CTRavi Archives - Good News 24x7 https://www.goodnews24x7.com/tag/ctravi/ Kannada Fri, 20 Dec 2024 06:44:04 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg CTRavi Archives - Good News 24x7 https://www.goodnews24x7.com/tag/ctravi/ 32 32 ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ https://www.goodnews24x7.com/yava-he%e1%b9%87%e1%b9%87umakka%e1%b8%b7u-intaha-aropaga%e1%b8%b7a-bagge-su%e1%b8%b7%e1%b8%b7u-duru-ko%e1%b8%8dodilla-sie%e1%b9%81-siddaramayya-ctravi-laxmi-hebbalkar-samanyavagi-yava-he/ Fri, 20 Dec 2024 06:44:04 +0000 https://www.goodnews24x7.com/?p=1204 ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.…

The post ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ. ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ.ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು, ಸಿಟಿ ರವಿಯವರು ಕೆಟ್ಟ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ಕೆಟ್ಟ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

The post ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>