3%8d%e0%b2%a4%e0%b3%81/ Wed, 02 Apr 2025 11:48:31 +0000 https://www.goodnews24x7.com/?p=3005 ರಾಜ್ಯದೆಲ್ಲೆಡೆ ಸಂಚಲನವನ್ನು ಸೃಷ್ಟಿ ಮಾಡಿ ಸುದ್ದಿ ಆಗ್ತಾ ಇರೋದು ಅಂದ್ರೆ ಅದು ಮೂಡ ಹಗರಣ. ಇದೀಗ ಸುದ್ದಿ ಮತ್ತೆ ಎಲ್ಲೆಡೆ ಚರ್ಚೆ ಆಗ್ತಾಯಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ…

The post ಸಿ.ಎಂ ಗೆ ಮತ್ತೆ ಶುರುವಾಯ್ತು ಮುಡಾ ಸಂಕಷ್ಟ !!! appeared first on Good News 24x7.

]]>

ರಾಜ್ಯದೆಲ್ಲೆಡೆ ಸಂಚಲನವನ್ನು ಸೃಷ್ಟಿ ಮಾಡಿ ಸುದ್ದಿ ಆಗ್ತಾ ಇರೋದು ಅಂದ್ರೆ ಅದು ಮೂಡ ಹಗರಣ. ಇದೀಗ ಸುದ್ದಿ ಮತ್ತೆ ಎಲ್ಲೆಡೆ ಚರ್ಚೆ ಆಗ್ತಾಯಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.ತಕರಾರು ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿ ಇದೆ.

 

ನಮ್ಮ ತನಿಖೆಯಲ್ಲಿ ಅವರು ತಪ್ಪುಗಳು ಸಾಭೀತಾಗಿದೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಹೀಗಾಗಿ ಲೋಕಾಯುಕ್ತ ವರದಿಯನ್ನ ತಿರಸ್ಕರಿಸಿ ಎಂದು ಇಡಿ ಒಟ್ಟು 8 ಪುಟಗಳ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನ ಮೈಸೂರು ಲೋಕಾಯುಕ್ತರಿಗೆ ವಹಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕೋರ್ಟ್ಗೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿತ್ತು.

The post ಸಿ.ಎಂ ಗೆ ಮತ್ತೆ ಶುರುವಾಯ್ತು ಮುಡಾ ಸಂಕಷ್ಟ !!! appeared first on Good News 24x7.

]]>
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ https://www.goodnews24x7.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af/ Sat, 08 Mar 2025 06:29:09 +0000 https://www.goodnews24x7.com/?p=2671 ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿ ಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549…

The post ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ appeared first on Good News 24x7.

]]>

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿ ಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549 ಕೋಟಿ ರೂ. ಬೃಹತ್ ಗಾತ್ರದ ಬಜೆಟ್ ಮಂಡಿಸಿದ ಅವರು ಇದರಲ್ಲಿ 19,262 ಕೋಟಿ ರೂ. ರಾಜಸ್ವ ಕೊರತೆಯನ್ನು ಉಲ್ಲೇಖಿಸಿದ್ದಾರೆ. 1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಹಣಕಾಸು ಸಚಿವ ರಾಗಿ ಮೊದಲ ಬಾರಿ ಬಜೆಟ್ ಮಂಡಿ ಸಿದ್ದ ಸಿದ್ದರಾಮಯ್ಯ ಅವರು. ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.
ಎರಡನೇ ಅವಧಿಗೆ ರಾಜ್ಯದ ಮುಖ್ಯ ಮಂತ್ರಿಯಾಗಿ ಇದು ಅವರ ಮೂರನೇ ಬಜೆಟ್ ಮತ್ತು ಸತತ ಎರಡನೇ ಆದಾಯ ಕೊರತೆ ಬಜೆಟ್ ಆಗಿದೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹೀಗಾಗಿ ಇನ್ನೂ ಹೆಚ್ಚಿನ ಸಾಲ ದೊಂದಿಗೆ 4,09,549 ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದ್ದಾರೆ. ಕರ್ನಾಟಕವು ಭಾರತದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಇದು ರಾಷ್ಟ್ರೀಯ ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ಶೇ. 8.4ರಷ್ಟು ಕೊಡುಗೆ ನೀಡುತ್ತದೆ. ಇದು 2024-25ನೇ ಸಾಲಿನಲ್ಲಿ ತನ್ನ ಪ್ರಭಾವಶಾಲಿ ಬೆಳವಣಿಗೆಯ ಪಥವನ್ನು ಮುಂದುವರೆಸಿದೆ ಮತ್ತು ಶೇ. 7.4 ರಷ್ಟು ಜಿಎಸ್ಡಿಪಿ ಬೆಳವಣಿಗೆಯ ದರವನ್ನು ಸಾಧಿಸಲು ಸಜ್ಜಾಗಿದೆ. ಇದು ರಾಷ್ಟ್ರೀಯ ಬೆಳವಣಿಗೆಯ ದರ ಶೇ. 6.4 ಕ್ಕಿಂತ ಹೆಚ್ಚಾಗಿದೆ ಎಂದು ಸಿಎಂ ಒತ್ತಿ ಹೇಳಿದರು. ರಾಜ್ಯ ಸರ್ಕಾರದ ಗ್ಯಾರಂಟಿಗಳು ಅಭಿವೃದ್ಧಿ ಯನ್ನು ತಿಂದು ಹಾಕುತ್ತಿವೆ ಎಂದು ದೂರುತ್ತಿದ್ದ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಶಾಸಕರನ್ನು ಸಮಾಧಾನಪಡಿಸುವ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 3,000 ಕೋಟಿ ರೂ.ಗಳ
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣ ನೀರಾವರಿ, ರಸ್ತೆಗಳು ಮತ್ತು ನಗರ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸುವ ಮೂಲಕ ರಾಜ್ಯಾದ್ಯಂತ ಸಮತೋಲಿತ ಅಭಿವೃದ್ಧಿ ಯನ್ನು ಖಚಿತಪಡಿಸುತ್ತದೆ. ಇನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಘೋಷಿಸಿದ ಸಿಎಂ, ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗಾಗಿ ದೇವನಹಳ್ಳಿಯವರೆಗೆ ಮೆಟ್ರೋ ರೈಲು ಯೋಜನೆಯ ವಿಸ್ತರಣೆ ಸೇರಿದಂತೆ ಬಂಪರ್ ಕೊಡುಗೆ ನೀಡಿದ್ದಾರೆ.

ಈ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಗೆ 26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಹಣ ಮೀಸಲಿಡಲಾಗಿದೆ.
ಹೀಗೆ ಎಲ್ಲ ಇಲಾಖೆಗಳಿಗೂ ಅನುಕೂಲಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ, ನೂತನ ಘೋಷಣೆಗಳೊಂದಿಗೆ ಸರ್ಕಾರ ಸಮಗ್ರ ರಾಜ್ಯದ ಅಭಿವೃದ್ಧಿಯ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೆಚ್ಚಿದ ಸಾಲದ ಹೊರೆ: 2025-26ನೇ ಸಾಲಿನಲ್ಲಿ ಅಂದಾಜು 1,16,000 ಕೋಟಿ ರೂ. ಸಾಲದ ಮೊರೆ ಹೋಗಲು ಸಿಎಂ ಸಿದ್ದರಾಮಯ್ಯ ತೀರ್ಮಾನಿ ಸಿದ್ದಾರೆ. 2024-25 ಸಾಲಿನಲ್ಲಿ 1,05,246 ಕೋ ರೂ. ಸಾಲದ ಮೊರೆ ಹೋಗಲಾಗಿತ್ತು. ಆ ಮೂಲಕ ಈ ಬಾರಿ 10,754 ಕೋಟಿ ರೂ. ಹೆಚ್ಚುವರಿ ಸಾಲದ ಮೊರೆ ಹೋಗಲಾಗಿದೆ. ಈ 1,16,000 ಕೋಟಿ ರೂ. ಸಾಲದ ಪೈಕಿ ಕೇಂದ್ರ ಸರ್ಕಾರದಿಂದ 7,000 ಕೋಟಿ ರೂ., ಬಹಿರಂಗ ಮಾರುಕಟ್ಟೆಯಿಂದ 1,05,000 ಕೋಟಿ ಹಾಗೂ ಎಲ್ಐಸಿ, ಎನ್ಎಸ್ ಎಸ್ಎಫ್, ಸಿಡಿಸಿ ಮತ್ತು ಆರ್ಐಡಿಎಫ್ ಗಳಿಂದ 4,000 ಕೋಟಿ ರೂ.ಸಾಲ ಪಡೆಯಲು ಅಂದಾಜಿ ಸಲಾಗಿದೆ. ಆ ಮೂಲಕ 2025-26ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು 7,64,655 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ.

ಅಂತಾರಾಷ್ಟ್ರೀಯ ಮಾದರಿ ಚಿತ್ರನಗರಿ ಸ್ಥಾಪನೆಗೆ 500 ಕೋಟಿ ರೂ. ಮೀಸಲು
• ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂ.
• ಪ್ರೊ ನಂಜುಂಡಸ್ವಾಮಿ ಸಂಶೋಧನ ಪೀಠ ಸ್ಥಾಪನೆ.
• ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ
• 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ
• ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ
• ಬನ್ನಿಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ
• ರಾಜ್ಯ ಮಟ್ಟದ ವಸ್ತುಸಂಗ್ರಹಾಲಯ
• ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಭೂ ಸ್ವಾಧೀನಕ್ಕಾಗಿ 319 ಕೋಟಿ ರೂ
• ಕ್ರೀಡಾ, ವಿಜ್ಞಾನ ಕೇಂದ್ರ ಸ್ಥಾಪನೆಗೆ 7 ಕೋಟಿ ರೂ.
• ಕುಸ್ತಿ, ವಾಲಿಬಾಲ್, ಖೋ-ಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ. ಮೀಸಲು
• ಪ್ರವಾಸಿಗರಿಗೆ ಪೌಷ್ಟಿಕ ಮೀನು ಖಾದ್ಯ ಒದಗಿಸಲು ಹೈಟೆಕ್ ಮತ್ತ್ವದರ್ಶಿನಿ ಆರಂಭ
• ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರ 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ

• ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪನೆ.

• ಈ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಣಕ್ಕೆ 5 ಕೋಟಿ ರೂ
• ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಐದು ವಸತಿ ಶಾಲೆ ಮೇಲ್ದರ್ಜೆಗೆ
• ವರುಣದಲ್ಲಿ ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ 60 ಕೋಟಿ ರೂ. ಮೀಸಲು
• ಮೈಸೂರು ವಿವಿಯಲ್ಲಿ ತಾಳೆಗರಿ ಹಸ್ತಪ್ರತಿ ಡಿಜಿಟಲೀಕರಣಕ್ಕೆ 1 ಕೋಟಿ ರೂ.
• ಮೈಸೂರಿನ ರಂಗಾಯಣಕ್ಕೆ 2 ಕೋಟಿ ರೂ. ಅನುದಾನ
• ಟಿ. ನರಸೀಪುರ ತಾಲೂಕು ಕ್ರೀಡಾಂಗಣಕ್ಕೆ ಆರು ಕೋಟಿ ರೂ.
• ಮೈಸೂರಿನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ
• ಕಬಿನಿ ನದಿಗೆ ಅಡ್ಡಲಾಗಿ ಹಾಗೂ ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುವುದಾಗಿ ಘೋಷಿಸಿದರು.

The post ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ appeared first on Good News 24x7.

]]>
ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; https://www.goodnews24x7.com/%e0%b2%b8%e0%b2%9a%e0%b2%bf%e0%b2%b5-%e0%b2%b0%e0%b2%be%e0%b2%9c%e0%b2%a3%e0%b3%8d%e0%b2%a3%e0%b2%b0%e0%b2%a8%e0%b3%8d%e0%b2%a8%e0%b3%81-%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6%e0%b2%bf/ Thu, 06 Mar 2025 06:29:46 +0000 https://www.goodnews24x7.com/?p=2623 ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ…

The post ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; appeared first on Good News 24x7.

]]>

ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ

ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ನಡುವೆ ಬಹಿರಂಗ ಗುದ್ದಾಟ ನಡೆದಿದೆ. ಶಿವಕುಮಾರ ಶಿಫಾರಸು ಮಾಡುವ ಯಾವುದೇ ಅಭ್ಯರ್ಥಿಗಳನ್ನು ನನ್ನ ಇಲಾಖೆಯಡಿ ಬರುವ ಸಂಸ್ಥೆಗಳಿಗೆ ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಸ್ಪಷ್ಟವಾಗಿ ತಿಳಿಸಿರುವುದಲ್ಲದೆ, ತಮ್ಮ ಅಭ್ಯರ್ಥಿ ಗಳ ಪಟ್ಟಿಯನ್ನೂ ನೀಡಿದ್ದಾರೆ. ಇದನ್ನರಿತ ಶಿವಕುಮಾರ್, ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ರಾಜಣ್ಣ ವಿರುದ್ಧ ದೂರು ನೀಡಿರುವು ದಲ್ಲದೆ, ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮನವಿ ಮಾಡಿದ್ದಾರೆ. ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳನ್ನು ಗಮನ ದಲ್ಲಿಟ್ಟುಕೊಂಡು ಸಹಕಾರಿ ಇಲಾಖೆಯಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿ ಆಗಬೇಕಿದೆ, ಈ ವಿಷಯದಲ್ಲಿ ಅವರು ನಮ್ಮನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಆದರೆ, ಖರ್ಗೆ ಅವರು, ರಾಜಣ್ಣ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ, ಈ ವಿಷಯದ ಬಗ್ಗೆ ಚರ್ಚೆ ಮಾಡಿ, ಮುಂದೆ ನೋಡೋಣ ಎಂದು ತಿಳಿ ಹೇಳಿದ್ದಾರೆ. ಖರ್ಗೆ ಅವರ ಸಲಹೆಯಂತೆ ಶಿವಕುಮಾರ್ ನಿನ್ನೆ ಮಧ್ಯಾಹ್ನ ರಾಜಣ್ಣ ಅವರಿಗೆ ಮಾಹಿತಿ ನೀಡಿ, ವಿಧಾನಸೌಧದಲ್ಲಿನ ಅವರ ಕಚೇರಿಗೆ ತೆರಳಿ, ಪಕ್ಷದ ಸಹಕಾರಿ ದಿಗ್ಗಜರ ಜೊತೆ ಸಭೆ ಮಾಡಿದರು. ಆದರೆ, ಈ ಸಭೆಗೆ ರಾಜಣ್ಣ ಬರಲೇ ಇಲ್ಲ, ನಂತರ ಶಿವಕುಮಾರ್ ಅವರೇ ಉಳಿದವರೊಂದಿಗೆ ಚರ್ಚೆ ನಡೆಸಿ ತೆರಳಿದ್ದಾರೆ. ತಮ್ಮನ್ನೇ ಸಂಪುಟದಿಂದ ಕೈಬಿಡುವಂತೆ ವರಿಷ್ಠರಿಗೆ ದೂರು ನೀಡಿರುವ ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ರಾಜಣ್ಣ, ಲೋಕೋಪ ಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ವಾಲ್ಮೀಕಿ ಸಮುದಾಯದ, ಪಕ್ಷಕ್ಕೆ ಸೇರಿದ 17 ಶಾಸಕರ ಸಭೆ ನಡೆಸಿದ್ದಾರೆ.
ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡಬಾರದೆಂದು ಮುಖ್ಯಮಂತ್ರಿ ಅವರನ್ನು ಸಭೆ ಒತ್ತಾಯಿಸಿರುವುದಲ್ಲದೆ, ಲೋಕೋಪ ಯೋಗಿ ಮತ್ತು ಸಹಕಾರಿ ಇಲಾಖೆಯಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಬಾರದೆಂಬ ಮನವಿ ಮಾಡಲು ತೀರ್ಮಾನ ಕೈಗೊಂಡಿದೆ.


ಶಿವಕುಮಾರ್ ತಮ್ಮ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೂ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಸಂಬಂಧಿ ವಿಧಾನಪರಿಷತ್ ಸದಸ್ಯ ನೇಮನ ಮಾಡಲು ತಡಸ ಹೊಂದಿದ್ದಾನ,ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಪೆಕ್ಸ್ ಬ್ಯಾಂಕ್ನ ಹಾಲಿ ಅಧ್ಯಕ್ಷರು, ಅವ ರನ್ನು ಕೆಳಗಿಳಿಸಿ ರವಿ ಅವರನ್ನು ತರಬೇಕು. ಅದು ಸಾಧ್ಯವಾಗದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಧುರೀಣ ರಾಜೇಂದ್ರ ಕುಮಾರ್, ಇಲ್ಲವೇ ಶಿವಮೊಗ್ಗದ ಮತ್ತೊಬ್ಬ ಸಹಕಾರಿ ಧುರೀಣ ಮಂಜುನಾಥ್ ಗೌಡ ಅವರಲ್ಲಿ ಒಬ್ಬರನ್ನು ಕೂರಿಸಬೇಕೆಂದು ಶಿವಕುಮಾರ್ ತೀರ್ಮಾನಿಸಿದ್ದಾರೆ.
ಶಿವಕುಮಾರ್ ಅವರ ತೀರ್ಮಾನವನ್ನು ರಾಜಣ್ಣ ಸಂಪೂರ್ಣ ತಳ್ಳಿಹಾಕಿ, ಅವರು ಕರೆದ ಸಭೆಗೂ ಹೋಗದೆ, ಬೆಳ್ಳಿ ಪ್ರಕಾಶ್ ಅವರನ್ನೇ ಮುಂದುವರೆಸೋಣ, ಅವರನ್ನು ಕಾಂಗ್ರೆಸ್ಗೆ ಕರೆ ತರೋಣ, ಬೇಡವೆಂದಾ ದರೆ, ಬೇರೆ ಧುರೀಣರನ್ನು ನೇಮಕ ಮಾಡೋಣ ಎಂದು ಪಟ್ಟು ಹಿಡಿದಿದ್ದಾರೆ. ರಾಜಣ್ಣ ಮಾತಿಗೆ ಮುಖ್ಯಮಂತ್ರಿಗಳ ಬೆಂಬಲವೂ ಇದ್ದಂತಿದೆ, ಆದರೆ, ಶಿವಕುಮಾರ್ ಮಾತ್ರ ತಮ್ಮ ಹೋರಾಟ ಮುಂದುವರೆಸಿರುವು ದಲ್ಲದೆ, ಎಐಸಿಸಿ ಬಾಗಿಲನ್ನೂ ತಟ್ಟಿದ್ದಾರೆ. ಈ ಮಧ್ಯೆ, ಸುದ್ದಿಗಾರರೊಂದಿಗೆ ಮಾತ ನಾಡಿದ ರಾಜಣ್ಣ, ಸಮುದಾಯದ ಸಮಸ್ಯೆ ಗಳ ಕುರಿತು ಚರ್ಚಿಸಲು ಸ್ವಾಮೀಜಿಗಳು ಸಭೆ ಕರೆದಿದ್ದರು, ಅದರಲ್ಲಿ ರಾಜಕೀಯ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನ ಕರೆದಿದ್ದ ಸಭೆಗೆ ಹೊಡಗಲು ಸಾಧ್ಯವಾಗಲಿಲ್ಲ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕಾತಿಗೆ ಅದರ ಮಂಡಳಿ ಸದಸ್ಯರು ತೀರ್ಮಾನ ಕೈಗೊಳ್ಳ ಬೇಕು, ಅಲ್ಲಿ ಯಾರಿಗೆ ಬಹುಮತವಿದೆಯೋ ಅವರು ಅಧಿಕಾರದ ಚುಕ್ಕಾಣಿ ಹಿಡಿಯು ತ್ತಾರೆ. ಹಾಲಿ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರಿಗೆ ಬೆಂಬಲ ಇಲ್ಲ ಎಂದಾದರೆ, ಮತ್ತೊಬ್ಬರು ಅಧಿಕಾರಕ್ಕೆ ಬರುತ್ತಾರೆ ಎಂದರು.

The post ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ; appeared first on Good News 24x7.

]]>
ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ. https://www.goodnews24x7.com/%e0%b2%b9%e0%b3%88-%e0%b2%b5%e0%b3%8b%e0%b2%b2%e0%b3%87%e0%b2%9c%e0%b3%8d-%e0%b2%95%e0%b2%a6%e0%b2%a8%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%9c%e0%b2%af%e0%b2%a6-%e0%b2%a8%e0%b2%97/ Mon, 24 Feb 2025 07:13:11 +0000 https://www.goodnews24x7.com/?p=2394 ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ…

The post ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ. appeared first on Good News 24x7.

]]>

ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ದ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು, ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ

ಶಹಬ್ಬಾಶ್ ಹುಡುಗ್ರಾ! ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯ ಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂ ಚಕ ಅನುಭವ ನೀಡಿತು. ಜೈಹೋ ಟೀಂ ಇಂಡಿಯಾ ಎಂದು ಟೀಟಿಸಿದ್ದಾರೆ.

The post ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ. appeared first on Good News 24x7.

]]>
ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! https://www.goodnews24x7.com/%e0%b2%b0%e0%b2%be%e0%b2%af%e0%b2%9a%e0%b3%82%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b2%e0%b2%af-%e0%b2%87%e0%b2%a8/ Wed, 05 Feb 2025 10:46:58 +0000 https://www.goodnews24x7.com/?p=2257 ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ…

The post ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! appeared first on Good News 24x7.

]]>

ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ.
ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು.
ಇದೀಗ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ರಾಯಚೂರು ವಿಶ್ವವಿದ್ಯಾಲಯಗೆ “ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ” ಮರುನಾಮಕಾರಣ ಮಾಡಲು ತೀರ್ಮಾನಿಸಲಾಗಿತ್ತು.
ಈ ಮರುನಾಮಕಾರಣಕ್ಕೆ ಮುಖ್ಯ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಯ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ಅವರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣಗೊಳಿಸಲಾಗಿದ್ದು, ಇದಕ್ಕೆ ಮುಖ್ಯ ಕಾರಣಕರ್ತರಾದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಾಹೇಬರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

The post ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ! appeared first on Good News 24x7.

]]>
ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. https://www.goodnews24x7.com/%e0%b2%b6%e0%b2%95%e0%b3%8d%e0%b2%a4%e0%b2%bf-%e0%b2%a6%e0%b3%87%e0%b2%b5%e0%b2%a4%e0%b3%86-%e0%b2%ae%e0%b3%81%e0%b2%82%e0%b2%a6%e0%b3%86-%e0%b2%aa%e0%b3%8d%e0%b2%b0%e0%b2%be%e0%b2%a3%e0%b2%bf-2/ Fri, 31 Jan 2025 10:10:35 +0000 https://www.goodnews24x7.com/?p=2023 ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ…

The post ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. appeared first on Good News 24x7.

]]>

ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಎಫ್ಐಆರ್ ದಾಖಲಾಗಿದೆ.

ಸ್ನೇಹಮಹಿ ಕೃಷ್ಣ, ಗಂಗರಾಜು ಬಲ ತುಂಬಲು ಬಲಿ: ಪೊಲೀಸ್ ಆಯುಕ್ತ
ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗಮರ್ ವಾಲ್ ಮಾತನಾಡಿ, ಒಂದು ವಾರದ ಹಿಂದೆ ಪ್ರಸಾದ್ ಅತ್ತಾವರ ಬಂಧನ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಮೊಬೈಲ್ ಪರಿಶೀಲನೆ ಮಾಡಿದ್ದೇವೆ. ಮೊಬೈಲ್ನಲ್ಲಿದ್ದ ವಿಡಿಯೋದಲ್ಲಿ ದೇವಸ್ಥಾನದಲ್ಲಿ ಐದು ಕುರಿಗಳನ್ನು ಬಲಿ ಬಲಿಕೊಡವ ದೃಶ್ಯ ಇತ್ತು. ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಬಲ ತುಂಬಲು ಬಲಿ ಕೊಟ್ಟಿದ್ದಾರೆ ಎಂದು ಹೇಳಿದರು.
ಅನಂತ್ ಭಟ್ ಯಾರು ಅಂತ ತನಿಖೆ ಮಾಡುತ್ತಿದ್ದೇವೆ. ಬಲಿ ಎಲ್ಲಿ ಕೊಟ್ಟಿದ್ದಾರೆ ಎಂಬುವುದಕ್ಕೆ ಸ್ಪಷ್ಟತೆ ಇಲ್ಲ. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಅವರಿಗಾಗಿ ಬಲಿ ಕೊಡಲಾಗಿದೆ ಎಂದು ತಿಳಿದುಬಂದಿದೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪ್ರಾಣಿ ಬಲಿ ನಿಷೇಧ ಇದೆ. ಹಣದ ಬ್ಯಾಗ್ನ ಫೋಟೋ ಕೂಡ ಇತ್ತು ಎಂದು ತಿಳಿಸಿದರು.

ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಬಂಧನ ಏಕೆ?
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ಗೆ ರಾಮ ಸೇನಾ ಕಾರ್ಯಕರ್ತರು ನಿನ್ನೆ ಏಕಾಏಕಿ ನುಗ್ಗಿ ದಾಳಿ ಮಾಡಿದ್ದರು. ಪಾರ್ಲರ್ನಲ್ಲಿ ಅನೈತಿಕ ಚಟುವಟಿಕೆಯ ಆರೋಪಿಸಿ ದಾಳಿ ಮಾಡಿದ್ದರು. ಪಾರ್ಲರ್ನ ಪೀಠೋಪಕರಣ, ಕನ್ನಡಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪುಡಿ ಗೈದು ದಾಂಧಲೆ ಎಸಗಿದ್ದರು.
ಈ ವೇಳೆ ಯಾವುದೇ ಗ್ರಾಹಕರು ಇಲ್ಲವಾಗಿದ್ದು, ಸೆಲೂನ್ನಲ್ಲಿದ್ದ ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ದಾಳಿಯ ವಿಡಿಯೋಗಳು ಲಭ್ಯವಾಗಿದ್ದು, 9 ರಿಂದ 10 ಕಾರ್ಯಕರ್ತರು ದಾಳಿ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಘಟನೆ ಬೆನ್ನಲ್ಲೇ ಮಾಲೀಕರು ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಆಗಮಿಸಿ ಮಾಹಿತಿ ಪಡೆದಿದ್ದು, ಮಹಿಳಾ ಸಿಬ್ಬಂದಿ ಹೇಳಿಕೆ ದಾಖಲಿಸಿಕೊಂಡಿದ್ದರು. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಪೊಲೀಸರು ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಬಂಧಿಸಿದ್ದಾರೆ. ಸದ್ಯ ಪ್ರಸಾದ್ ಅತ್ತಾವರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಾಣಿಬಲಿಗೆ ಪ್ರಸಾದ್ ಅತ್ತಾವರನನಿಂದ ಹಣ ವರ್ಗಾವಣೆ ಆರೋಪ
ಈ ಸಂಬಂಧ ತನಿಖೆಗೆ ಇಳಿದ ಪೊಲೀಸರಿಗೆ ಇನ್ನೂ ಹಲವು ವಿಚಾರಗಳು ತಿಳಿದಿವೆ. ಪ್ರಾಣಿಬಲಿ ಪೂಜೆ ಮಾಡಲು ಪ್ರಸಾದ್ ಅತ್ತಾವರ, ಅನಂತ್ ಭಟ್ ಎಂಬುವರಿಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಮಾಹಿತಿ ತಿಳಿದಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಸಾದ್ ಅತ್ತಾವರ್, ಅನಂತ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇವರು ಅರ್ಜಿ ವಾಪಸ್ ಪಡೆಯುವಂತೆ ನನಗೆ ಏಕೆ ಒತ್ತಡ ಹಾಕುತ್ತಿದ್ದರು: ಸ್ನೇಹಮಯಿ
ರಕ್ತಾಭಿಷೇಕ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಈ ಹಿಂದೆ ಇವರು ಪಾರ್ವತಿ ಅವರ ಪರವಾಗಿ ಮಾತನಾಡಿದ್ದರು. ನನ್ನ ಶಕ್ತಿ ತುಂಬುವ ಕೆಲಸ ಮಾಡಿದ್ದರೆ ಅರ್ಜಿ ವಾಪಸ್ ಪಡೆಯುವಂತೆ ನನಗೆ ಏಕೆ ಒತ್ತಡ ಹಾಕುತ್ತಿದ್ದರು. ಯಾರು ಏನೇ ಮಾಡಿದರೂ ನಮ್ಮ ನಿರ್ಣಯ ಬದಲಾಗುವುದಿಲ್ಲ ಎಂದು ಹೇಳಿದರು.

The post ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ. appeared first on Good News 24x7.

]]>
ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ. https://www.goodnews24x7.com/%e0%b2%ae%e0%b3%88%e0%b2%95%e0%b3%8d%e0%b2%b0%e0%b3%8b-%e0%b2%ab%e0%b3%88%e0%b2%a8%e0%b2%be%e0%b2%a8%e0%b3%8d%e0%b2%b8%e0%b3%8d-%e0%b2%95%e0%b2%82%e0%b2%aa%e0%b2%a8%e0%b2%bf%e0%b2%97%e0%b2%b3%e0%b2%bf/ Fri, 31 Jan 2025 06:40:55 +0000 https://www.goodnews24x7.com/?p=1992 ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…

The post ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ. appeared first on Good News 24x7.

]]>

ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ್, ಸುಗ್ರೀವಾಜ್ಞೆಯಲ್ಲಿ ಸಾಲಗಾರರ ಹಿತ ಕಾಪಾಡುವ ಅಂಶಗಳನ್ನು ಅಳವಡಿಸಲಾಗಿದೆ.
ಆದರೆ, ಇದರಲ್ಲಿ ಸಣ್ಣ-ಪುಟ್ಟ ಲೋಪ ದೋಷಗಳಿವೆ ಎಂದು ಕಾನೂನು ಮತ್ತು ಆರ್ಥಿಕ ಇಲಾಖೆ ಸಲಹೆ ಹಿನ್ನೆಲೆಯಲ್ಲಿ ಸಂಪುಟ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿ, ಇರುವ ಸಣ್ಣ-ಪುಟ್ಟ ಲೋಪದೋಷಗಳನ್ನು ಬಗೆಹರಿಸಿ ಜಾರಿಗೆ ತರುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಿದೆ. ಅವರು, ಹಣಕಾಸು, ಕಾನೂನು, ಕಂದಾಯ, ಗೃಹ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕಾಯ್ದೆಗೆ ಒಂದು ರೂಪ ನೀಡಲಿದ್ದಾರೆ ಎಂದರು.
ಜಲ ಭದ್ರತೆಗೆ 5000 ಕೋಟಿ ಬೃಹತ್ ಯೋಜನೆ: ಸತತ ಬರಗಾಲಕ್ಕೆ ತುತ್ತಾಗುವ ಕರ್ನಾಟಕವನ್ನು ಪಾರು ಮಾಡಲು ಜಲ ಭದ್ರತೆಗಾಗಿ 5,000 ಕೋಟಿ ರೂ.ಗಳ ಬೃಹತ್ ಯೋಜನೆಗೆ ಸಂಪುಟ ಹಸಿರು ನಿಶಾನೆ ತೋರಿದೆ. ವಿಶ್ವಬ್ಯಾಂಕ್ ನಿಂದ 3,500 ಕೋಟಿ ರೂ. ಸಾಲ ಪಡೆದು ಅದಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರ 1,500 ಕೋಟಿ ರೂ. ಒದಗಿಸಿ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ತಡೆದು ಅಣೆಕಟ್ಟೆ, ಚೆಕ್‌ಡ್ಯಾಂ ನಿರ್ಮಾಣ ಮತ್ತು ಕೆರೆ ತುಂಬಿಸುವುದು ಇದರ ಉದ್ದೇಶವಾಗಿದೆ.

ಬೆಂಗಳೂರು ಅರಮನೆ ಮೈದಾನ ಜಾಗ ಬಳಕೆ ಮತ್ತು ನಿಯಂತ್ರಣಕ್ಕೆ ಕಳೆದ ಸಂಪುಟ ಸಭೆಯಲ್ಲಿ ಹೊರಡಿಸಿದ ಸುಗ್ರೀವಾಜ್ಞೆ ಅನುಷ್ಠಾನಕ್ಕೆ ಸಂಪುಟ ಸಮ್ಮತಿಸಿದೆ. ರಾಜಧಾನಿ ಹೊರವಲಯದ ಹೆಸರ ಘಟ್ಟದ 5,678 ಎಕರೆ ಪ್ರದೇಶವನ್ನು ವನ್ಯ ಜೀವಿ ಸಂರಕ್ಷಣಾ ನಿಯಮದಡಿ ಮೀಸಲು ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಕಟ್ಟಡಗಳನ್ನು 304 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮತಿ ನೀಡ ಲಾಗಿದೆ. ಸರ್ಕಾರದಿಂದ ನೇರವಾಗಿ ಮತ್ತು ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಿದೆ.

The post ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ. appeared first on Good News 24x7.

]]>