#Congress Archives - Good News 24x7 https://www.goodnews24x7.com/tag/congress/ Kannada Fri, 29 May 2026 10:30:54 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Congress Archives - Good News 24x7 https://www.goodnews24x7.com/tag/congress/ 32 32 ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ https://www.goodnews24x7.com/karnataka-new-cm-election-important-clp-meeting-in-vidhana-soudha-today%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%a8%e0%b3%82%e0%b2%a4%e0%b2%a8-%e0%b2%b8%e0%b2%bf%e0%b2%8e/ Fri, 29 May 2026 10:30:54 +0000 https://www.goodnews24x7.com/?p=9569 ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

The post ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ appeared first on Good News 24x7.

]]>

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30, ಶನಿವಾರ) ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334ರ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಕರೆಯಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ನಿರ್ಗಮಿತ ಸಿಎಂ ಸಿದ್ದರಾಮಯ್ಯ ವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್‌ ಸಭಾ ನಾಯಕ ಎನ್.ಎಸ್.ಭೋಸರಾಜು ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡಿ, ತದನಂತರ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗುತ್ತದೆ. ಎಲ್ಲಾ ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಸೂಚಿಸಿದ್ದಾರೆ.

ಪ್ರಮಾಣವಚನ ಎಂದು?

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಇಂದು ಸಿಎಲ್‌ಪಿ ಸಭೆಯಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೋಮವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ.

The post ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ appeared first on Good News 24x7.

]]>
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ https://www.goodnews24x7.com/political-revolution-in-west-bengal-from-housemaid-to-mla-kalita-majhis-achievement%e0%b2%aa%e0%b2%b6%e0%b3%8d%e0%b2%9a%e0%b2%bf%e0%b2%ae-%e0%b2%ac%e0%b2%82%e0%b2%97%e0%b2%be%e0%b2%b3%e0%b2%a6/ Tue, 05 May 2026 10:04:00 +0000 https://www.goodnews24x7.com/?p=9491 ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…

The post ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ appeared first on Good News 24x7.

]]>

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ. ಈ ಬೃಹತ್ ಗೆಲುವಿನ ನಡುವೆ ಎಲ್ಲರ ಗಮನ ಸೆಳೆದಿರುವುದು ಆಸ್ಗ್ರಾಮ್ ಕ್ಷೇತ್ರದ ನೂತನ ಶಾಸಕಿ ಕಲಿತಾ ಮಾಝಿ. ಕೇವಲ ₹2,500 ಮಾಸಿಕ ವೇತನಕ್ಕೆ ನಾಲ್ಕು ಮನೆಗಳಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಇವರು, ಇಂದು ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

ಕಳೆದ 2021ರ ಚುನಾವಣೆಯಲ್ಲಿ ಅಲ್ಪ ಅಂತರದಿಂದ ಸೋತಿದ್ದರೂ ಎದೆಗುಂದದ ಕಲಿತಾ ಮಾಝಿ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಮಣೆ ಹಾಕಿತ್ತು. ಸಾಮಾನ್ಯ ಕಾರ್ಯಕರ್ತರಿಗೆ ಮನ್ನಣೆ ನೀಡುವ ಪಕ್ಷದ ತಂತ್ರಗಾರಿಕೆಗೆ ಸಾಕ್ಷಿಯಾಗಿ, ಮಾಝಿ ಅವರು ತಮ್ಮ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಭರ್ಜರಿ ಅಂತರದಿಂದ ಮಣ್ಣು ಮುಕ್ಕಿಸಿದ್ದಾರೆ. 1972ರ ನಂತರ ಮೊದಲ ಬಾರಿಗೆ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಬಿಜೆಪಿ ಪಾಳಯದಲ್ಲಿ ಮಾಝಿ ಅವರ ಗೆಲುವು “ಸಾಮಾನ್ಯ ಜನರ ಗೆಲುವು” ಎಂದು ಬಣ್ಣಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು “ಬಂಗಾಳದಲ್ಲಿ ಕಮಲ ಅರಳಿದೆ” ಎಂದು ಹೇಳುವ ಮೂಲಕ ಈ ಬದಲಾವಣೆಯನ್ನು ಸ್ವಾಗತಿಸಿದ್ದು, ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ರಾಜ್ಯದ ರಾಜಕೀಯ ದಿಕ್ಕನ್ನೇ ಬದಲಿಸಿದ ಮಹತ್ವದ ತಿರುವು ಎನ್ನಲಾಗಿದೆ.

The post ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ appeared first on Good News 24x7.

]]>
ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ https://www.goodnews24x7.com/dk-shivakumar-to-be-cm-mla-ranganath-says-he-will-get-birthday-gift-by-may-15/ Mon, 27 Apr 2026 10:28:03 +0000 https://www.goodnews24x7.com/?p=9415 ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ…

The post ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ appeared first on Good News 24x7.

]]>

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ ಸೂಕ್ತ ಪ್ರತಿಫಲ ಸಿಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಮೇ 15ರಂದು ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವಿದ್ದು, ಅಷ್ಟರೊಳಗೆ ಅವರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವದಂತಿಗಳಿಗೆ ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ಅಧಿಕಾರ ಹಂಚಿಕೆ ಒಪ್ಪಂದದ ಗೊಂದಲ:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಇಂತಹದೊಂದು ಒಪ್ಪಂದದ ಬಗ್ಗೆ ಎಲ್ಲರಲ್ಲೂ ಕುತೂಹಲವಿದೆ ಎಂದು ತಿಳಿಸಿದರು. ಒಪ್ಪಂದದ ಸ್ವರೂಪ ಮತ್ತು ಸಮಯದ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುವ ಮೂಲಕ ಸದ್ಯ ಚಾಲ್ತಿಯಲ್ಲಿರುವ ಗೊಂದಲಗಳಿಗೆ ತೆರೆ ಎಳೆಯಬೇಕು. ಇದು ಕೇವಲ ನನ್ನೊಬ್ಬನ ಅಭಿಪ್ರಾಯವಲ್ಲ, ಪಕ್ಷದ ಎಲ್ಲರೂ ಇದನ್ನು ಬಯಸುತ್ತಿದ್ದಾರೆ ಎಂದು ಅವರು ಹೈಕಮಾಂಡ್ ಗಮನ ಸೆಳೆದಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ:
ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿದೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಿ ಫಲಿತಾಂಶವನ್ನು ದೇವರಿಗೆ ಬಿಡಬೇಕು. ಅದೇ ರೀತಿ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಸಕ ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

The post ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ appeared first on Good News 24x7.

]]>
ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ https://www.goodnews24x7.com/congress-muslim-leaders-sharp-attack-dissatisfaction-with-zameer-ahmed-khan9366-2/ Tue, 21 Apr 2026 13:00:53 +0000 https://www.goodnews24x7.com/?p=9366 ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖಾಂಶಗಳು: ಯಾರೇ ಹೋದರೂ ಪಕ್ಷಕ್ಕೆ…

The post ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ appeared first on Good News 24x7.

]]>

ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಪ್ರಮುಖಾಂಶಗಳು:
ಯಾರೇ ಹೋದರೂ ಪಕ್ಷಕ್ಕೆ ನಷ್ಟವಿಲ್ಲ: ಸಿ.ಎಂ. ಇಬ್ರಾಹಿಂ ಮತ್ತು ಜಾಫರ್ ಷರೀಫ್ ಅಂತಹವರೇ ಪಕ್ಷ ಬಿಟ್ಟು ಹೋದಾಗ ಕಾಂಗ್ರೆಸ್‌ಗೆ ಏನೂ ಆಗಲಿಲ್ಲ. ಈಗ ಯಾರಾದರೂ ಹೋದರೆ ಹೊಸ ನಾಯಕತ್ವ ಬೆಳೆಯುತ್ತದೆ ಹೊರತು ಪಕ್ಷಕ್ಕೆ ನಷ್ಟವಿಲ್ಲ ಎಂದು ಉಬೇದುಲ್ಲಾ ಷರೀಫ್ ತಿರುಗೇಟು ನೀಡಿದ್ದಾರೆ.

ಶಿಸ್ತು ಕ್ರಮಕ್ಕೆ ಆಗ್ರಹ: ಚುನಾವಣಾ ಸಮಯದಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದವರು ಮತ್ತು ಪ್ರಚಾರಕ್ಕೆ ಬಾರದವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾಯಕರು ಒತ್ತಾಯಿಸಿದ್ದಾರೆ.

ಅಬ್ದುಲ್ ಜಬ್ಬಾರ್ ನಡೆಗೆ ವಿರೋಧ: ದಾವಣಗೆರೆಯಲ್ಲಿ ಅಬ್ದುಲ್ ಜಬ್ಬಾರ್ ಅವರು ಮನೆಯಿಂದ ಹೊರಬಂದು ಪ್ರಚಾರ ಮಾಡಲಿಲ್ಲ. ಶಿಸ್ತು ಕ್ರಮ ಕೈಗೊಂಡಿದ್ದನ್ನು ಇಡೀ ಸಮುದಾಯಕ್ಕೆ ಆದ ಅನ್ಯಾಯ ಎಂದು ಬಿಂಬಿಸುವುದು ತಪ್ಪು.

ಟಿಕೆಟ್ ಹಂಚಿಕೆ ವಿವಾದ: ದಾವಣಗೆರೆ ಟಿಕೆಟ್ ವಿಚಾರದಲ್ಲಿ ಸಭೆ ನಡೆದಾಗ ಅಬ್ದುಲ್ ಜಬ್ಬಾರ್ ಹೊರತುಪಡಿಸಿ ಉಳಿದ ಆರು ಮಂದಿ ಆಕಾಂಕ್ಷಿಗಳ ಪರವಾಗಿ ಯಾರೂ ಮಾತನಾಡಲಿಲ್ಲ. ಸರಿಯಾಗಿ ಚರ್ಚೆ ಮಾಡಿದ್ದರೆ ಮುಸ್ಲಿಮರಿಗೆ ಟಿಕೆಟ್ ಸಿಗುತ್ತಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮೀರ್ ವಿರುದ್ಧ ಪರೋಕ್ಷ ವಾಗ್ದಾಳಿ: “ನಾನು ನಾಯಕ” ಎಂಬ ಹಮ್ಮು ಸಚಿವರಿಗೆ ಕಾಂಗ್ರೆಸ್‌ನಿಂದ ಸಿಕ್ಕ ಬಳುವಳಿ. ಪಕ್ಷ ನೀಡಿದ ಅಧಿಕಾರದಿಂದಲೇ ಸಂಪನ್ಮೂಲ ಕ್ರೋಢೀಕರಿಸಿಕೊಂಡು ಮೆರೆಯುತ್ತಿದ್ದಾರೆ. ಇವರ ವಿರುದ್ಧವೂ ಶಿಸ್ತು ಕ್ರಮ ಆಗಬೇಕು ಎಂದು ಹಿರಿಯ ಮುಖಂಡರು ಕಿಡಿಕಾರಿದ್ದಾರೆ.

ಗಂಭೀರ ಆರೋಪ: ಅಲ್ಪಸಂಖ್ಯಾತ ಘಟಕದ ಕೆಲವರು ಎಸ್‌ಡಿಪಿಐ ಅಭ್ಯರ್ಥಿಗೆ ಹಣಕಾಸಿನ ನೆರವು ನೀಡಿದ್ದಾರೆ. ಇಂತಹವರ ಮನೆಗೆ ಸಿಎಂ ಅಥವಾ ಡಿಸಿಎಂ ಭೇಟಿ ನೀಡುವ ಅಗತ್ಯವಿರಲಿಲ್ಲ ಎಂದು ನಾಯಕರು ಪ್ರಶ್ನಿಸಿದ್ದಾರೆ

The post ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ appeared first on Good News 24x7.

]]>
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. https://www.goodnews24x7.com/hindi-exam-high-court-orders-to-give-marks-instead-of-grades-cm-siddaramaiah-announces-compliance/ Tue, 21 Apr 2026 11:32:56 +0000 https://www.goodnews24x7.com/?p=9356 ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>

ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು.

ಸುದ್ದಿಯ ಮುಖ್ಯಾಂಶಗಳು:
ಹಿಂದಿ ಮೌಲ್ಯಮಾಪನ: ತೃತೀಯ ಭಾಷೆ ಹಿಂದಿಗೆ ಈ ವರ್ಷ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಬೇಕು ಎಂಬ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಸರ್ಕಾರ ಜಾರಿಗೆ ತರಲಿದೆ. ಹಳೆಯ ಪದ್ಧತಿಯಂತೆಯೇ ಮೌಲ್ಯಮಾಪನ ನಡೆಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಕೇಂದ್ರದ ವಿರುದ್ಧ ಕಿಡಿ: ಐಟಿ ಮತ್ತು ಇಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿವೆ. ಬಿಜೆಪಿಯವರ ಮೇಲೆ ಯಾವುದೇ ದಾಳಿಗಳು ನಡೆಯುತ್ತಿಲ್ಲ ಎಂದು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲಿನ ಇಡಿ ದಾಳಿಯನ್ನು ಉಲ್ಲೇಖಿಸಿ ಟೀಕಿಸಿದರು.

ಮೂಢನಂಬಿಕೆ ಮತ್ತು ಚಾಮರಾಜನಗರ: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯಲ್ಲಿ ನನಗೆ ನಂಬಿಕೆಯಿಲ್ಲ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂಬುದು ನನ್ನ ಅನುಭವ,” ಎಂದು ಸಿಎಂ ಮಾರ್ಮಿಕವಾಗಿ ನುಡಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ: ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯ ಪರವಾಗಿದೆ, ಆದರೆ ಮೀಸಲಾತಿಯೊಂದಿಗೆ ಕ್ಷೇತ್ರ ಮರು ವಿಂಗಡನೆಯನ್ನು ಸೇರಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕೇಂದ್ರದ ನಡೆಯನ್ನು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳು: ಆರಂಭದಲ್ಲಿ ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವರಿಗೇ ಈಗ ಇದು ಬಡವರ ಕಾರ್ಯಕ್ರಮ ಎಂಬುದು ಅರ್ಥವಾಗಿದೆ. ಅದಕ್ಕಾಗಿಯೇ ಅವರೂ ಈಗ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಇತರ ಪ್ರಮುಖ ಪ್ರತಿಕ್ರಿಯೆಗಳು:
ಸತ್ತವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಜೆಡಿಎಸ್ ಶಾಸಕ ಶರಣಗೌಡ ಅವರ ಪತ್ರಕ್ಕೆ ಉತ್ತರಿಸಿದ ಸಿಎಂ, ಆಮ್ಲಜನಕ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>
ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. https://www.goodnews24x7.com/trump-munir-rapprochement-a-big-setback-for-modi-government-congress-attacks/ Mon, 20 Apr 2026 12:50:14 +0000 https://www.goodnews24x7.com/?p=9350 ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…

The post ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. appeared first on Good News 24x7.

]]>

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಗೆ ಮತ್ತು ಪಾಕಿಸ್ತಾನವನ್ನು ಜಾಗತಿಕವಾಗಿ ಪ್ರತ್ಯೇಕಿಸುವ ಅವರ ಪ್ರಯತ್ನಕ್ಕೆ ಸಂದ ದೊಡ್ಡ ಸೋಲು ಎಂದು ಕಾಂಗ್ರೆಸ್ ಬಣ್ಣಿಸಿದೆ.

ವರದಿಯ ಮುಖ್ಯಾಂಶಗಳು:
ರಾಜತಾಂತ್ರಿಕ ಹಿನ್ನಡೆ: ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ “ನೆಚ್ಚಿನ ವ್ಯಕ್ತಿ”ಯಾಗಿರುವುದು ಭಾರತಕ್ಕೆ ದೊಡ್ಡ ಹಿನ್ನಡೆ. ಭಾರತಕ್ಕಿಂತಲೂ ಉತ್ತಮವಾಗಿ ಪಾಕಿಸ್ತಾನವು ಟ್ರಂಪ್ ಆಡಳಿತದೊಂದಿಗೆ ತನ್ನ ಸಂಬಂಧವನ್ನು ನಿರ್ವಹಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಶಾಂತಿ ಮಾತುಕತೆಯಲ್ಲಿ ಪಾಕ್ ಪಾತ್ರ: ಇಸ್ಲಾಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆಗಳು ನಡೆಯುತ್ತಿವೆ. ಈ ಹಿಂದೆ ಅಕ್ರಮ ಚಟುವಟಿಕೆಗಳಿಗೆ ಹೆಸರಾಗಿದ್ದ ಪಾಕಿಸ್ತಾನ, ಈಗ ಜಾಗತಿಕ ಮಟ್ಟದಲ್ಲಿ ಸಂಧಾನಕಾರನಾಗಿ ಹೊರಹೊಮ್ಮುತ್ತಿರುವುದು ಕಳವಳಕಾರಿ ಎಂದು ಕಾಂಗ್ರೆಸ್ ಹೇಳಿದೆ.

ಆರ್ಥಿಕ ಚೇತರಿಕೆ: ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನವು ಸೌದಿ ಅರೇಬಿಯಾ ಮತ್ತು ಕತಾರ್‌ನಿಂದ ಸುಮಾರು 6 ಬಿಲಿಯನ್ ಡಾಲರ್ ಸಾಲ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದು ಮೋದಿ ಸರ್ಕಾರದ “ಪಾಕಿಸ್ತಾನವನ್ನು ಪ್ರತ್ಯೇಕಿಸುವ” ತಂತ್ರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ರಮೇಶ್ ಟೀಕಿಸಿದ್ದಾರೆ.

ಭಯೋತ್ಪಾದನೆಯ ನೆನಪು: ಪಹಲ್ಗಾಮ್ ಭಯೋತ್ಪಾದಕ ದಾಳಿಯಂತಹ ಕೃತ್ಯಗಳಿಗೆ ಪ್ರಚೋದನೆ ನೀಡಿದ ವ್ಯಕ್ತಿಗಳೇ ಈಗ ರಾಜತಾಂತ್ರಿಕತೆಯಲ್ಲಿ ಮುಂಚೂಣಿಯಲ್ಲಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನಮೋಹನ್ ಸಿಂಗ್ ಕಾಲದ ಉಲ್ಲೇಖ: 2008ರ ಮುಂಬೈ ದಾಳಿಯ ನಂತರ ಡಾ. ಮನಮೋಹನ್ ಸಿಂಗ್ ಅವರು ಪಾಕಿಸ್ತಾನವನ್ನು ಜಾಗತಿಕ ಮಟ್ಟದಲ್ಲಿ ಹೇಗೆ ಪ್ರತ್ಯೇಕಿಸಿದ್ದರು ಎಂಬುದನ್ನು ನೆನಪಿಸಿದ ರಮೇಶ್, ಪ್ರಸ್ತುತ ಸರ್ಕಾರ ಅಂತಹ ಸಾಧನೆ ಮಾಡುವಲ್ಲಿ ಅಸಮರ್ಥವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಒಟ್ಟಾರೆಯಾಗಿ, ಅಮೆರಿಕದ ಬದಲಾದ ವಿದೇಶಾಂಗ ನೀತಿ ಮತ್ತು ಅದರಲ್ಲಿ ಪಾಕಿಸ್ತಾನಕ್ಕೆ ಸಿಗುತ್ತಿರುವ ಪ್ರಾಮುಖ್ಯತೆಯು ಭಾರತದ ಭದ್ರತೆ ಮತ್ತು ಪ್ರಭಾವಕ್ಕೆ ಧಕ್ಕೆ ತರಬಹುದು ಎಂಬುದು ಕಾಂಗ್ರೆಸ್‌ನ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಭಾರತವು ತನ್ನ ವಿದೇಶಾಂಗ ನೀತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಬೇಕು ಎಂದು ವಿರೋಧ ಪಕ್ಷ ಆಗ್ರಹಿಸಿದೆ.

The post ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. appeared first on Good News 24x7.

]]>
ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ. https://www.goodnews24x7.com/pm-modi-is-not-in-favor-of-social-justice-cm-siddaramaiah-attacks/ Mon, 20 Apr 2026 09:43:06 +0000 https://www.goodnews24x7.com/?p=9324 ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಹಾಗೂ ಮಹಿಳಾ ಮೀಸಲಾತಿ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ…

The post ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ. appeared first on Good News 24x7.

]]>

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಹಾಗೂ ಮಹಿಳಾ ಮೀಸಲಾತಿ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಕುರಿತು ಪ್ರಧಾನಿಯವರ ನಡೆಯನ್ನು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಮುಖ್ಯಾಂಶಗಳು:
ಮಹಿಳಾ ಮೀಸಲಾತಿ ಜಾರಿಯಲ್ಲಿ ವಿಳಂಬ: ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದು 12 ವರ್ಷಗಳಾದರೂ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿಲ್ಲ. ಮಹಿಳೆಯರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ 2023ರಲ್ಲೇ ಇದನ್ನು ಜಾರಿಗೊಳಿಸಬಹುದಿತ್ತು ಎಂದು ಕಿಡಿಕಾರಿದರು.

ಕಾಂಗ್ರೆಸ್ ನಿಲುವು ಸ್ಪಷ್ಟ: ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳಾ ಮೀಸಲಾತಿಗೆ ವಿರೋಧವಾಗಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ (ಗ್ರಾಮ ಪಂಚಾಯತ್‌ನಿಂದ ನಗರಸಭೆಯವರೆಗೆ) ಶೇ. 50ರಷ್ಟು ಮೀಸಲಾತಿ ನೀಡಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತಂದ 73 ಮತ್ತು 74ನೇ ಸಂವಿಧಾನ ತಿದ್ದುಪಡಿಗಳೇ ಇದಕ್ಕೆ ಅಡಿಪಾಯ ಎಂದು ನೆನಪಿಸಿದರು.

ಕ್ಷೇತ್ರ ಮರುವಿಂಗಡಣೆಗೆ ವಿರೋಧ: ಮೀಸಲಾತಿ ಹೆಸರಿನಲ್ಲಿ ತರಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆಯನ್ನು (Delimitation) ನಾವು ವಿರೋಧಿಸುತ್ತೇವೆ. ಇದರಿಂದ ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ಭಾರತದ ರಾಜ್ಯಗಳಿಗೆ ಭಾರಿ ಅನ್ಯಾಯವಾಗಲಿದೆ.

ದಕ್ಷಿಣದ ರಾಜ್ಯಗಳಿಗೆ ಹಿನ್ನಡೆ: “ಕ್ಷೇತ್ರ ಮರುವಿಂಗಡಣೆಯಾದರೆ ಉತ್ತರ ಪ್ರದೇಶದ ಸಂಸದರ ಸಂಖ್ಯೆ 120ಕ್ಕೆ ಏರಬಹುದು, ಆದರೆ ಕರ್ನಾಟಕದ್ದು ಕೇವಲ 42ಕ್ಕೆ ಸೀಮಿತವಾಗಬಹುದು. ಇದು ಜನಸಂಖ್ಯೆ ನಿಯಂತ್ರಣ ಮಾಡಿದ ನಮಗೆ ಮಾಡುವ ದ್ರೋಹ” ಎಂದು ಸಿಎಂ ಆತಂಕ ವ್ಯಕ್ತಪಡಿಸಿದರು.

ಪ್ರಧಾನಿಯವರು ಬೆಂಗಳೂರಿಗೆ ಬಂದಿದ್ದಾಗ ಈ ಬಗ್ಗೆ ಅಭಿಪ್ರಾಯ ಕೇಳಿದ್ದರು. ನಾವು ಮೀಸಲಾತಿಗೆ ಬೆಂಬಲವಿದೆ ಎಂದು ಮಾತ್ರ ಹೇಳಿದ್ದೇವೆ ಹೊರತು, ದಕ್ಷಿಣದ ಹಿತಕ್ಕೆ ಧಕ್ಕೆಯಾಗುವ ಕ್ಷೇತ್ರ ಮರುವಿಂಗಡಣೆಯನ್ನಲ್ಲ ಎಂದು ಅವರು ಸ್ಪಷ್ಟಪಡಿಸಿದರು.

The post ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ. appeared first on Good News 24x7.

]]>
ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ. https://www.goodnews24x7.com/bitcoin-scam-ed-raids-17-places-including-mla-n-a-harriss-residence/ Mon, 20 Apr 2026 09:29:07 +0000 https://www.goodnews24x7.com/?p=9320 ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಶಾಕ್ ನೀಡಿದ್ದಾರೆ. ಶಾಸಕರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ…

The post ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ. appeared first on Good News 24x7.

]]>

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಶಾಕ್ ನೀಡಿದ್ದಾರೆ. ಶಾಸಕರ ನಿವಾಸ ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿಯ ಪ್ರಮುಖ ವಿವರಗಳು:
ಸ್ಥಳ: ಅಶೋಕನಗರದಲ್ಲಿರುವ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರ ಮನೆಗಳ ಮೇಲೆ ಬೆಳಿಗ್ಗೆ 6 ಗಂಟೆಗೆ ದಾಳಿ ನಡೆದಿದೆ.

ತಂಡ: ಸುಮಾರು 12 ಮಂದಿ ಇಡಿ ಅಧಿಕಾರಿಗಳ ತಂಡ, ಸಿಆರ್‌ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಕಾರಣ: ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗಿನ ನಂಟು ಮತ್ತು ಹಣಕಾಸಿನ ವಹಿವಾಟಿನ ಶಂಕೆ.

ತನಿಖೆಯ ಹಿನ್ನೆಲೆ:
₹4.5 ಕೋಟಿ ವಹಿವಾಟು: ಆರು ವರ್ಷಗಳ ಹಿಂದೆ ಶ್ರೀಕಿ ಮತ್ತು ಮೊಹಮ್ಮದ್ ನಲಪಾಡ್ ನಡುವೆ ಸುಮಾರು 4.5 ಕೋಟಿ ರೂಪಾಯಿ ಮೌಲ್ಯದ ಹಣಕಾಸು ವ್ಯವಹಾರ ನಡೆದಿರುವ ಬಗ್ಗೆ ಇಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ.

ಹ್ಯಾಕಿಂಗ್ ಮತ್ತು ಅಕ್ರಮ ವರ್ಗಾವಣೆ: ಅಂತರರಾಷ್ಟ್ರೀಯ ವೆಬ್‌ಸೈಟ್ ಹಾಗೂ ಡಿಜಿಟಲ್ ವಾಲೆಟ್‌ಗಳನ್ನು ಹ್ಯಾಕ್ ಮಾಡಿ ಕ್ರಿಪ್ಟೋಕರೆನ್ಸಿ ಕಳವು ಮಾಡಿದ ಆರೋಪ ಶ್ರೀಕಿ ಮೇಲಿದೆ. ಈ ಹಣವನ್ನು ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡಿ ವೈಯಕ್ತಿಕ ಲಾಭಕ್ಕೆ ಬಳಸಲಾಗಿತ್ತು ಎನ್ನಲಾಗಿದೆ.

SIT ವಿಚಾರಣೆ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಜೂನ್‌ನಲ್ಲಿ ಸಿಐಡಿ ವಿಶೇಷ ತನಿಖಾ ದಳ (SIT) ಈಗಾಗಲೇ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು.

ಕಾನೂನು ಕ್ರಮ:
ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA 2002) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಗಳೂರು ಇಡಿ ಘಟಕವು ಈ ದಾಳಿಯನ್ನು ನಡೆಸಿದೆ. ಬಿಟ್‌ಕಾಯಿನ್ ಹಗರಣದ ಆಳ-ಅಗಲವನ್ನು ಜಾಲಾಡುತ್ತಿರುವ ಅಧಿಕಾರಿಗಳು, ಇಂದಿನ ದಾಳಿಯಲ್ಲಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆಯಿದೆ.

The post ಬಿಟ್‌ಕಾಯಿನ್ ಹಗರಣ: ಶಾಸಕ ಎನ್.ಎ. ಹ್ಯಾರಿಸ್ ನಿವಾಸ ಸೇರಿ 17 ಕಡೆ ಇಡಿ ದಾಳಿ. appeared first on Good News 24x7.

]]>
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! https://www.goodnews24x7.com/youth-congress-general-secretary-barbaric-murderyouth-congress-general-secretary-barbaric-murder/ Sat, 11 Apr 2026 04:54:22 +0000 https://www.goodnews24x7.com/?p=9179   ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹ*ತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ…

The post ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! appeared first on Good News 24x7.

]]>

 

ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹ*ತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

The post ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! appeared first on Good News 24x7.

]]>
ಸುನೇತ್ರಾ ಪವಾರ್ ಅವಿರೋಧ ಆಯ್ಕೆ! https://www.goodnews24x7.com/sunetra-pawar-elected-unopposedsunetra-pawar-elected-unopposed/ Thu, 09 Apr 2026 11:58:53 +0000 https://www.goodnews24x7.com/?p=9167   ಬಾರಾಮತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸುನೇತ್ರಾ ಪವಾರ್ ವಿರುದ್ಧದ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದ ಮಾಜಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಇದರಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

The post ಸುನೇತ್ರಾ ಪವಾರ್ ಅವಿರೋಧ ಆಯ್ಕೆ! appeared first on Good News 24x7.

]]>

 

ಬಾರಾಮತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸುನೇತ್ರಾ ಪವಾರ್ ವಿರುದ್ಧದ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದ ಮಾಜಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಇದರಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಬಾರಾಮತಿ ಉಪಚುನಾವಣೆಯಲ್ಲಿ ಅವಿರೋಧವಾಗಿ ಗೆಲ್ಲಲಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಹಿರಿಯ ನಾಯಕರು ಏಪ್ರಿಲ್ 23ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್ ಅವರು ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಬೇಕೆಂದು ಮಾಡಿದ ಮನವಿಗಳನ್ನು ಒಪ್ಪಿಕೊಂಡಿರುವ ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರು ಬಾರಾಮತಿ ವಿಧಾನಸಭಾ ಉಪಚುನಾವಣೆಯಿಂದ ಪಕ್ಷವು ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಹೀಗಾಗಿ, ಸುನೇತ್ರಾ ಪವಾರ್ ಅವರ ಎದುರಾಳಿಯಾಗಿ ಯಾವುದೇ ಸ್ಪರ್ಧಿ ಇಲ್ಲದ ಕಾರಣ ಈ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏಪ್ರಿಲ್ 23ರಂದು ನಡೆಯಲಿರುವ ಬಾರಾಮತಿ ಉಪಚುನಾವಣೆಯಿಂದ ಹಿಂದೆ ಸರಿಯುವಂತೆ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಕಾಂಗ್ರೆಸ್​​ಗೆ ಮನವಿ ಮಾಡಿದ್ದರು. ಇದಾದ ನಂತರ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ.

ಜನವರಿಯಲ್ಲಿ ಬಾರಾಮತಿಯಲ್ಲಿ ನಡೆಯಲಿದ್ದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದರು. ಆಗ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಬಾರಾಮತಿಯ ಶಾಸಕರಾಗಿದ್ದರು. ಅದಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು.ಆದರೆ, ಅವರು ಶಾಸಕಿಯಾಗಿ ಆಯ್ಕೆಯಾಗಬೇಕಾಗಿದ್ದರಿಂದ ಈ ಬಾರಿ ಉಪಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲಾಗಿತ್ತು. ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಪಕ್ಷ ಅಭ್ಯರ್ಥಿಯನ್ನು ಹಿಂಪಡೆಯುವ ಮೂಲಕ ಸುನೇತ್ರಾ ಪವಾರ್ ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಿದೆ.

ಬಾರಾಮತಿ ಸ್ಥಾನವನ್ನು ಪವಾರ್ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಇದನ್ನು 1991ರಿಂದ ಅಜಿತ್ ಪವಾರ್ ಹೊಂದಿದ್ದರು. ಅದಕ್ಕೂ ಮೊದಲು, ಅವರ ಚಿಕ್ಕಪ್ಪ ಶರದ್ ಪವಾರ್ ಬಾರಾಮತಿ ಸ್ಥಾನವನ್ನು ಹೊಂದಿದ್ದರು. ಸುಪ್ರಿಯಾ ಸುಲೆ ಬಾರಾಮತಿಯ ಸಂಸದೆ. ಹೀಗಾಗಿ ಬಾರಾಮತಿ ವಿಧಾನಸಭಾ ಸ್ಥಾನ ಮತ್ತು ಸಂಸದೀಯ ಕ್ಷೇತ್ರ ಎರಡನ್ನೂ ಪವಾರ್ ಕುಟುಂಬವು ಹೊಂದಿದೆ.

ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾದ ಇಂದು ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಲ್ ಪಕ್ಷದ ಅಭ್ಯರ್ಥಿ ಅಮರ್ ಮೋರೆ ಅವರು ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದು ಘೋಷಿಸಿದರು. ಈ ಹಿಂದೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಭಾಗವಾಗಿದ್ದ ಅಜಿತ್ ಪವಾರ್ ಅವರ ಮೇಲಿನ ಗೌರವದಿಂದಾಗಿ ಕಾಂಗ್ರೆಸ್ ಪಕ್ಷವು ತನ್ನ ನಿಲುವನ್ನು ಬದಲಾಯಿಸಿತು ಎಂದು ಅವರು ಹೇಳಿದ್ದಾರೆ.

ಛಗನ್ ಭುಜಬಲ್ ಮತ್ತು ಧನಂಜಯ್ ಮುಂಡೆ ನೇತೃತ್ವದ ಹಿರಿಯ ಎನ್‌ಸಿಪಿ ನಾಯಕರ ನಿಯೋಗವು ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ವೈಯಕ್ತಿಕವಾಗಿ ಸಂಪರ್ಕಿಸಿತ್ತು. ಸುನೇತ್ರಾ ಪವಾರ್ ಕೂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದರು.

 

The post ಸುನೇತ್ರಾ ಪವಾರ್ ಅವಿರೋಧ ಆಯ್ಕೆ! appeared first on Good News 24x7.

]]>