COVID Archives - Good News 24x7 https://www.goodnews24x7.com/tag/covid/ Kannada Fri, 06 Mar 2026 11:36:25 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg COVID Archives - Good News 24x7 https://www.goodnews24x7.com/tag/covid/ 32 32 ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! https://www.goodnews24x7.com/the-reason-why-young-people-are-dying-is-not-the-covid-vaccine-at-all-doctor-reveals-the-real-truththe-reason-why-young-people-are-dying-is-not-the-covid-vaccine-at-all-doctor-reveals-the-real-truth/ Fri, 06 Mar 2026 11:35:34 +0000 https://www.goodnews24x7.com/?p=8713 ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ…

The post ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! appeared first on Good News 24x7.

]]>

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವೆ. ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಹಾಗಾದರೆ ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ? ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು? ಎಂಬುದನ್ನು ತಿಳಿದುಕೊಳ್ಳಿ.

ಇತ್ತೀಚಿಗೆ ಭಾರತದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ರೀತಿಯ ಮರಣಗಳಿಗೆ ಕೋವಿಡ್- 19 ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಏನೂ ಅರಿಯದ ಜನ ಇದನ್ನು ಸತ್ಯ ಎಂದು ನಂಬಿದ್ದಾರೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಂಯುಕ್ತವಾಗಿ ನಡೆಸಿದ ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ.

ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ?
ಡಾ. ನರೇಂದ್ರ ಕೆ ಶೆಟ್ಟಿ ಹೇಳುವ ಪ್ರಕಾರ, ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಕೋವಿಡ್- 19 ಲಸಿಕೆ ಮತ್ತು ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಮರಣಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂಬುದನ್ನು ವಿಶ್ಲೇಷಿಸಿದೆ. ಬದಲಾಗಿ, ಯುವಜನರಲ್ಲಿ ಕಾಣಿಸಿಕೊಳ್ಳುವ ಆಕಸ್ಮಿಕ ಹೃದಯಾಘಾತ ಮತ್ತು ಹಠಾತ್ ಆಗಿ ಸಂಭವಿಸುವ ಸಾವು (Sudden Cardiac Death – SCD) ಅನೇಕ ಕಾರಣಗಳಿಂದ ಉಂಟಾಗುತ್ತಿರಬಹುದು ಎಂದು ವಿವರಿಸಿದೆ. ಪಾಶ್ಚಾತ್ಯ ದೇಶಗಳಲ್ಲಿ ನಡೆದ ಹಲವು ಅಧ್ಯಯನಗಳು ಹೃದಯ ಸ್ನಾಯುಕೋಶದ ರೋಗಗಳು (ಕಾರ್ಡಿಯೊಮಯೋಪಥಿಗಳು) ಮತ್ತು ಹೃದಯದ ವಿದ್ಯುದ್ವಿಚಲನ ವ್ಯತ್ಯಯಗಳು (ಅರಿದಮಿಯಾಸ್) ಯುವಜನತೆಯಲ್ಲಿ ಹೆಚ್ಚುತ್ತಿರುವ ಪ್ರಮುಖ ಕಾರಣಗಳೆಂದು ಗುರುತಿಸಿವೆ. ಆದರೆ ಭಾರತೀಯ ಪರಿಸ್ಥಿತಿಯಲ್ಲಿ ಇಂತಹ ಸಮಗ್ರ ಅಧ್ಯಯನಗಳ ಕೊರತೆ ಇತ್ತು. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದಲೇ AIIMS– ICMR ಅಧ್ಯಯನವನ್ನು ಕೈಗೆತ್ತಿಕೊಳ್ಳಲಾಯಿತು. ಅಧ್ಯಯನದಲ್ಲಿ ಪ್ರಾಥಮಿಕವಾಗಿ ಕಂಡುಬಂದ ಮಾಹಿತಿಗಳು, ಬದಲಾಯಿಸಲಾಗದ ಕಾರಣಗಳ ಜೊತೆಗೆ ಬದಲಾಯಿಸಬಹುದಾದ ಜೀವನಶೈಲಿ ಅಂಶಗಳು ಯುವಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು?
ಧೂಮಪಾನ, ಮದ್ಯಪಾನ, ದೈಹಿಕ ಚಟುವಟಿಕೆಯ ಕೊರತೆ, ಅಸಮರ್ಪಕ ನಿದ್ರೆ ಮತ್ತು ನಿರಂತರ ಮಾನಸಿಕ ಒತ್ತಡವು ಯುವಜನರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತವೆ. ಮದ್ಯಪಾನ ಮತ್ತು ಧೂಮಪಾನವು ಕೊರೊನರಿ ಆರ್ಟರಿ ರೋಗ, ಹೃದಯಾಘಾತ (ಮೈಕಾರ್ಡಿಯಲ್ ಇನ್ಫಾರ್ಕ್ಷನ್) ಮತ್ತು ಹೃದಯ ಬಡಿತದ ಅಸಮತೋಲನಗಳಿಗೆ ಕಾರಣವಾಗುತ್ತವೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ದೀರ್ಘಕಾಲದ ಕೆಲಸ, ನಿರ್ದಿಷ್ಟ ಸಮಯವನ್ನು ಕೆಲಸಕ್ಕೆ ಇಡದಿರುವುದು ಮತ್ತು ಕೆಲಸದ ಒತ್ತಡವು ಹೃದಯ ರಕ್ತನಾಳ ಸಂಬಂಧಿತ ಸಂಕೀರ್ಣತೆಗಳನ್ನು ಉಂಟುಮಾಡುತ್ತವೆ. ಮಧ್ಯವಯಸ್ಕರಿಗೆ ಹೋಲಿಸಿದರೆ, ಹೃದಯಾಘಾತಕ್ಕೆ ಒಳಗಾಗುವ ಯುವ ವಯಸ್ಕರು ಹೆಚ್ಚು ಮಾನಸಿಕ ಒತ್ತಡವನ್ನು ಅನುಭವಿಸಿರುವುದು ವರದಿಯಲ್ಲಿ ಬಹಿರಂಗವಾಗಿದ್ದು, ಒತ್ತಡ ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ದಾರಿ ಮಾಡಿಕೊಡುವ ಪ್ರಮುಖ ಕಾರಣ ಎಂಬುದು ತಿಳಿದು ಬಂದಿದೆ.

ಲಸಿಕೆಗಳ ಕುರಿತು ಹರಡುತ್ತಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಮಾತ್ರವಲ್ಲದೆ, ತಡೆಗಟ್ಟಬಹುದಾದ ಅಪಾಯಕಾರಕ ಅಂಶಗಳತ್ತ ಗಮನ ಹರಿಸಬೇಕಾಗಿದೆ. ಅದಕ್ಕಾಗಿಯೇ ಯುವಜನರಲ್ಲಿ ಮುಂಚಿತ ತಪಾಸಣೆ, ಆರೋಗ್ಯಕರ ಜೀವನಶೈಲಿಯ ಅಳವಡಿಕೆ, ಸಕಾರಾತ್ಮಕ ಕೆಲಸದ ವಾತಾವರಣ ನಿರ್ಮಾಣ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಅಕಾಲಿಕ ಮರಣಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಭಾರತದಲ್ಲಿ ಯುವ ವಯಸ್ಕರ ಆಕಸ್ಮಿಕ ಮರಣಗಳ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಇನ್ನಷ್ಟು ಸಂಶೋಧನೆಗಳ ಅಗತ್ಯವಿದೆ. ಇಂತಹ ಅಧ್ಯಯನಗಳ ಆಧಾರದ ಮೇಲೆ ರೂಪುಗೊಳ್ಳುವ ಸ್ಪಷ್ಟ ಉತ್ತರ ಯುವಜನರ ಅಮೂಲ್ಯ ಜೀವಗಳನ್ನು ರಕ್ಷಿಸಲು ಸಹಾಯಕವಾಗಬಹುದು.

 

The post ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! appeared first on Good News 24x7.

]]>
ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ https://www.goodnews24x7.com/kovi%e1%b8%8d-bagge-janaru-yavude-ata%e1%b9%85kapa%e1%b8%8duva-agatyavilla-sie%e1%b9%81-siddaramayya-mukhyamantri-siddaramayya-avaru-rajyadalli-kovi%e1%b8%8d-paristhiti-kuritu-na%e1%b8%8desida-sab/ Thu, 12 Jun 2025 05:33:33 +0000 https://www.goodnews24x7.com/?p=4330 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ.…

The post ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

The post ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>
ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. https://www.goodnews24x7.com/covid-subtype-not-dangerous-dinesh-gundu-rao/ Mon, 26 May 2025 06:42:29 +0000 https://www.goodnews24x7.com/?p=4081 ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ.…

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>

ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ. ಯಾರಿಗೂ ಗಂಭೀರ ಸ್ವರೂಪದ ರೋಗ ಲಕ್ಷಣ ಕಂಡುಬಂದಿಲ್ಲ. ಮುಂದಿನ ಮೂರು, ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆತಂಕದ ವಾತಾವರಣ ಇಲ್ಲ, ಮೊದಲ ಮತ್ತು ಎರಡನೇ ಹಂತದ ಕೋವಿಡ್ ಪರಿಸ್ಥಿತಿ ಈಗಿಲ್ಲ ಎಂದು ಹೇಳಿದ್ದಾರೆ.

 

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ಗಳು:


RAT = 2500
RNA extraction kits =130000
VTM= 200000
RTPCR kits = 5000 Procuring

#Bengaluru #Covid #DineshGunduRao #Health #Minister #HealthMinister #government #dangerous #Covid19 #pregnantwomen #pregnant #women #hospitals #Bengaluru #karnataka #mysore #goodnewskannada #symptoms #serious

ಶಾಲಾ, ಕಾಲೇಜುಗಳು ಆರಂಭವಾಗುತ್ತಿದ್ದು, ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಿ ತೀರ್ಮಾನಿಸುತ್ತೇವೆ. ಸದ್ಯ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಟೆಸ್ಟಿಂಗ್ಗೆ ಸೂಚನೆ ನೀಡಲಾಗಿದೆ. ಟೆಸ್ಟಿಂಗ್ ಕಿಟ್ಗಳು ಎರಡು ದಿನದೊಳಗೆ ಪೂರೈಕೆಯಾಗಲಿದೆ. ಸಾರಿ, ಐಎಲ್ಐ ಪ್ರಕರಣಗಳು, ವಯೋವೃದ್ಧರು, ಗರ್ಭಿಣಿಯರಿಗೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.


ಸೋಂಕಿನಿಂದ ನಿನ್ನೆ ಒಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಅವರಿಗೆ 84 ವರ್ಷ ಆಗಿತ್ತು. ಒಂದು ವರ್ಷದಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ನಾನಾ ಆರೋಗ್ಯ ಸಮಸ್ಯೆ ಇತ್ತು. ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಡಿಟ್ ನಡೆಸಲು ತಿಳಿಸಲಾಗಿದೆ ಎಂದರು.ಅಗತ್ಯ ಟೆಸ್ಟಿಂಗ್ ಕಿಟ್ ಲಭ್ಯವಿದೆ: ರಾಜ್ಯದಲ್ಲಿ ಅಗತ್ಯ ಕೋವಿಡ್-19 ಟೆಸ್ಟಿಂಗ್ ಕಿಟ್ಗಳ ಲಭ್ಯತೆಯಿದೆ. SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.


ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ಗಳನ್ನು ಖರೀದಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>
ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! https://www.goodnews24x7.com/kodimath-swamijis-explosive-prediction-about-cloudburst/ Sat, 24 May 2025 11:30:21 +0000 https://www.goodnews24x7.com/?p=4063 ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ‌ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು…

The post ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! appeared first on Good News 24x7.

]]>

ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸುವ ಸಾಧ್ಯತೆ ಇದ್ದು, ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದು ಸ್ವಾಮೀಜಿ ಎಚ್ಚರಿಸಿದರು.

ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ.‌ ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’. ಅನೇಕ ರಾಜಕೀಯ ಮುಖಂಡರಿಗೆ ಸಾವು, ನೋವು ಹಾಗೂ ಜೀವ ಭಯವಿದೆ ಎಂದು ಸ್ವಾಮೀಜಿ ಸ್ಫೋಟಕ‌ ವಿಚಾರವನ್ನು ಹೊರ ಹಾಕಿದರು.

ರಾಜ್ಯ ರಾಜಕಾರಣದ ಬಗ್ಗೆ – ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸಂಕ್ರಾಂತಿಯ ಭವಿಷ್ಯ ನೋಡಿಕೊಂಡು ಮುಂದೆ ಏನಾಗುತ್ತೆ‌ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದರು.

The post ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! appeared first on Good News 24x7.

]]>
ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!! https://www.goodnews24x7.com/%e0%b2%95%e0%b3%8b%e0%b2%b5%e0%b2%bf%e0%b2%a1%e0%b3%8d-19-%e0%b2%a8%e0%b2%82%e0%b2%a4%e0%b2%b0-hmpv-%e0%b2%b9%e0%b3%8a%e0%b2%b8-%e0%b2%b5%e0%b3%88%e0%b2%b0%e0%b2%b8%e0%b3%8d-%e0%b2%86%e0%b2%a4/ Fri, 03 Jan 2025 11:33:36 +0000 https://www.goodnews24x7.com/?p=1488 ಕೋವಿಡ್ ವೈರಸ್ ಜಗತ್ತನ್ನು ಕಾಡಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಮತ್ತೊಂದು ವೈರಸ್ ವೇಗವಾಗಿ ಹರಡುತ್ತಿರುವ ಕುರಿತು ವರದಿಯಾಗಿದೆ. ಅದುವೇ, ‘ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್’ (human metapneumo virus or HMPV) ಈ ವರ್ಷ ಆರಂಭದಲ್ಲಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ…

The post ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!! appeared first on Good News 24x7.

]]>

ಕೋವಿಡ್ ವೈರಸ್ ಜಗತ್ತನ್ನು ಕಾಡಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಮತ್ತೊಂದು ವೈರಸ್ ವೇಗವಾಗಿ ಹರಡುತ್ತಿರುವ ಕುರಿತು ವರದಿಯಾಗಿದೆ. ಅದುವೇ, ‘ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್’ (human metapneumo virus or HMPV) ಈ ವರ್ಷ ಆರಂಭದಲ್ಲಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ವೈರಸ್ ಇದು. ನೆರೆಯ ರಾಷ್ಟ್ರಗಳು ಈ ವೈರಸ್ ಪತ್ತೆ ಮಾಡುವ ನಿಟ್ಟಿನಲ್ಲಿ ಸ್ಕ್ರೀನಿಂಗ್ ಹಾಗೂ ಪ್ರತ್ಯೇಕತೆಯ ಪ್ರೋಟೋಕಾಲ್ಗಳನ್ನು ಘೋಷಿಸಲು ಮುಂದಾಗಿವೆ.
ಜೊತೆಗೆ ಚೀನಾದ ಉತ್ತರ ಪ್ರಾಂತ್ಯಗಳಲ್ಲಿ 14 ವರ್ಷದೊಳಗಿನ ಮಕ್ಕಳು ಹೆಚ್ಚಿನ ಸಂಖ್ಯೆ ಈ ವೈರಸ್ನ ಸೋಂಕಿಗೆ ಒಳಗಾಗಿದ್ದಾರೆ. ಇದರ ಬೆನ್ನಲ್ಲೆ ಹೆಚ್ಚುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಮತ್ತು ಪತ್ತೆ ಮಾಡಲು ಚೀನಾ ಸರ್ಕಾರವು ಸ್ಕ್ರೀನಿಂಗ್ ಹಾಗೂ ಪ್ರತ್ಯೇಕ ಪ್ರೋಟೋಕಾಲ್ಗಳು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಅಧಿಕಾರಿಗಳು ಈ ವೈರಸ್ ಹರಡುವಿಕೆ ನಿಯಂತ್ರಿಸಲು ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಜನರು ಕಿಕ್ಕಿರಿದು ಸೇರಿದ್ದಾರೆ. ಈ ಕುರಿತ ವಿಡಿಯೋಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಹರಿದಾಡುತ್ತಿವೆ.
ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಎಂಬುದು ಉಸಿರಾಟಕ್ಕೆ ಸಂಬಂಧಿಸಿದ ವೈರಸ್ ಆಗಿದ್ದು, ಹೆಚ್ಚಿನ ವ್ಯಕ್ತಿಗಳಲ್ಲಿ ಕಡಿಮೆ ತೀವ್ರತೆಯ (ಶೀತ ತರಹದ ಲಕ್ಷಣ) ರೋಗಲಕ್ಷಣಗಳನ್ನು ಕಂಡುಬರುತ್ತದೆ. ಆದರೆ, ಮಕ್ಕಳು, ವೃದ್ಧರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಬ್ರಾಂಕೈಟಿಸ್ ಮತ್ತು ನ್ಯುಮೋನಿಯಾದಂತಹ ತೀವ್ರ ಲಕ್ಷಣಗಳು ಕಾಣಿಸುತ್ತವೆ.

ರಾಯಿಟರ್ಸ್ ವರದಿ ಪ್ರಕಾರ, ಚೀನಾದಲ್ಲಿ HMPV ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿವೆ. ಚೀನಾ ದೇಶವು ಇನ್ಫ್ಲುಯೆನ್ಸ A, ಮೈಕೋಪ್ಲಾಸ್ಮಾ ನ್ಯುಮೋನಿಯಾ, ರೈನೋವೈರಸ್ ಮತ್ತು COVID-19 ರೀತಿಯ ದೀರ್ಘಕಾಲದ ಪ್ರಕರಣಗಳಂತಹ ಇತರ ಸೋಂಕುಗಳ ಒಂದೇ ಸಮಯದಲ್ಲಿ ಏಕಾಏಕಿ ಹರಡಿವೆ. ಈ ಸೋಂಕುಗಳಂತೆಯೇ HMPV ವೈರಸ್ ವೇಗವಾಗಿ ಹಬ್ಬುತ್ತಿದೆ. ಇದರಿಂದ ಉತ್ತರ ಚೀನಾದಲ್ಲಿ ಆರೋಗ್ಯ ಸಂಪನ್ಮೂಲಗಳ ಕೊರತೆ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಈ ವೈರಸ್ನ ಲಕ್ಷಣಗಳೇನು?:
• ಅಮೆರಿಕದ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ತಿಳಿಸುವ ಪ್ರಕಾರ, HMPV ವೈರಸ್ ರೋಗಲಕ್ಷಣಗಳು ಚಳಿಗಾಲದಲ್ಲಿ ಸಾಮಾನ್ಯವಾದ ಇತರ ವೈರಲ್ ಸೋಂಕುಗಳಂತೆಯೇ ಇರುತ್ತವೆ.
• ಜ್ವರ, ಕೆಮ್ಮು, ಮೂಗು ಕಟ್ಟುವಿಕೆ, ಉಸಿರಾಟದ ಸಮಸ್ಯೆಯಾಗುತ್ತದೆ.
• ಸೋಂಕಿನ ಕ್ಲಿನಿಕಲ್ ರೋಗಲಕ್ಷಣಗಳು ಹೆಚ್ಚಾಗುತ್ತವೆ, ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ವೈರಸ್ ಉಸಿರಾಟದ ಸೋಂಕುಗಳಿಗೂ ಕಾರಣವಾಗುವಂತಹ ಇತರ ವೈರಸ್ಗಳಂತೆ ಇದೆ.
• ಸೋಂಕಿನ ತೀವ್ರತೆಯು 2 ರಿಂದ 6 ದಿನಗಳವರೆಗೆ ಇರುತ್ತದೆ. ಸೋಂಕಿಗೆ ಒಳಗಾದವರಲ್ಲಿ ಮೂರರಿಂದ ಆರು ದಿನಗಳ ಬಳಿಕ ಈ ವೈರಸ್ನ ರೋಗಲಕ್ಷಣಗಳನ್ನು ಕಂಡು ಬರುತ್ತವೆ.
• ಅನಾರೋಗ್ಯದ ಸಮಯದಲ್ಲಿ ವೈರಸ್ನ ಅದರ ತೀವ್ರತೆ ಅವಲಂಬಿಸಿ ಬದಲಾಗುವ ಸಾಧ್ಯತೆಯು ಇದೆ.
HMPV ವೈರಸ್ ತಡೆಯುವುದು ಹೇಗೆ?:
• ಹೊರಗಡೆ ಹೋಗಿ ಮನೆಗೆ ವಾಪಸ್ ಬಂದಾಗ ಸೋಪು ಅಥವಾ ಸಾಬೂನಿನಿಂದ ಕೈ ತೊಳೆಯಿರಿ.
• ನಿಮ್ಮ ಕೈಗಳಿಂದ ಆಗಾಗ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದನ್ನು ತಪ್ಪಿಸಬೇಕು.
• ಸೋಂಕಿಗೆ ಒಳಗಾದವರೊಂದಿಗೆ ಅಂತರ ಕಾಯ್ದುಕೊಳ್ಳುವುದು ಉತ್ತಮ. ನೀವು ವೈರಸ್ನ ಲಕ್ಷಣಗಳನ್ನು ಹೊಂದಿದ್ದರೆ, ಜನರ ಗುಂಪಿನಲ್ಲಿ ಬೆರೆಯಬೇಡಿ.
• ಕೆಮ್ಮುವಾಗ ಹಾಗೂ ಸೀನುವಾಗ ಕೈ, ಬಾಯಿಯನ್ನು ಮುಚ್ಚಿಕೊಳ್ಳಿ.
• ಈ ಸೋಂಕಿತರ ಬಳಸಿದ ಕಪ್, ತಟ್ಟೆ ಹಾಗೂ ಪಾತ್ರೆಗಳ ಉಪಯೋಗಿಸಬೇಡಿ.
• ಸೋಂಕಿತರು ಅನಾರೋಗ್ಯದ ವೇಳೆಯಲ್ಲಿ ಮನೆಯಲ್ಲೇ ಇರುವುದು ಒಳ್ಳೆಯದು.
ಚೀನಾ ಸರ್ಕಾರ & WHO ಪ್ರತಿಕ್ರಿಯೆ: ಐದು ವರ್ಷಗಳ ಹಿಂದೆ ಕೋವಿಡ್-19 ಏಕಾಏಕಿ ಹರಡಿದ್ದ ವೇಳೆಯಲ್ಲಿ ಉಂಟಾದ ಪರಿಸ್ಥಿತಿ ಪುನರಾವರ್ತನೆಯಾಗದಂತೆ ತಡೆಯುವ ಪ್ರಯತ್ನದಲ್ಲಿ, ಚೀನಾ ಸರ್ಕಾರವು ಈ ವೈರಸ್ನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ. ಈ ವ್ಯವಸ್ಥೆ ಹೊಸ ಸಾಂಕ್ರಾಮಿಕ ಬೆದರಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಪತ್ತೆಹಚ್ಚಲು ಮತ್ತು ಪ್ರತಿಕ್ರಿಯಿಸುವ ಗುರಿ ಹೊಂದಿದೆ.
ಚೀನಾದ ಆರೋಗ್ಯ ಅಧಿಕಾರಿಗಳು ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಎರಡೂ ಹೊಸ ಸಾಂಕ್ರಾಮಿಕ ರೋಗಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿವೆ. WHO ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿಲ್ಲ, ಜೊತೆಗೆ HMPV ಕುರಿತು ನಿರ್ದಿಷ್ಟ ಎಚ್ಚರಿಕೆಗಳನ್ನು ನೀಡಿಲ್ಲ.

The post ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!! appeared first on Good News 24x7.

]]>