Congress president Archives - Good News 24x7 https://www.goodnews24x7.com/tag/congress-president/ Kannada Sun, 02 Feb 2025 08:55:00 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Congress president Archives - Good News 24x7 https://www.goodnews24x7.com/tag/congress-president/ 32 32 ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು! https://www.goodnews24x7.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf%e0%b2%97%e0%b3%86-%e0%b2%aa%e0%b3%82%e0%b2%b5%e0%b2%b0%e0%b3%8d-%e0%b2%b2%e0%b3%87%e0%b2%a1%e0%b2%bf/ Sun, 02 Feb 2025 08:55:00 +0000 https://www.goodnews24x7.com/?p=2114 ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು…

The post ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು! appeared first on Good News 24x7.

]]>

ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು ನೀಡಿದ್ದಾರೆ. ನ್ಯಾಯಾಲಯ ಅದನ್ನು ಅಂಗೀಕರಿಸಿದ್ದು, ಫೆಬ್ರವರಿ 10 ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ. ಅರ್ಜಿದಾರರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ ಮತ್ತು ಅವರ ವಿರುದ್ಧವೂ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದಾರೆ ಎಂದು ಅರ್ಜಿದಾರ ಸುಧೀರ್ ಹೇಳಿದ್ದಾರೆ. ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಪತಿ ಭಾಷಣದ ನಂತರ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ. ರಾಷ್ಟ್ರಪತಿ ಮಹಿಳೆಯಾಗಿದ್ದಾರೆ ಮತ್ತು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿರುದ್ಧ ಈ ಹೇಳಿಕೆ ಆಕ್ಷೇಪಾರ್ಹ ಎಂದು ಓಜಾ ಪ್ರತಿಪಾದಿಸಿದ್ದಾರೆ.
ಸೋನಿಯಾ ಗಾಂಧಿ ಹೇಳಿದ್ದೇನು?

ದ್ರೌಪದಿ ಮುರ್ಮು ಅವರ ಭಾಷಣದ ನಂತರ ಪತ್ರಕರ್ತರ ಬಳಿ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, ರಾಷ್ಟ್ರಪತಿಗಳ ಭಾಷಣ ಬೋರಿಂಗ್ ಆಗಿತ್ತು. ಭಾಷಣದ ಕೊನೆಯಲ್ಲಿ ‘ಪೂವರ್ ಲೇಡಿ’ ದಣಿದಿದ್ದರು ಎಂದಿದ್ದರು. ಸೋನಿಯಾ ಗಾಂಧಿ ಈ ಹೇಳಿಕೆ ನೀಡುವ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಹಾಜರಿದ್ದರು. ಸೋನಿಯಾ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ದುರದೃಷ್ಟಕರ ಮತ್ತು ಅವಮಾನಕರ ಹೇಳಿಕೆ ಎಂದು ರಾಷ್ಟ್ರಪತಿ ಭವನ ಕೂಡ ಹೇಳಿದೆ.

ಕಾಂಗ್ರೆಸ್ ರಾಜಮನೆತನದ ದುರಹಂಕಾರ: ಮೋದಿ

ಸೋನಿಯಾ ಗಾಂಧಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಇಂದು ದೇಶವು ಮತ್ತೆ ಕಾಂಗ್ರೆಸ್ ರಾಜಮನೆತನದ ದುರಹಂಕಾರವನ್ನು ನೋಡಿದೆ ಎಂದು ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಭಾರತದ ಸಾಧನೆಗಳು ಮತ್ತು ದೂರದೃಷ್ಟಿಯ ಬಗ್ಗೆ ದೇಶವಾಸಿಗಳಿಗೆ ತಿಳಿಸಿದರು. ಹಿಂದಿ ಅವರ ಮಾತೃಭಾಷೆಯಲ್ಲ, ಆದರೂ ಅವರು ಅತ್ಯುತ್ತಮ ಭಾಷಣ ಮಾಡಿದರು. ಆದರೆ ಕಾಂಗ್ರೆಸ್ನ ರಾಜಮನೆತನದವರು ಅವರನ್ನು ಅವಮಾನಿಸಿದರು ಎಂದು ಮೋದಿ ಹೇಳಿದ್ದಾರೆ. ಕಾಂಗ್ರೆಸ್ನವರು ರಾಷ್ಟ್ರಪತಿಗಳನ್ನು ಪೂವರ್ ಲೇಡಿ ಎಂದು ಕರೆದಿದ್ದಾರೆ. ದಣಿದವರು ಎಂದು ಜರೆದಿದ್ದಾರೆ. ಇದು ದೇಶದ ಆದಿವಾಸಿ ಸಹೋದರ ಸಹೋದರಿಯರಿಗೆ ಮಾಡಿದ ಅವಮಾನ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

The post ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು! appeared first on Good News 24x7.

]]>