D. K. Shivakumar Archives - Good News 24x7 https://www.goodnews24x7.com/tag/d-k-shivakumar/ Kannada Fri, 16 May 2025 11:31:48 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg D. K. Shivakumar Archives - Good News 24x7 https://www.goodnews24x7.com/tag/d-k-shivakumar/ 32 32 ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. https://www.goodnews24x7.com/preparations-for-greater-bengaluru-elections-in-the-next-4-months-dcm-d-k-shivakumar/ Fri, 16 May 2025 11:31:38 +0000 https://www.goodnews24x7.com/?p=3893 ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ…

The post ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. appeared first on Good News 24x7.

]]>

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

The post ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್. appeared first on Good News 24x7.

]]>
ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ https://www.goodnews24x7.com/one-lie-a-day-one-price-hike-a-month-union-minister-kumaraswamy-lashes-out-at-the-government/ Tue, 01 Apr 2025 05:25:28 +0000 https://www.goodnews24x7.com/?p=2947 ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…

The post ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ appeared first on Good News 24x7.

]]>

ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!

ನೆಪ: ಪಂಚ ಗ್ಯಾರೆಂಟಿ! ದುರುದ್ದೇಶ: ಜನರ ಲೂಟಿ!!
ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ!! ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ!

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ #ದರಬೀಜಾಸುರ ಕಾಂಗ್ರೆಸ್ ಸರಕಾರ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ #GarbageCess ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಅಂತ ಕುಮಾರಸ್ವಾಮಿ ಟ್ವೀಟ್

The post ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ appeared first on Good News 24x7.

]]>
ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !! https://www.goodnews24x7.com/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%95%e0%b2%b2%e0%b2%be%e0%b2%b5%e0%b2%bf%e0%b2%a6%e0%b2%b0%e0%b2%bf%e0%b2%97%e0%b3%86-%e0%b2%97%e0%b3%8c%e0%b2%b0%e0%b2%b5-%e0%b2%95%e0%b3%8a/ Thu, 06 Mar 2025 11:23:33 +0000 https://www.goodnews24x7.com/?p=2639 ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…

The post ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !! appeared first on Good News 24x7.

]]>

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಆದ ಗೌರವ, ಸ್ಥಾನಮಾನಗಳಿವೆ. ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು, ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ. ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ…ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಮಾತನಾಡಿದರು .

 

ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟ ಪಡಬೇಕಿದೆ. ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ ಎಂದಿರುವ ರೂಪ ಅಯ್ಯರ್, ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು, ಪ್ರೋತ್ಸಾಹಿಸಿ. ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ. ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ .ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು ರೂಪ ಅಯ್ಯರ್ ಒತ್ತಾಯಿಸಿದ್ದಾರೆ.

The post ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !! appeared first on Good News 24x7.

]]>
ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ https://www.goodnews24x7.com/presentacion-de-nominaciones-del-cp-yogeshwar-hoy-a-las-11-a-m/ Thu, 24 Oct 2024 04:09:44 +0000 https://www.goodnews24x7.com/?p=909 ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…

The post ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ appeared first on Good News 24x7.

]]>

ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ ಆಗಬಹುದು. ಶತ್ರುಗಳು ಸ್ನೇಹಿತರೂ ಆಗಬಹುದು. ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ. ಅದೇ ರೀತಿ ರಾತ್ರಿ ಕಳೆದು ಬೆಳಗಾಗೋದ್ರೊಳಗೆ ಚನ್ನಪಟ್ಟಣದ ರಾಜಕೀಯ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ. ಯೋಗೇಶ್ವರ್‌ಗೆ ಬೈ ಎಲೆಕ್ಷನ್ ಯೋಗ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಯೋಗೇಶ್ವರ್‌ಗೆ ಟಿಕೆಟ್‌ ನೀಡಿದೆ. ಈ ಮೂಲಕ ಸೈನಿಕ ಮಿನಿಯುದ್ಧದ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೈ ಎಲೆಕ್ಷನ್‌ಗೆ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

The post ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ appeared first on Good News 24x7.

]]>