Cooperative Archives - Good News 24x7 https://www.goodnews24x7.com/tag/cooperative/ Kannada Wed, 29 Apr 2026 10:25:29 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Cooperative Archives - Good News 24x7 https://www.goodnews24x7.com/tag/cooperative/ 32 32 ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು https://www.goodnews24x7.com/tirupati-laddu-prasad-gets-nandini-ghee-again-bulk-supply-from-bamul%e0%b2%a4%e0%b2%bf%e0%b2%b0%e0%b3%81%e0%b2%aa%e0%b2%a4%e0%b2%bf-%e0%b2%b2%e0%b2%a1%e0%b3%8d%e0%b2%a1%e0%b3%81-%e0%b2%aa%e0%b3%8d/ Wed, 29 Apr 2026 10:25:29 +0000 https://www.goodnews24x7.com/?p=9485 ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್) ಹಾಗೂ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ನಡುವೆ ನಂದಿನಿ ತುಪ್ಪ ಪೂರೈಕೆಗಾಗಿ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಅನ್ವಯ, ಮುಂದಿನ ಆರು ತಿಂಗಳ ಅವಧಿಯಲ್ಲಿ ಒಟ್ಟು 2 ಲಕ್ಷ ಕೆಜಿ ತುಪ್ಪವನ್ನು ಪೂರೈಸಲು…

The post ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು appeared first on Good News 24x7.

]]>

ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್) ಹಾಗೂ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ನಡುವೆ ನಂದಿನಿ ತುಪ್ಪ ಪೂರೈಕೆಗಾಗಿ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಅನ್ವಯ, ಮುಂದಿನ ಆರು ತಿಂಗಳ ಅವಧಿಯಲ್ಲಿ ಒಟ್ಟು 2 ಲಕ್ಷ ಕೆಜಿ ತುಪ್ಪವನ್ನು ಪೂರೈಸಲು ನಿರ್ಧರಿಸಲಾಗಿದ್ದು, ಪ್ರತಿದಿನ ಸುಮಾರು 11.5 ರಿಂದ 12 ಟನ್‌ಗಳಷ್ಟು ನಂದಿನಿ ತುಪ್ಪ ತಿರುಪತಿಗೆ ರವಾನೆಯಾಗಲಿದೆ. ಬೆಂಗಳೂರು ಡೇರಿ ಆವರಣದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದ ಡಿ.ಕೆ. ಸುರೇಶ್ ಅವರು, ಸುಮಾರು 136 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ತುಪ್ಪದ ಕಲಬೆರಕೆ ತಡೆಗಟ್ಟಲು ಸಾಗಾಣಿಕೆಯ ವಾಹನಗಳಿಗೆ ಅತ್ಯಾಧುನಿಕ ‘ಡಿಜಿಟಲ್ ಲಾಕ್’ ವ್ಯವಸ್ಥೆಯನ್ನು ಅಳವಡಿಸಿರುವುದು ಈ ಪೂರೈಕೆಯ ವಿಶೇಷತೆಯಾಗಿದೆ.

ವಿಶ್ವಪ್ರಸಿದ್ಧ ತಿರುಪತಿ ಲಡ್ಡುವಿನ ಸ್ವಾದ ಮತ್ತು ಶುದ್ಧತೆಯನ್ನು ಕಾಯ್ದುಕೊಳ್ಳಲು ನಂದಿನಿ ತುಪ್ಪದ ಗುಣಮಟ್ಟವನ್ನೇ ಟಿಟಿಡಿ ನೆಚ್ಚಿಕೊಂಡಿದ್ದು, ಹೆಚ್ಚಿನ ಬೇಡಿಕೆಯನ್ನು ಸಲ್ಲಿಸಿದೆ. ಪ್ರಸ್ತುತ ಕೆಎಂಎಫ್ ದಿನಕ್ಕೆ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಸಂಗ್ರಹಿಸುತ್ತಿದ್ದು, ಬಮೂಲ್ ಸಹ ತನ್ನ ಸಂಗ್ರಹಣಾ ಸಾಮರ್ಥ್ಯವನ್ನು 17.5 ಲಕ್ಷದಿಂದ 25-30 ಲಕ್ಷ ಲೀಟರ್‌ಗೆ ಹೆಚ್ಚಿಸುವ ಗುರಿ ಹೊಂದಿದೆ. ನಂದಿನಿ ತುಪ್ಪ ಮತ್ತೆ ತಿರುಪತಿ ಲಡ್ಡುವಿನ ಭಾಗವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದ್ದು, ರಾಜ್ಯದ ಲಕ್ಷಾಂತರ ಹಾಲು ಉತ್ಪಾದಕರಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ತುಂಬಿದೆ.

The post ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್‌ನಿಂದ ಬೃಹತ್ ಸರಬರಾಜು appeared first on Good News 24x7.

]]>
ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ. https://www.goodnews24x7.com/sosai%e1%b9%adiga%e1%b8%b7a-mulakave-be%e1%b8%b7e-kharidi-mara%e1%b9%ada-raitara-svavalambanege-hosa-yojane-societiesmlapressagriculturalcropsfarmerscooperativeprofit-be%e1%b8%b7ega/ Tue, 24 Mar 2026 12:50:41 +0000 https://www.goodnews24x7.com/?p=8970 ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ…

The post ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ. appeared first on Good News 24x7.

]]>

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ ರೈತರಿಗೆ ಬೇಕಾದ ರಸಗೊಬ್ಬರ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಪಡಿತರ ವಿತರಣೆಯನ್ನು ಮಾತ್ರ ಮಾಡುತ್ತಿ ದ್ದರು. ಅದರ ಜತೆಗೆ ರೈತರು ಬೆಳೆಯುವ ಭತ್ತ, ರಾಗಿ, ಜೋಳ, ಕಾಳುಗಳನ್ನು ಸಹ ನೇರವಾಗಿ ರೈತರಿಂದ ಖರೀದಿಸಿ ಅಧಿಕ ಲಾಭನೀಡುವುದರೊಂದಿಗೆ ಸೊಸೈಟಿಗಳ ಮೂಲಕವೇ ಸಿದ್ದಪಡಿಸಿದ ಬೆಳೆಗಳನ್ನು ಮಾರಾಟ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ದಲ್ಲಾಳಿಗಳ ಹಾವಳಿ ತಪ್ಪಿಸಿದಂತಾಗುತ್ತದೆ, ಜತೆಗೆ ರೈತರಿಗೂ ಅಧಿಕ

ಲಾಭವಾಗಿ ಸೊಸೈಟಿಗಳು ಲಾಭದಾಯಕ ವಾಗಲಿವೆ. ಇದಕ್ಕಾಗಿ ನಬಾರ್ಡ್ ಅಥವಾ ಡಿಸಿಸಿ ಬ್ಯಾಂಕ್‌ಗಳಿಂದ ಸೊಸೈಟಿಗಳಿಗೆ ಆರ್ಥಿಕ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ,” ಎಂದು ತಿಳಿಸಿದರು. ”ಈ ಸಂಬಂಧ ಈಗಾಗಲೇ ಸೊಸೈಟಿಗಳ ಸಿಇಒ, ಸಿಬ್ಬಂದಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಜತೆಗೆ ಹೊಸ ಸಾಫ್ಟ್‌ವೇರ್ ಅನ್ನು ಡೆವಲಪ್ ಮಾಡಲಾಗಿದೆ. ಮೊದಲ ಹಂತದಲ್ಲಿ ಭತ್ತ.
ರಾಗಿ, ಜೋಳ, ಕಾಳುಗಳು, ಮೆಣಸಿನ ಕಾಯಿಗಳನ್ನು ಖರೀದಿಸಲಾಗುವುದು, ಬಳಿಕ ಕೋಲ್ಡ್ ಸ್ಟೋರೇಜ್‌ಗಳನ್ನು ನಿರ್ಮಿಸಿ ತರಕಾರಿ ಖರೀದಿಸಲು ತೀರ್ಮಾನಿ ಸಲಾಗುತ್ತಿದೆ. ಈ ಕೆಲಸಕ್ಕೆ ಸಹಕಾರ ಸಂಘಗಳ ಸಹಕಾರ ಇಲ್ಲಿ ನೀಡಬೇಕು, ಯಾವುದೇ ರೀತಿಯ ರಾಜಕೀಯ ನಡೆಸುತ್ತಿಲ್ಲ, ಇದು ಕೇವಲ ರೈತರು ಆರ್ಥಿಕ ಸ್ವಾವಲಂಬಿ ನಡೆಸುವುದಕ್ಕಾಗಿ ಮಾತ್ರ ಈ ಕಾಠ್ಯಕ್ರಮ ಆಯೋಜಿಸಲಾಗಿದೆ,”ಎಂದರು.

‘ಈಗಾಗಲೇ ತಾಲೂಕಿನ ಅರಳಕುಪ್ಪೆ, ಕ್ಯಾತನಹಳ್ಳಿ ಸೊಸೈಟಿಗಳಲ್ಲಿ ರೈತರಿಂದ ನೇರವಾಗಿ ಭತ್ತ ಖರೀದಿಸಿ ಮಾರಾಟ ಮಾಡಿ ಲಾಭ ಗಳಿಸುವ ಕೆಲಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ಕ್ಷೇತ್ರದಾದ್ಯಂತ ಮಾಡಲಾಗುತ್ತಿದೆ. ಈ ವಿಚಾರವಾಗಿ ಚರ್ಚಿಸಲು ಏ.1ರಂದು ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದಲ್ಲಿ ಎಲ್ಲಾ ತ ಸಹಕಾರ ಸಂಘಗಳ ಆಡಳಿತ ಮಂಡಳಿಯ ನಿರ್ದೇಶಕ ಸಭೆಯನ್ನು ಕರೆಯಲಾಗಿದೆ,” ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ,ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಎಣ್ಣೆಹೊಳೆ ಕೊಪ್ಪಲು ಮಂಜುನಾಥ್, ಮಾಜಿ ಅಧ್ಯಕ್ಷ ಕೆನ್ನಾಳು ವಿಜಯ್‌ಕುಮಾರ್, ನಾಗರಾಜು, ಪ್ರಕಾಶ್, ಪ್ರಧಾನ ಕಾಠ್ಯದರ್ಶಿ ಡಾಮಡಹಳ್ಳಿ ಅಶೋಕ್, ಕೆ.ಟಿ.ಗೋವಿಂದೇಗೌಡ, ಬಿ.ಟಿ.ಶಿವಣ್ಣ, ಶಂಕರ, ರೂಪಾ, ಕಟ್ಟೇರಿ ಮಹದೇವು, ಮುಖಂಡ ಗೋವಿಂದರಾಜು, ರಾಘು, ಪ್ರಕಾಶ್ ಸೇರಿದಂತೆ ಇತರರು ಇದ್ದರು.

The post ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ. appeared first on Good News 24x7.

]]>
ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ; ಶಾಸಕ ಜಿ ಡಿ ಹರೀಶ್ ಗೌಡ ಹೇಳಿಕೆ! https://www.goodnews24x7.com/cooperative-minister-rajanna-has-no-morals-mla-g-d-harish-gowdas-statement/ Mon, 07 Jul 2025 10:30:56 +0000 https://www.goodnews24x7.com/?p=4957 ಮೈಸೂರು : ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಸ್ವತಃ ಒಪ್ಪಿಕೊಂಡಿರುವ ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ ಎಂದು ಮೈಸೂರಿನಲ್ಲಿ ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಹಾಗು ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡ ಹೇಳಿಕೆಯನ್ನ ನೀಡಿದ್ದಾರೆ. ಎಂಸಿಡಿಸಿಸಿ…

The post ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ; ಶಾಸಕ ಜಿ ಡಿ ಹರೀಶ್ ಗೌಡ ಹೇಳಿಕೆ! appeared first on Good News 24x7.

]]>

ಮೈಸೂರು : ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಸ್ವತಃ ಒಪ್ಪಿಕೊಂಡಿರುವ ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ ಎಂದು ಮೈಸೂರಿನಲ್ಲಿ ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಹಾಗು ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡ ಹೇಳಿಕೆಯನ್ನ ನೀಡಿದ್ದಾರೆ.

ಎಂಸಿಡಿಸಿಸಿ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಅಕ್ರಮ ನಡೆದಿದೆ. ಇದನ್ನ ಸ್ವತಃ ಸಚಿವ ರಾಜಣ್ಣ ಒಪ್ಪಿಕೊಂಡಿದ್ದಾರೆ. ಎಲ್ಲೆಲ್ಲಿ ಮತ ಸೇರಿಸಿದ್ದಾರೆ ಆ ಕ್ಷೇತ್ರಗಳಿಗೆ ಮರು ಚುನಾವಣೆ ಮಾಡಿ ಎಂದು ನ್ಯಾಯಾಲಯದಲ್ಲಿ ಕೇಳುತ್ತೇವೆ. ಸಹಕಾರ ಸಚಿವ ರಾಜಣ್ಣಗೆ ಯಾವ ನೈತಿಕತೆಯೂ ಉಳಿದಿಲ್ಲ. ನಾನು ಅವರ ರಾಜೀನಾಮೆ ಕೇಳುವುದಿಲ್ಲ, ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ಕಿಡಿಕಾರಿದರು.

ರಾಜಣ್ಣ ಹೇಳಿಕೆಯನ್ನು ಕೋರ್ಟ್‌ಗೆ ಸಲ್ಲಿಸುತ್ತೇವೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ಅಕ್ರಮ ನಡೆಸಿದೆ. ಸಹಕಾರ ಕ್ಷೇತ್ರವನ್ನೇ ಹಾಳು ಮಾಡಲು ರಾಜಣ್ಣ ಹೆಜ್ಜೆ ಇಟ್ಟಿದ್ದಾರೆ ಚುನಾವಣಾ ಅಕ್ರಮವನ್ನು ಹೇಗೆ ಮಾಡಬಹದು ಎಂಬುದನ್ನು ರಾಜಣ್ಣ ಹೇಳಿ ಕೊಟ್ಟಿದ್ದಾರೆ. ಈ ಬಗ್ಗೆ ನಾನು ಸದನದಲ್ಲೂ ಚರ್ಚೆ ಮಾಡುತ್ತೇನೆ, ಮತಗಳನ್ನು ಸರ್ಕಾರ ಸೇರಿಸದಿದ್ದರೆ ಇಬ್ಬರು ಶಾಸಕರು ಹಾಗೂ ಮಾಜಿ ಶಾಸಕ ಸೋತು ಹೋಗುತ್ತಿದ್ದರು. ಅವರೆಲ್ಲಾ ಗೆದ್ದಿರುವುದು ಒಂದೊಂದು ಮತಗಳಿಂದ. ಇದು ಅಕ್ರಮವಾಗಿ ಬಂದಿರುವ ಮತಗಳು ಎಂದು ಕಿಡಿಕಾರಿದರು.

ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಠಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು :


ಹೆಚ್.ಡಿ. ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ, ಉದ್ದೇಶ ಇಲ್ಲ. ಆದರೆ ಜೆಡಿಎಸ್ ನ ಶಾಸಕರಿಗೆ, ಕಾರ್ಯಕರ್ತರಿಗೆ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಉದ್ದೇಶವಿದೆ. ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ದೇವೇಗೌಡರ ನಂತರ ಕುಮಾರಸ್ವಾಮಿ ಹೇಗೆ ಪಕ್ಷ ಕಟ್ಟಿ ಮುಂದುವರೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುಂದುವರೆಸುತ್ತಾರೆ. ನಿಖಿಲ್ ಅವರಿಗೆ ಆ ಶಕ್ತಿ ಇದೆ. ಆಗಸ್ಟ್ ನಲ್ಲಿ ಮೈಸೂರು ಜಿಲ್ಲೆಯಲ್ಲಿ ನಿಖಿಲ್ ಪ್ರವಾಸ ಮಾಡಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

The post ಸಹಕಾರ ಸಚಿವ ರಾಜಣ್ಣಗೆ ಯಾವುದೇ ನೈತಿಕತೆ ಇಲ್ಲ; ಶಾಸಕ ಜಿ ಡಿ ಹರೀಶ್ ಗೌಡ ಹೇಳಿಕೆ! appeared first on Good News 24x7.

]]>