compensation Archives - Good News 24x7 https://www.goodnews24x7.com/tag/compensation/ Kannada Tue, 23 Jun 2026 07:32:51 +0000 en-US hourly 1 https://wordpress.org/?v=7.0.3 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg compensation Archives - Good News 24x7 https://www.goodnews24x7.com/tag/compensation/ 32 32 ‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ https://www.goodnews24x7.com/dad-save-me-somehow-students-life-ends-with-last-call/ Tue, 23 Jun 2026 07:32:51 +0000 https://www.goodnews24x7.com/?p=9636 ಲಕ್ನೋದಲ್ಲಿನ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…

The post ‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ appeared first on Good News 24x7.

]]>

ಲಕ್ನೋದಲ್ಲಿನ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ಮೃ*ತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಇದೇ ವೇಳೆ ಅಗ್ನಿ ದುರಂತದಲ್ಲಿ ಮೃ*ತಪಟ್ಟ ವಿದ್ಯಾರ್ಥಿಗಳ ಕರುಣಾಜನಕ ಕಥೆಗಳು ಬೆಳಕಿಗೆ ಬರುತ್ತಿವೆ.

23 ವರ್ಷದ ವಿದ್ಯಾರ್ಥಿ ಸುಖಮಣಿ ಸಿಂಗ್, ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿದ್ದ ವೇಳೆ ತನ್ನ ತಂದೆ ಪ್ರಭಜೋತ್ ಸಿಂಗ್ ಅವರಿಗೆ ಕರೆ ಮಾಡಿ, “ಅಪ್ಪಾ, ಹೇಗಾದರೂ ಮಾಡಿ ನನ್ನನ್ನು ಕಾಪಾಡಿ. ಸುತ್ತಲೂ ಬೆಂಕಿಯೇ ಕಾಣುತ್ತಿದೆ. ಹೊರಗೆ ಬರಲು ದಾರಿಯೇ ಇಲ್ಲ” ಎಂದು ಅಳುತ್ತಾ ಸಹಾಯ ಕೋರಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಂದೆ ಮಗನಿಗೆ ಧೈರ್ಯ ತುಂಬಲು ಪ್ರಯತ್ನಿಸುತ್ತಿದ್ದಂತೆಯೇ ಸಂಪರ್ಕ ಕಡಿತಗೊಂಡಿದೆ

The post ‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ appeared first on Good News 24x7.

]]>
ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! https://www.goodnews24x7.com/fire-breaks-out-in-medical-college-hospital-10-patients-killed8899-2/ Mon, 16 Mar 2026 11:35:13 +0000 https://www.goodnews24x7.com/?p=8899   ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್…

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>

 

ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>
2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ. https://www.goodnews24x7.com/indian-student-killed-in-2023-after-being-hit-by-police-officers-car-family-to-get-rs-262-crore-compensation/ Thu, 12 Feb 2026 11:45:53 +0000 https://www.goodnews24x7.com/?p=8361 ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…

The post 2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ. appeared first on Good News 24x7.

]]>

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

The post 2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ. appeared first on Good News 24x7.

]]>
ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ … https://www.goodnews24x7.com/rcb-announces-rs-25-lakh-compensation-to-families-of-those-killed-in-stampede/ Sat, 30 Aug 2025 08:35:37 +0000 https://www.goodnews24x7.com/?p=7017 ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB…

The post ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ … appeared first on Good News 24x7.

]]>

ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB ತಂಡ, 2025ರ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿತ್ತು. ಜೂನ್ 3ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಿಂದ ಮಣಿಸುವ ಮೂಲಕ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿತ್ತು.

ಹೀಗಾಗಿ, ವಿಶ್ವದಾದ್ಯಂತ RCB ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮರುದಿನ (ಜೂನ್ 4ರಂದು) ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ನಿರೀಕ್ಷೆಗೂ ಮೀರಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ತಕ್ಷಣವೇ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದ RCB, ಇದೀಗ ಮೃತರ ಕುಟುಂಬಗಳಿಗೆ ಅದೇ RCB CARES ಮೂಲಕ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ RCB, “ಜೂನ್ 4, 2025- ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನಷ್ಟೇ ಅಲ್ಲ…ನಮ್ಮ ಕುಟುಂಬ ಸದಸ್ಯರನ್ನು. ಅವರು ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಅವರ (ಮೃತ ಅಭಿಮಾನಿಗಳು) ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿ ಭರವಸೆ” ಎಂದು ಹೇಳಿದೆ.

ಆರ್‌ಸಿಬಿ ಅಧಿಕೃತ ಪ್ರಕಟಣೆಯಲ್ಲಿ ಏನಿದೆ ?

ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ.

The post ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ … appeared first on Good News 24x7.

]]>