Congressleader Archives - Good News 24x7 https://www.goodnews24x7.com/tag/congressleader/ Kannada Sun, 16 Nov 2025 05:42:58 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Congressleader Archives - Good News 24x7 https://www.goodnews24x7.com/tag/congressleader/ 32 32 ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ ಎಂದ ಡಿಕೆ ಶಿವಕುಮಾರ್ https://www.goodnews24x7.com/i-dont-know-anything-about-the-leadership-change-ask-the-cm-himself-says-dk-shivakumar/ Sun, 16 Nov 2025 05:42:58 +0000 https://www.goodnews24x7.com/?p=8174 ನವದೆಹಲಿ: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ದೆಹಲಿಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ…

The post ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ ಎಂದ ಡಿಕೆ ಶಿವಕುಮಾರ್ appeared first on Good News 24x7.

]]>

ನವದೆಹಲಿ: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ದೆಹಲಿಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, “ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ವಿಚಾರಕ್ಕೆ ಭೇಟಿಯಾಗಿದ್ದರು, ಏನು ಚರ್ಚೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.

ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್‌ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

The post ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ ಎಂದ ಡಿಕೆ ಶಿವಕುಮಾರ್ appeared first on Good News 24x7.

]]>
ಜಾತಿನಿಂದನೆ ಪ್ರಕರಣ – ಕೆಪಿಸಿಸಿ ವಕ್ತಾರರಾಗಿದ್ದ ಜಿ.ವಿ. ಸೀತಾರಾಮು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ! https://www.goodnews24x7.com/caste-abuse-case-kpcc-spokesperson-g-v-seetharam-expelled-from-party-for-six-years/ Sun, 10 Aug 2025 05:52:21 +0000 https://www.goodnews24x7.com/?p=5678 ಮೈಸೂರು : ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರರಾಗಿದ್ದ, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮು ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.           ಜಿ.ವಿ.…

The post ಜಾತಿನಿಂದನೆ ಪ್ರಕರಣ – ಕೆಪಿಸಿಸಿ ವಕ್ತಾರರಾಗಿದ್ದ ಜಿ.ವಿ. ಸೀತಾರಾಮು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ! appeared first on Good News 24x7.

]]>

ಮೈಸೂರು : ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರರಾಗಿದ್ದ, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮು ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

 

 

 

 

 

ಜಿ.ವಿ. ಸೀತಾರಾಮು ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದನ್ನು ಖಂಡಿಸಿ ಸಮಾಜದವರು ಎಚ್.ಡಿ. ಕೋಟೆಯಲ್ಲಿ ಪ್ರತಿಭಟಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಪೊಲೀಸ್ ಠಾಣೆಯಲ್ಲಿ FIR ಕೂಡ ದಾಖಲಾಗಿದೆ. ಹೀಗಾಗಿ, ಶಿಸ್ತುಕ್ರಮ ಜರುಗಿಸುವಂತೆ ಅಲ್ಲಿನ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ಕೋರಿದ್ದರು. ಅದನ್ನು ಆಧರಿಸಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ. ವಿಜಯ್‌ ಕುಮಾ‌ರ್ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರು.

 

 

 

 

 

ಸೀತಾರಾಮ್ ಅವರ ಮಾತು ಒಕ್ಕಲಿಗ ಸಮುದಾಯಕ್ಕೆ ನೋವುಂಟು ಮಾಡಿರುವುದು ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಕೆಪಿಸಿಸಿಗೆ ಶಿಫಾರಸು ಮಾಡಿತ್ತು. ಈ ವಿಚಾರವನ್ನು ಪರಿಶೀಲಿಸಿದ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಸೀತಾರಾಮ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

The post ಜಾತಿನಿಂದನೆ ಪ್ರಕರಣ – ಕೆಪಿಸಿಸಿ ವಕ್ತಾರರಾಗಿದ್ದ ಜಿ.ವಿ. ಸೀತಾರಾಮು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ! appeared first on Good News 24x7.

]]>